Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:14 - ಕನ್ನಡ ಸಮಕಾಲಿಕ ಅನುವಾದ

14 ಅವರ ಮಕ್ಕಳು ಹೆಚ್ಚಿದರೂ ಖಡ್ಗಕ್ಕೆ ಗುರಿಯಾಗುವರು; ಅವರ ಸಂತತಿಯವರಿಗೆ ಆಹಾರದ ಕೊರತೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನಿಗೆ ಮಕ್ಕಳು ಹೆಚ್ಚಿದರೆ ಕತ್ತಿಗೆ ತುತ್ತಾಗುವರು, ಅವನ ಸಂತತಿಯವರಿಗೆ ಅನ್ನದ ಕೊರತೆ ತಪ್ಪದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವನಿಗೆ ಮಕ್ಕಳು ಹೆಚ್ಚಿದರೂ ಕತ್ತಿಗೆ ತುತ್ತಾಗುವರು ಅವನ ಸಂತತಿಯವರಿಗೆ ಊಟದ ಕೊರತೆ ತಪ್ಪದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನಿಗೆ ಮಕ್ಕಳು ಹೆಚ್ಚಿದರೆ ಕತ್ತಿಗೆ ತುತ್ತಾಗುವರು, ಅವನ ಸಂತತಿಯವರಿಗೆ ಅನ್ನದ ಕೊರತೆ ತಪ್ಪದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದುಷ್ಟನು ಅನೇಕ ಮಕ್ಕಳನ್ನು ಪಡೆದುಕೊಂಡರೂ ಅವರು ಯುದ್ಧದಲ್ಲಿ ಕೊಲ್ಲಲ್ಪಡುವರು; ಅವರಿಗೆ ಊಟಕ್ಕೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:14
16 ತಿಳಿವುಗಳ ಹೋಲಿಕೆ  

ನೀವು ಪುತ್ರಪುತ್ರಿಯರನ್ನು ಪಡೆಯುವಿರಿ, ಆದರೆ ಅವರ ಕೂಡ ಸಂತೋಷಿಸುವುದಿಲ್ಲ. ಏಕೆಂದರೆ ಅವರು ಸೆರೆಯಾಗಿ ಹೋಗುವರು.


ಏಕೆಂದರೆ, ‘ಇಗೋ, ಬಂಜೆಯರೂ ಹೆರದವರೂ ಹಾಲು ಕುಡಿಸದವರೂ ಧನ್ಯರು,’ ಎಂದು ಜನರು ಹೇಳುವ ದಿವಸಗಳು ಬರುತ್ತವೆ.


ಅವನ ಮಕ್ಕಳು ಬಡವರ ದಯೆಯನ್ನು ಬೇಡುವರು; ಅವನ ಮಕ್ಕಳ ಕೈಗಳು ಅವನ ಸಂಪತ್ತನ್ನು ಹಿಂತಿರುಗಿಸಬೇಕಾಗುವುದು.


ಅವನ ಸಂತಾನವು ಮುಗಿದು ಹೋಗಲಿ; ಎರಡನೆಯ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.


ಕತ್ತಲೆಯೊಳಗಿಂದ ಪಾರಾಗುತ್ತೇನೆಂದು ದುಷ್ಟನು ನಂಬುವುದಿಲ್ಲ; ಅವನ ಖಡ್ಗವು ಅವನಿಗಾಗಿ ಕಾದಿದೆ.


ಹಾಮಾನನು ತನ್ನ ಐಶ್ವರ್ಯದ ಘನವನ್ನೂ, ತನ್ನ ಮಕ್ಕಳ ಹೆಚ್ಚಳವನ್ನೂ, ಅರಸನು ತನ್ನನ್ನು ಹೆಚ್ಚಿಸಿದ್ದನ್ನೂ, ಅರಸನ ಪ್ರಭುಗಳ ಹಾಗೂ ಸೇವಕರ ಮೇಲೆ ಎತ್ತಿದ್ದನ್ನೂ ಹೀಗೆ ಎಲ್ಲವನ್ನೂ ಅವರಿಗೆ ವಿವರವಾಗಿ ಹೇಳಿದನು.


ತೃಪ್ತಿಪಟ್ಟವರು ಆಹಾರಕ್ಕಾಗಿ ಕೂಲಿ ಕೆಲಸಕ್ಕೆ ಹೋಗುತ್ತಾರೆ. ಹಸಿದವರು ಇನ್ನು ಮುಂದೆ ಹಸಿಯರು. ಬಂಜೆಯಾದವಳು ಏಳುಮಂದಿ ಮಕ್ಕಳನ್ನು ಹೆತ್ತಳು. ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನಳಾದಳು.


ನಿಮ್ಮ ಪುತ್ರಪುತ್ರಿಯರು ಬೇರೆ ಜನರಿಗೆ ವಶಪಡಿಸಿರಲು, ನೀವು ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಇರುವಿರಿ. ಆದರೆ ಅವರನ್ನು ಕಾಪಾಡಲು ನಿಮ್ಮ ಕೈಯಿಂದ ಸಾಧ್ಯವಾಗದೆ ಇರುವುದು.


ಸಿಂಹವು ಬೇಟೆ ಇಲ್ಲದ್ದರಿಂದ ನಾಶವಾಗುತ್ತದೆ; ಸಿಂಹದ ಮರಿಗಳು ಚದರಿಹೋಗುವವು.


ಅವನ ಜನರಲ್ಲಿ ಅವನಿಗೆ ಮಗನೂ, ಮೊಮ್ಮಗನೂ ಇರುವುದಿಲ್ಲ, ಅವನು ವಾಸಿಸಿದ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ.


ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಲಿ, ತಮ್ಮ ಹಾಳು ಮನೆಯಿಂದ ಹೊರಟು ಹೋಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು