Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 26:2 - ಕನ್ನಡ ಸಮಕಾಲಿಕ ಅನುವಾದ

2 “ಶಕ್ತಿ ಇಲ್ಲದವನಿಗೆ ನೀನು ಹೇಗೆ ಸಹಾಯ ಮಾಡಿದೆ? ತ್ರಾಣವಿಲ್ಲದ ಕೈಯನ್ನು ಹೇಗೆ ರಕ್ಷಿಸಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನಿನ್ನಿಂದ ಅಶಕ್ತನಿಗೆ ಎಷ್ಟೋ ಸಹಾಯವಾಯಿತು! ಬಲಹೀನವಾದ ಕೈಗೆ ಮಹಾ ಸಹಾಯ ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಿಶ್ಯಕ್ತನಿಗೆ ನಿನ್ನಿಂದ ಮಹದುಪಕಾರವಾಯಿತು ದುರ್ಬಲವಾದ ಕೈಗಳಿಗೆ ಮಹಾ ನೆರವು ದೊರಕಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನಿಂದ ಅಶಕ್ತನಿಗೆ ಎಷ್ಟೋ ಸಹಾಯವಾಯಿತು! ಬಲಹೀನವಾದ ಕೈಗೆ ಚೆನ್ನಾಗಿ ನೆರವಾಗಿದ್ದಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಿನ್ನಿಂದ ಬಲಹೀನನಿಗೆ ಎಷ್ಟೋ ಸಹಾಯವಾಯಿತು! ನೀನು ನನ್ನ ಬಲಹೀನವಾದ ತೋಳುಗಳನ್ನು ಮತ್ತೆ ಬಲಗೊಳಿಸಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 26:2
15 ತಿಳಿವುಗಳ ಹೋಲಿಕೆ  

ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡಿರಿ. ನನ್ನ ಶಕ್ತಿಯು ಕುಂದುತ್ತಿರುವಾಗ ನನ್ನನ್ನು ಕೈಬಿಡಬೇಡಿರಿ.


“ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವುದು.


ಯಥಾರ್ಥ ಮಾತುಗಳು ಎಷ್ಟೋ ನೋವನ್ನು ತರುತ್ತವೆ! ಆದರೆ ನಿಮ್ಮ ತರ್ಕವು ರುಜುಪಡಿಸುವುದೇನು?


ನನ್ನ ಶಕ್ತಿ ಕಲ್ಲುಗಳ ಶಕ್ತಿಯೋ? ನನ್ನ ಶರೀರ ಕಂಚಿನ ಶರೀರವೋ?


ಮಧ್ಯಾಹ್ನದಲ್ಲಿ ಎಲೀಯನು ಅವರನ್ನು ಗೇಲಿಮಾಡಿ ಅವರಿಗೆ, “ದೊಡ್ಡ ಶಬ್ದದಿಂದ ಕೂಗಿರಿ, ಏಕೆಂದರೆ ಅವನು ಒಬ್ಬ ದೇವರಲ್ಲವೇ? ಒಂದು ವೇಳೆ ಅವನು ಧ್ಯಾನದಲ್ಲಿರಬಹುದು; ಇಲ್ಲವೆ ಯಾವುದೋ ಕೆಲಸದಲ್ಲಿರಬಹುದು; ಇಲ್ಲವೆ ಪ್ರಯಾಣದಲ್ಲಿದ್ದಾನೆ; ಇಲ್ಲವೆ ಅವನು ನಿದ್ದೆಯಲ್ಲಿದ್ದಾನೆ; ಈಗ ಅವನು ಎಚ್ಚರವಾಗಬೇಕು,” ಎಂದನು.


ತನಗೆ ಜ್ಞಾನ ದೊರೆಯಲು ಯೆಹೋವ ದೇವರು ಯಾರ ವಿಚಾರ ತೆಗೆದುಕೊಂಡನು. ಆತನಿಗೆ ಸರಿಯಾದ ಮಾರ್ಗವನ್ನು ಕಲಿಸಿದವನು ಯಾರು? ಆತನಿಗೆ ಜ್ಞಾನವನ್ನು ಕಲಿಸಿದವನಾರು ಇಲ್ಲವೆ ತಿಳುವಳಿಕೆಯ ಮಾರ್ಗವನ್ನು ಆತನಿಗೆ ತೋರಿಸಿದವನಾರು?


“ನಾನು ನಿರೀಕ್ಷೆಯಿಂದಿರಲು, ನನಗೆ ಶಕ್ತಿ ಎಲ್ಲಿದೆ? ನಾನು ಸಹನೆಯಿಂದಿರಲು, ನನಗೆ ಭವಿಷ್ಯ ಏನಿದೆ?


ನನಗೆ ಸಹಾಯವು ಇಲ್ಲದೆ ಹೋಗಿದೆಯಲ್ಲಾ? ಈಗ ಯಶಸ್ಸು ಸಹ ನನ್ನಿಂದ ತೊಲಗಿಹೋಗಿದೆಯಲ್ಲಾ.


ಅದಕ್ಕೆ ಯೋಬನು ಹೀಗೆ ಉತ್ತರಕೊಟ್ಟನು:


ಜ್ಞಾನವಿಲ್ಲದವನಿಗೆ ಏನು ಬುದ್ಧಿವಾದ ಹೇಳಿರುವೆ? ನೀನು ಯಾವ ವಿವೇಕದ ಮಾತುಗಳನ್ನು ಬಹಳವಾಗಿ ಪ್ರದರ್ಶಿಸಿದೆ.


ನೀವೆಲ್ಲರೂ ಇದನ್ನು ನೋಡಿದ್ದರೂ, ಮತ್ತೆ ಏಕೆ ಈ ಪ್ರಕಾರ ವ್ಯರ್ಥವಾಗಿ ವಾದಿಸುತ್ತೀರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು