Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 26:4 - ಕನ್ನಡ ಸಮಕಾಲಿಕ ಅನುವಾದ

4 ಈ ಮಾತುಗಳನ್ನು ಹೇಳಲು ನಿನಗೆ ಯಾರು ಸಹಾಯ ಮಾಡಿದರು? ಯಾರ ಆತ್ಮವು ನಿನ್ನ ಬಾಯಿಂದ ಮಾತಾಡಿದ್ದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾರಿಗೆ ಮಾತುಗಳನ್ನು ಕಲಿಸಿದ್ದಿ? ನಿನ್ನಿಂದ ಹೊರಟ ನುಡಿಗಳನ್ನು ಯಾವ ಆತ್ಮವು ಪ್ರೇರೇಪಿಸಿತು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಮಾತುಗಳನ್ನು ನಿನಗೆ ಕಲಿಸಿದವರಾರು? ಈ ನುಡಿಗಳಿಂದ ನಿನ್ನನು ಪ್ರೇರೇಪಿಸಿದ ಪುಣ್ಯಾತ್ಮನಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾರಿಗೆ ಮಾತುಗಳನ್ನು ಕಲಿಸಿದ್ದೀ? ನಿನ್ನಿಂದ ಹೊರಟ ನುಡಿಗಳನ್ನು ಯಾವ ಆತ್ಮವು ಪ್ರೇರಿಸಿತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇವುಗಳನ್ನು ತಿಳಿಸಲು ನಿನಗೆ ಯಾರು ಸಹಾಯ ಮಾಡಿದವರು? ಯಾರ ಆತ್ಮವು ನಿನ್ನನ್ನು ಪ್ರೇರೇಪಿಸಿತು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 26:4
9 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ: ದೇವರಾತ್ಮರಿಂದ ಮಾತನಾಡುವ ಯಾವನೂ, “ಯೇಸು ಶಾಪಗ್ರಸ್ತನು,” ಎಂದು ಹೇಳುವುದಿಲ್ಲ. ಪವಿತ್ರಾತ್ಮರಿಂದಲೇ ಹೊರತು, ಯಾವನೂ, “ಯೇಸು ಕರ್ತದೇವರು,” ಎಂದು ಹೇಳಲಾರನು.


ಆಮೇಲೆ ಮಣ್ಣಿನ ದೇಹ ಅದು ಇದ್ದ ಹಾಗೆಯೇ ಭೂಮಿಗೆ ಸೇರುವುದು. ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂದಿರುಗುವುದು.


ಏಕೆಂದರೆ ಅನೇಕ ವಿಷಯಗಳಿಂದ ನಾನು ತುಂಬಿದ್ದೇನೆ; ನನ್ನೊಳಗಿನ ಆತ್ಮವು ನನ್ನನ್ನು ಒತ್ತಾಯಪಡಿಸುತ್ತಿದೆ.


ನನ್ನನ್ನು ಅವಮಾನಿಸುವ ಖಂಡನೆಯನ್ನು ನಾನು ಕೇಳಿದ್ದೇನೆ; ಆದ್ದರಿಂದ ನನ್ನ ತಿಳುವಳಿಕೆಯು ನನ್ನನ್ನು ಉತ್ತರಿಸಲು ಪ್ರೇರೇಪಿಸುತ್ತದೆ.


ಜ್ಞಾನವಿಲ್ಲದವನಿಗೆ ಏನು ಬುದ್ಧಿವಾದ ಹೇಳಿರುವೆ? ನೀನು ಯಾವ ವಿವೇಕದ ಮಾತುಗಳನ್ನು ಬಹಳವಾಗಿ ಪ್ರದರ್ಶಿಸಿದೆ.


“ಸಾಗರದ ಕೆಳಗಿನ ಲೋಕದಲ್ಲಿ ವಾಸಿಸುವ ಸತ್ತವರ ಆತ್ಮಗಳು ಆಳವಾದ ಯಾತನೆಯಲ್ಲಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು