Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:7 - ಕನ್ನಡ ಸಮಕಾಲಿಕ ಅನುವಾದ

7 ಸಾಕಷ್ಟು ಬಟ್ಟೆ ಇಲ್ಲದೆ ಅವರು ರಾತ್ರಿಯನ್ನು ಕಳೆಯುತ್ತಾರೆ; ಚಳಿಯಲ್ಲಿ ಅವರಿಗೆ ಹೊದ್ದುಕೊಳ್ಳುವುದಕ್ಕೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೊದಿಕೆ ಇಲ್ಲದೆ ಬೆತ್ತಲೆಯಾಗಿ ರಾತ್ರಿಯನ್ನು ಕಳೆಯುವರು, ಚಳಿಗಾಲದಲ್ಲಿಯೂ ಅವರಿಗೆ ಬಟ್ಟೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬೆತ್ತಲೆಯಾಗಿ ಮಲಗುತ್ತಾರೆ ಬಟ್ಟೆಯಿಲ್ಲದೆ ಚಳಿಗಾಲವನ್ನು ಕಳೆಯುತ್ತಾರೆ ಹೊದಿಕೆಯಿಲ್ಲದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೊದಿಯುವದಕ್ಕಿಲ್ಲದೆ ಬೆತ್ತಲೆಯಾಗಿ ರಾತ್ರಿಯನ್ನು ಕಳೆಯುವರು, ಚಳಿಗಾಲದಲ್ಲಿಯೂ ಅವರಿಗೆ ಬಟ್ಟೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರು ರಾತ್ರಿಯ ಚಳಿಯಲ್ಲಿಯೂ ಹೊದಿಕೆಯಿಲ್ಲದೆ ಮಲಗುವರು; ಹಾಕಿಕೊಳ್ಳಲು ಅವರಲ್ಲಿ ಬಟ್ಟೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:7
11 ತಿಳಿವುಗಳ ಹೋಲಿಕೆ  

ನೀನು ಕಾರಣವಿಲ್ಲದೆ ನಿನ್ನ ಸಹೋದರರಿಂದ ಈಡು ತೆಗೆದುಕೊಂಡಿದ್ದೀ; ಅವರ ವಸ್ತ್ರಗಳನ್ನು ಸಹ ನೀನು ಕಿತ್ತುಕೊಂಡಿರುವೆ.


ಆ ಸಮಯದಲ್ಲಿ ಯೂದಾಯ, ಗಲಿಲಾಯ, ಸಮಾರ್ಯದಲ್ಲೆಲ್ಲಾ ಇದ್ದ ಸಭೆಯು ಸಮಾಧಾನ ಹೊಂದಿತು. ಸಭೆ ಬಲಗೊಂಡು ಪವಿತ್ರಾತ್ಮರಿಂದ ಧೈರ್ಯಹೊಂದಿ ಸಂಖ್ಯೆಯಲ್ಲಿ ವೃದ್ಧಿಸುತ್ತಾ, ಕರ್ತ ಯೇಸುವಿನ ಭಯದಲ್ಲಿ ಮುನ್ನಡೆಯಿತು.


ಹಸಿದವರಿಗೆ ಅನ್ನ ಕೊಡುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬಟ್ಟೆಯಿಲ್ಲದವರನ್ನು ಕಂಡಾಗ ಅವರಿಗೆ ಬಟ್ಟೆ ಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೇ ನನಗೆ ಇಷ್ಟಕರವಾದ ಉಪವಾಸ ವ್ರತ?


ಚಳಿಗಾಲದಲ್ಲಿ ತನ್ನ ಮನೆಯವರ ಬಗ್ಗೆ ಆಕೆಯು ಚಿಂತಿಸಬೇಕಾಗಿಲ್ಲ. ಏಕೆಂದರೆ ಆಕೆಯ ಮನೆಯವರೆಲ್ಲರಿಗೂ ಬೆಚ್ಚನೆಯ ಕಂಬಳಿಗಳಿವೆ.


ಬಡವರೋ ಸಾಕಷ್ಟು ಬಟ್ಟೆಯಿಲ್ಲದವರಾಗಿ ಅಲೆಯುತ್ತಾರೆ; ಹಸಿದವರಾಗಿ ಸಿವುಡುಗಳನ್ನು ಹೊರುತ್ತಾರೆ.


ನನ್ನ ಸ್ಥಿತಿ ಹೀಗೆ ಇತ್ತು: ಹಗಲಲ್ಲಿ ಬಿಸಿಲಿನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು. ನನ್ನ ಕಣ್ಣುಗಳಿಗೆ ನಿದ್ರೆ ತಪ್ಪಿಹೋಯಿತು.


ಬಡವರು ಹೊಲಗಳಲ್ಲಿ ಮೇವನ್ನು ಕೊಯ್ದು, ದುಷ್ಟನ ದ್ರಾಕ್ಷಿತೋಟದಲ್ಲಿ ಹಕ್ಕಲಾಯುತ್ತಾರೆ.


ಬೆಟ್ಟಗಳ ಮಳೆಯಿಂದ ನೆನೆದುಹೋಗುತ್ತಾರೆ; ಬಂಡೆಗಳಲ್ಲಿ ಆಶ್ರಯವನ್ನು ಪಡೆಯುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು