Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:8 - ಕನ್ನಡ ಸಮಕಾಲಿಕ ಅನುವಾದ

8 ನೀನು ಬಲಿಷ್ಠನಾಗಿದ್ದರೂ, ಜಮೀನು ಬಹಳವಾಗಿದ್ದರೂ, ಗೌರವಕ್ಕೆ ಯೋಗ್ಯನಾದ ಮನುಷ್ಯನಾಗಿ ಊರಲ್ಲಿ ವಾಸಿಸಿದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬಲಿಷ್ಠನಾದರೆ ದೇಶವೇ ಅವನದು, ಅಲ್ಲಿ ಸನ್ಮಾನ ಯೋಗ್ಯನಾಗಿ ವಾಸಿಸತಕ್ಕವನು ಅವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿನ್ನನಿಸಿಕೆಯಂತೆ ಬಲಿಷ್ಠನಿಗೆ ನಾಡಿನೊಡೆತನ ಘನವಂತನಿಗೇ ಅಲ್ಲಿ ಮನೆತನ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬಲಿಷ್ಟನಾದರೆ ದೇಶವೇ ಅವನದು, ಅಲ್ಲಿ ಸನ್ಮಾನಯೋಗ್ಯನಾಗಿ ವಾಸಿಸತಕ್ಕವನು ಅವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೋಬನೇ, ಬಲಿಷ್ಠನಾಗಿದ್ದ ನಿನ್ನಲ್ಲಿ ಬೇಸಾಯಕ್ಕೆ ಬಹಳ ಭೂಮಿಯಿದೆ. ಅಲ್ಲದೆ ಜನರು ಸಹ ನಿನ್ನನ್ನು ಗೌರವಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:8
10 ತಿಳಿವುಗಳ ಹೋಲಿಕೆ  

ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು, ಸುಳ್ಳು ಬೋಧಿಸುವ ಪ್ರವಾದಿಯು ಬಾಲವಾಗಿರುವನು.


ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವಂತೆ ಆಡಳಿತಗಾರರು ಉಡುಗೊರೆಗಳನ್ನು ಕೇಳುತ್ತಾರೆ. ನ್ಯಾಯಾಧಿಪತಿಗಳು ಲಂಚವನ್ನು ತೆಗೆದುಕೊಳ್ಳುತ್ತಾರೆ. ಶಕ್ತಿಶಾಲಿ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರೆಲ್ಲರೂ ಒಟ್ಟಾಗಿ ಒಳಸಂಚುಮಾಡುತ್ತಾರೆ.


ಸೇನಾಪತಿ, ಅಧಿಕಾರಿ, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆದುಬಿಡುವೆನು.


ಮನುಷ್ಯರು ಅಸಹ್ಯವಾದದ್ದನ್ನು ಗೌರವಿಸುವಾಗ, ಆ ದುಷ್ಟರು ಎಲ್ಲಾ ಕಡೆಗಳಲ್ಲಿಯೂ ಸ್ವತಂತ್ರವಾಗಿ ಅಲೆದಾಡುತ್ತಿರುವರು.


ನಾನು ದೊಡ್ಡ ಸಮೂಹಕ್ಕೆ ಹೆದರಿದೆನೋ? ಕುಲಗಳ ಅವಹೇಳನಕ್ಕೆ ಕಳವಳಗೊಂಡರೂ, ಬಾಗಿಲಿನಿಂದ ಹೊರಗೆ ಹೋಗದೆ ಮೌನವಾಗಿದ್ದೆನೋ?


ನೀವು ದೇವರಿಗೆ ಪಕ್ಷಪಾತವನ್ನು ತೋರಿಸುವಿರೋ? ದೇವರ ಪರವಾಗಿ ನೀವು ವಾದಿಸುವಿರೋ?


ಲೋಕವು ಕೆಟ್ಟವರ ಕೈವಶವಾಗಿದೆ; ನ್ಯಾಯಾಧಿಪತಿಗಳ ಮುಖಕ್ಕೆ ಮುಸುಕುಹಾಕಲಾಗಿದೆ; ಇದನ್ನು ಅನುಮತಿಸಿದವರು ದೇವರಲ್ಲದೆ ಮತ್ತೆ ಯಾರು?


ದೇವರು ಯಾಜಕರನ್ನು ಅಧಿಕಾರದಿಂದ ತೆಗೆದುಹಾಕುತ್ತಾರೆ; ಪ್ರಧಾನರನ್ನು ಕೆಡವಿಬಿಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು