Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:9 - ಕನ್ನಡ ಸಮಕಾಲಿಕ ಅನುವಾದ

9 ಆದರೆ ದುಷ್ಟರು ದಿಕ್ಕಿಲ್ಲದ ಶಿಶುವನ್ನು ತಾಯಿಯ ಎದೆಯಿಂದ ಕಸೆದುಕೊಳ್ಳುತ್ತಾರೆ; ಬಡವನ ಶಿಶುವನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು, ಬಡವರಿಂದ ಒತ್ತೆ ತೆಗೆದುಕೊಳ್ಳುವವರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ತಂದೆಯಿಲ್ಲದ ಮಗುವನು ಕಿತ್ತುಕೊಳ್ಳುತ್ತಾರೆ ತಾಯಮೊಲೆಯಿಂದ ಮಕ್ಕಳನು ಅಡವಾಗಿ ಪಡೆಯುತ್ತಾರೆ ಬಡವರಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು ಬಡವರಿಂದ ಒತ್ತೆತೆಗೆದುಕೊಳ್ಳುವವರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದುಷ್ಟರು ತಂದೆಯಿಲ್ಲದ ಮಗುವನ್ನು ಅದರ ತಾಯಿಯಿಂದ ಕಿತ್ತುಕೊಳ್ಳುವರು. ಬಡವರ ಮಗುವನ್ನು ಸಾಲಕ್ಕೆ ಒತ್ತೆಯಾಗಿಟ್ಟುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:9
9 ತಿಳಿವುಗಳ ಹೋಲಿಕೆ  

ನಾವು ನಮ್ಮ ಸಹೋದರರ ಹಾಗೆಯೇ ಒಂದೇ ರಕ್ತಮಾಂಸದವರಾಗಿದ್ದೇವೆ; ನಮ್ಮ ಮಕ್ಕಳು ಅವರ ಮಕ್ಕಳ ಹಾಗೆಯೇ ಕ್ಷೇಮವಾಗಿದ್ದಾರೆ; ಆದರೂ ನಮ್ಮ ಪುತ್ರಪುತ್ರಿಯರನ್ನೂ ಗುಲಾಮರಾಗುವುದಕ್ಕೆ ತಂದಿದ್ದೇವೆ. ನಮ್ಮ ಪುತ್ರಿಯರಲ್ಲಿ ಕೆಲವರು ಆಗಲೇ ಗುಲಾಮರಾಗಿದ್ದಾರೆ. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಏಕೆಂದರೆ ನಮ್ಮ ಹೊಲಗಳೂ, ದ್ರಾಕ್ಷಿ ತೋಟಗಳೂ ಪರರ ಪಾಲಾಗಿವೆ,” ಎಂದರು.


ಪ್ರವಾದಿಗಳ ಗುಂಪಿನಲ್ಲಿದ್ದ ಒಬ್ಬ ಪ್ರವಾದಿಯ ಹೆಂಡತಿ ಎಲೀಷನಿಗೆ ಕೂಗಿ, “ನಿನ್ನ ದಾಸನಾದ ನನ್ನ ಗಂಡನು ಮರಣಹೊಂದಿದನು. ನಿನ್ನ ದಾಸನು ಯೆಹೋವ ದೇವರಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ. ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸರಾಗಿ ತೆಗೆದುಕೊಳ್ಳಲು ಬಂದಿದ್ದಾನೆ,” ಎಂದಳು.


ತಂದೆಯಿಲ್ಲದವರಿಗಾಗಿ ಚೀಟು ಹಾಕುತ್ತೀರಿ, ನಿಮ್ಮ ಸ್ನೇಹಿತನನ್ನು ಮಾರಿಬಿಡುತ್ತೀರಿ.


ನೀನು ಕಾರಣವಿಲ್ಲದೆ ನಿನ್ನ ಸಹೋದರರಿಂದ ಈಡು ತೆಗೆದುಕೊಂಡಿದ್ದೀ; ಅವರ ವಸ್ತ್ರಗಳನ್ನು ಸಹ ನೀನು ಕಿತ್ತುಕೊಂಡಿರುವೆ.


ಬೆಟ್ಟಗಳ ಮಳೆಯಿಂದ ನೆನೆದುಹೋಗುತ್ತಾರೆ; ಬಂಡೆಗಳಲ್ಲಿ ಆಶ್ರಯವನ್ನು ಪಡೆಯುತ್ತಾರೆ.


ಬಡವರೋ ಸಾಕಷ್ಟು ಬಟ್ಟೆಯಿಲ್ಲದವರಾಗಿ ಅಲೆಯುತ್ತಾರೆ; ಹಸಿದವರಾಗಿ ಸಿವುಡುಗಳನ್ನು ಹೊರುತ್ತಾರೆ.


ಏಕೆಂದರೆ ಅಂಗಲಾಚುವ ಬಡವನನ್ನೂ, ಸಹಾಯಕನಿಲ್ಲದ ಅನಾಥನನ್ನೂ ನಾನು ರಕ್ಷಿಸುವವನಾಗಿದ್ದೆನು.


ಯೆಹೋವ ದೇವರು ತಮ್ಮ ಪ್ರಜೆಗಳ ಹಿರಿಯರ ಸಂಗಡ, ಮತ್ತು ಅವರ ಅಧಿಪತಿಗಳ ಸಂಗಡ ನ್ಯಾಯತೀರಿಸಲು ಪ್ರವೇಶಿಸುವರು. ಏಕೆಂದರೆ, “ನೀವು ನನ್ನ ದ್ರಾಕ್ಷಿತೋಟವನ್ನು ತಿಂದುಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.


ಒಬ್ಬನು ತನ್ನ ಸಹೋದರರಾದ ಇಸ್ರಾಯೇಲರಲ್ಲಿ ಒಬ್ಬನನ್ನು ಕದ್ದು ಅವನನ್ನು ಗುಲಾಮನಾಗಿ ನಡೆಸಿಕೊಂಡದ್ದು ಅಥವಾ ಮಾರಿಬಿಟ್ಟದ್ದು ತಿಳಿದುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ನಡುವೆಯಿಂದ ತೆಗೆದುಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು