Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 26:3 - ಕನ್ನಡ ಸಮಕಾಲಿಕ ಅನುವಾದ

3 ಜ್ಞಾನವಿಲ್ಲದವನಿಗೆ ಏನು ಬುದ್ಧಿವಾದ ಹೇಳಿರುವೆ? ನೀನು ಯಾವ ವಿವೇಕದ ಮಾತುಗಳನ್ನು ಬಹಳವಾಗಿ ಪ್ರದರ್ಶಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬುದ್ಧಿಯಿಲ್ಲದವನಿಗೆ ನೀನು ಹೇಳಿದ ಬುದ್ಧಿಯನ್ನು ಎಷ್ಟೆಂದು ಹೇಳಲಿ! ಸುಜ್ಞಾನವನ್ನು ಧಾರಾಳವಾಗಿ ಉಪದೇಶಿಸಿದ್ದಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮಂದಮತಿಯಾದವನಿಗೆ ಎಷ್ಟೋ ಬುದ್ಧಿ ಹೇಳಿರುವೆ ಸುಜ್ಞಾನವನ್ನು ಬಹಳವಾಗಿ ಬೋಧನೆಮಾಡಿರುವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬುದ್ಧಿಯಿಲ್ಲದವನಿಗೆ ನೀನು ಹೇಳಿದ ಬುದ್ಧಿಯನ್ನು ಎಷ್ಟೆಂದು ಹೇಳಲಿ! ಸುಜ್ಞಾನವನ್ನು ಎಷ್ಟೋ ಧಾರಾಳವಾಗಿ ಉಪದೇಶಿಸಿದ್ದೀ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಹೌದು, ಅಜ್ಞಾನಿಗೆ ಎಷ್ಟೋ ಒಳ್ಳೆಯ ಬುದ್ಧಿವಾದ ಮಾಡಿದೆ! ನೀನು ಎಷ್ಟು ಜ್ಞಾನಿ ಎಂಬುದನ್ನು ತೋರಿಸಿಕೊಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 26:3
17 ತಿಳಿವುಗಳ ಹೋಲಿಕೆ  

ಏಕೆಂದರೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ಬೋಧಿಸುವುದರಲ್ಲಿ ನಾನು ಹಿಂಜರಿಯಲಿಲ್ಲ.


ನಿಮಗೆ ಹಿತಕರವಾದುದ್ದೆಲ್ಲವನ್ನೂ ಬೋಧಿಸಲು ನಾನು ಹಿಂಜರಿಯಲಿಲ್ಲ. ಬಹಿರಂಗದಲ್ಲಿಯೂ ಮನೆಮನೆಗಳಲ್ಲಿಯೂ ನಾನು ನಿಮಗೆ ಬೋಧಿಸಿದ್ದೇನೆ.


“ಅಜ್ಞಾನದ ಮಾತುಗಳಿಂದ ನನ್ನ ಯೋಜನೆಗಳನ್ನು ಮಂಕುಮಾಡುವ ನೀನು ಯಾರು?


ಇಲ್ಲವಾದರೆ ನಾನು ಹೇಳುವುದನ್ನು ಕೇಳು; ಮೌನವಾಗಿರು, ಈಗ ನಾನು ನಿನಗೆ ಜ್ಞಾನವನ್ನು ಬೋಧಿಸುತ್ತೇನೆ.”


ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುತ್ತವೆ; ನನ್ನ ತುಟಿಗಳು ನಾನು ತಿಳಿದುಕೊಂಡಿದ್ದನ್ನೇ ಯಥಾರ್ಥವಾಗಿ ಹೇಳುತ್ತವೆ.


“ಆದರೆ ನೀವೆಲ್ಲರೂ ಬಂದು ಮತ್ತೆ ವಾದ ಮಾಡಲು ಪ್ರಯತ್ನಿಸಿರಿ! ನಿಮ್ಮಲ್ಲಿ ನಾನು ಒಬ್ಬ ಜ್ಞಾನಿಯನ್ನು ಸಹ ಕಂಡುಕೊಳ್ಳಲಿಲ್ಲ.


ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು; ಮೌನವೇ ನಿಮಗೆ ಜ್ಞಾನವು.


ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; ನಾನು ನಿಮಗಿಂತ ಕಡಿಮೆ ಇಲ್ಲ; ಇಂಥಾ ವಿಷಯಗಳನ್ನು ತಿಳಿಯದಿರುವವನು ಯಾರು?


ನನಗೆ ಸಹಾಯವು ಇಲ್ಲದೆ ಹೋಗಿದೆಯಲ್ಲಾ? ಈಗ ಯಶಸ್ಸು ಸಹ ನನ್ನಿಂದ ತೊಲಗಿಹೋಗಿದೆಯಲ್ಲಾ.


“ಶಕ್ತಿ ಇಲ್ಲದವನಿಗೆ ನೀನು ಹೇಗೆ ಸಹಾಯ ಮಾಡಿದೆ? ತ್ರಾಣವಿಲ್ಲದ ಕೈಯನ್ನು ಹೇಗೆ ರಕ್ಷಿಸಿದೆ?


ಈ ಮಾತುಗಳನ್ನು ಹೇಳಲು ನಿನಗೆ ಯಾರು ಸಹಾಯ ಮಾಡಿದರು? ಯಾರ ಆತ್ಮವು ನಿನ್ನ ಬಾಯಿಂದ ಮಾತಾಡಿದ್ದು?


“ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು