Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 23:10 - ಕನ್ನಡ ಸಮಕಾಲಿಕ ಅನುವಾದ

10 ಆದರೆ ದೇವರು ನಾನು ಹೋಗುವ ಮಾರ್ಗವನ್ನು ತಿಳಿದಿದ್ದಾರೆ; ದೇವರು ನನ್ನನ್ನು ಪರೀಕ್ಷಿಸಿದಾಗ, ನಾನು ಚೊಕ್ಕ ಬಂಗಾರವಾಗಿ ಹೊರಗೆ ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆತನಾದರೊ ಬಲ್ಲ ನಾನು ಹಿಡಿವ ದಾರಿಯನು ಆತ ನನ್ನನು ಶೋಧಿಸಿದರೆ ಚೊಕ್ಕ ಬಂಗಾರವಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ನನ್ನ ಪ್ರತಿಯೊಂದು ಹೆಜ್ಜೆಯನ್ನೂ ದೇವರು ಬಲ್ಲನು. ಆತನು ನನ್ನನ್ನು ಪರೀಕ್ಷಿಸಿ ನೋಡಿದಾಗ ನಾನು ಅಪ್ಪಟ ಬಂಗಾರದಂತಿರುವುದನ್ನು ಕಂಡುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 23:10
32 ತಿಳಿವುಗಳ ಹೋಲಿಕೆ  

ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.


ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.


ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


ದೇವರೇ, ನೀವು ನಮ್ಮನ್ನು ಪರಿಶೋಧಿಸಿದ್ದೀರಿ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶುದ್ಧೀಕರಿಸಿದ್ದೀರಿ.


ಸೋಸುವುದಕ್ಕೆ ಬೆಳ್ಳಿಗೆ ಕುಲುಮೆ ಪುಟ, ಬಂಗಾರಕ್ಕೆ ಆವಿಗೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರಿಶೋಧಿಸುತ್ತಾರೆ.


ನೀವು ನನ್ನ ಹೃದಯವನ್ನು ಶೋಧಿಸಿದರೂ, ನೀವು ರಾತ್ರಿಯಲ್ಲಿ ನನ್ನನ್ನು ಪರೀಕ್ಷಿಸಿ ವಿಚಾರಿಸಿದರೂ, ನಾನು ಕೆಟ್ಟಯೋಜನೆ ಮಾಡಿಕೊಳ್ಳಲಿಲ್ಲವೆಂದು ನೀವು ಕಂಡುಕೊಳ್ಳುವಿರಿ; ನನ್ನ ಬಾಯಿಯೂ ಅತಿಕ್ರಮಿಸುವುದಿಲ್ಲವೆಂದು ನಾನು ತೀರ್ಮಾನಿಸಿಕೊಂಡಿದ್ದೇನೆ.


ಅಬ್ರಹಾಮನು ಪರೀಕ್ಷೆಗೆ ಒಳಗಾದಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.


ಯೆಹೋವ ದೇವರು ನೀತಿವಂತರ ಮಾರ್ಗವನ್ನು ಅರಿತಿದ್ದಾರೆ; ಆದರೆ ದುಷ್ಟರ ಮಾರ್ಗವು ನಾಶಕ್ಕೆ ನಡೆಸುವುದು.


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ತಗ್ಗಿಸಿ, ನೀವು ದೇವರ ಆಜ್ಞೆಗಳನ್ನು ಕಾಪಾಡುವಿರೋ ಇಲ್ಲವೋ ಎಂದು ನಿಮ್ಮ ಹೃದಯವನ್ನು ಪರೀಕ್ಷಿಸುವುದಕ್ಕೆ ನಿಮ್ಮನ್ನು ನಡೆಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಿರಿ.


“ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ,” ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು.


ಏಕೆಂದರೆ, ಅವನು ತನ್ನ ಮಕ್ಕಳಿಗೂ ಅವನ ತರುವಾಯ ಅವನ ಮನೆಯವರಿಗೂ ಯೆಹೋವ ದೇವರ ಮಾರ್ಗವನ್ನು ಕೈಗೊಂಡು, ನೀತಿ ನ್ಯಾಯಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸುವನು. ಆಗ ಯೆಹೋವ ದೇವರಾದ ನಾನು ಅಬ್ರಹಾಮನಿಗೆ ಹೇಳಿದ್ದು ನೆರವೇರುವದು,” ಎಂದುಕೊಂಡರು.


ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ, ಅವನಿಗೆ ನಷ್ಟವಾಗುವುದು, ಅವನಾದರೋ ರಕ್ಷಣೆಹೊಂದುವನು. ಆದರೆ ಬೆಂಕಿಯ ಜ್ವಾಲೆಗಳಿಂದ ತಪ್ಪಿಸಿಕೊಂಡವನ ಹಾಗಿರುವನು.


ಕರುಣೆ ತೋರಿಸಿರಿ, ಅನ್ಯಾಯವಾಗದಿರಲಿ; ಪುನಃ ಯೋಚಿಸಿರಿ, ನನ್ನ ಪ್ರಾಮಾಣಿಕತೆಯು ಪ್ರಶ್ನಿಸಲಾಗಿದೆ.


ಮನುಷ್ಯನನ್ನು ಪ್ರತಿ ಉದಯದಲ್ಲಿ ವಿಚಾರಿಸುತ್ತೀರಿ, ನೀವು ಕ್ಷಣಕ್ಷಣಕ್ಕೆ ಅವನನ್ನು ಪರೀಕ್ಷಿಸುವುದೇಕೆ?


ದೇವರ ಸನ್ನಿಧಿಯಲ್ಲಿ ಯಥಾರ್ಥವಂತನು ತಾನು ನಿರಪರಾಧಿ ಎಂದು ದೃಢಪಡಿಸಲು ಸಾಧ್ಯ; ಅಲ್ಲಿ ನನಗೆ ನನ್ನ ನ್ಯಾಯಾಧಿಪತಿಯಿಂದ ಶಾಶ್ವತವಾಗಿ ಬಿಡುಗಡೆಯಾಗುವುದು.


ಉತ್ತರದಲ್ಲಿ ಹುಡುಕಿದರೂ ದೇವರನ್ನು ನೋಡಲಾರೆನು; ದಕ್ಷಿಣದೆಡೆಗೆ ತಿರುಗಿಕೊಂಡರೂ ದೇವರು ಕಾಣಿಸುವುದಿಲ್ಲ.


ದೇವರು ನ್ಯಾಯದ ತಕ್ಕಡಿಯಲ್ಲಿ ನನ್ನನ್ನು ತೂಗಿ ನೋಡಲಿ; ನಾನು ನಿರ್ದೋಷಿ ಎಂದು ದೇವರು ತಿಳಿದುಕೊಳ್ಳಲಿ.


ದುಷ್ಟರ ಕೆಟ್ಟತನವು ಅಂತ್ಯವಾಗುವಂತೆಯೂ ನೀತಿವಂತರ ಭದ್ರತೆಯು ನಿಶ್ಚಯವಾಗುವಂತೆಯೂ ಮಾಡಿರಿ. ನೀತಿಯುಳ್ಳ ದೇವರೇ, ನೀವು ಹೃದಯವನ್ನೂ ಮನಸ್ಸನ್ನೂ ಪರಿಶೋಧಿಸುವವರಾಗಿದ್ದೀರಿ.


ಯೆಹೋವ ದೇವರು ನೀತಿವಂತನನ್ನು ಪರೀಕ್ಷಿಸುತ್ತಾರೆ, ಆದರೆ ಅವರು ದುಷ್ಟರನ್ನೂ ಹಿಂಸಾತ್ಮಕರನ್ನೂ ವಿರೋಧಿಸುತ್ತಾರೆ.


ಏಕೆಂದರೆ ನಾನು ಯೆಹೋವ ದೇವರ ಮಾರ್ಗಗಳನ್ನು ಅನುಸರಿಸಿದ್ದೇನೆ, ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.


ನಾನು ಅಪರಾಧಿಯಲ್ಲವೆಂದು ನಿಮಗೆ ಗೊತ್ತಿದೆ, ನಿಮ್ಮ ಕೈಯಿಂದ ತಪ್ಪಿಸುವವರು ಯಾರೂ ಇಲ್ಲವೆಂದೂ ನಿಮಗೆ ಗೊತ್ತಿದೆಯಲ್ಲವೇ?


ದೇವರು ನನ್ನ ಮಾರ್ಗಗಳನ್ನು ನೋಡಿ, ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುತ್ತಾರಲ್ಲವೆ?


‘ನಾನು ಶುದ್ಧನು, ನಾನು ತಪ್ಪುಮಾಡಲಿಲ್ಲ; ನಾನು ನಿರ್ದೋಷಿ, ನನ್ನಲ್ಲಿ ಏನೂ ಪಾಪವಿಲ್ಲ.


ಯೆಹೋವ ದೇವರೇ, ನೀವು ನನ್ನನ್ನು ತಿಳಿದಿದ್ದೀರಿ, ನನ್ನನ್ನು ನೋಡುತ್ತಾ ನಿಮ್ಮೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತೀರಿ, ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು