Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:2 - ಕನ್ನಡ ಸಮಕಾಲಿಕ ಅನುವಾದ

2 ನನ್ನ ನ್ಯಾಯವನ್ನು ತಪ್ಪಿಸಿದ ಜೀವಂತ ದೇವರಾಣೆ, ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತರ ಆಣೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ, ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಇನ್ನೂ ಆಡುತ್ತಿದೆ (ಕೇಳಿರಿ)!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನನಗೆ ನ್ಯಾಯ ದೊರಕಿಸದ ಜೀವಂತ ದೇವರಾಣೆ, ನನ್ನ ಮನಸ್ಸನು ಕಹಿಯಾಗಿಸಿದ ಸರ್ವಶಕ್ತನಾಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ, ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಇನ್ನೂ ಆಡುತ್ತಿದೆ [ಕೇಳಿರಿ]!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ದೇವರ ಮೇಲೆ ಆಣೆಯಿಟ್ಟು ಹೇಳುವೆ. ಆತನು ನನಗೆ ನ್ಯಾಯವನ್ನು ದೊರಕಿಸದೆ ನನ್ನ ಜೀವನವನ್ನು ಕಹಿಯನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:2
26 ತಿಳಿವುಗಳ ಹೋಲಿಕೆ  

“ಏಕೆಂದರೆ ಯೋಬನು, ‘ನಾನು ನಿರ್ದೋಷಿಯಾಗಿದ್ದೇನೆ. ಆದರೆ ದೇವರು ನನಗೆ ನ್ಯಾಯವನ್ನು ನಿರಾಕರಿಸಿದ್ದಾರೆ.


ಅವಳು ಬೆಟ್ಟಕ್ಕೆ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಿ ಹಾಕಲು ಗೇಹಜಿಯು ಹತ್ತಿರ ಬಂದದ್ದರಿಂದ ದೇವರ ಮನುಷ್ಯನು, “ಅವಳನ್ನು ಬಿಡು. ಏಕೆಂದರೆ ಅವಳ ಹೃದಯವು ಬಹಳ ನೋವಿನಿಂದ ತುಂಬಿದೆ. ಯೆಹೋವ ದೇವರು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾರೆ,” ಎಂದನು.


ಆದರೆ ನನ್ನ ಜೀವದಾಣೆ, ಭೂಮಿಯೆಲ್ಲಾ ಯೆಹೋವ ದೇವರ ಮಹಿಮೆಯಿಂದ ತುಂಬಿರುವುದು.


ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’


ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ‘ಈಗ ಯೆಹೋವ ದೇವರ ಜೀವದಾಣೆ,’ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವುದಕ್ಕೆ ನನ್ನ ಜನರ ಮಾರ್ಗಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ, ಆಗ ಅವರು ನನ್ನ ಜನರ ನಡುವೆ ನೆಲೆಗೊಂಡು ವೃದ್ಧಿಯಾಗುವರು.


ಅವರು, ‘ಯೆಹೋವ ದೇವರು ಜೀವದಾಣೆ,’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳಾಗಿಯೇ ಇರುತ್ತದೆ.”


ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿಯಿಂದಲೂ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡುವೆ. ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯ ಬಯಸುವರು. ನನ್ನಲ್ಲಿಯೇ ಹೆಮ್ಮೆಪಡುವರು.”


ನನ್ನ ಮಾರ್ಗವು ಯೆಹೋವ ದೇವರಿಗೆ ಮರೆಯಾಗಿದೆ. ನನ್ನ ನ್ಯಾಯವು ನನ್ನ ದೇವರಿಂದ ದಾಟಿಹೋಯಿತಲ್ಲಾ! ಎಂದು ಯಾಕೋಬೇ ಏಕೆ ಹೇಳುತ್ತೀ? ಇಸ್ರಾಯೇಲೇ ಏಕೆ ಮಾತನಾಡುತ್ತೀ?


ದೇವರೇ, ನಿಮ್ಮ ಕೈಕೃತಿಯಾಗಿರುವ ನನ್ನನ್ನು ಜಜ್ಜುವುದೂ ನಿಮಗೆ ಮೆಚ್ಚಿಕೆಯೋ? ನೀವು ನನ್ನನ್ನು ಅಲಕ್ಷ್ಯ ಮಾಡುವಿರೋ? ನೀವು ದುಷ್ಟರ ಯೋಜನೆಯನ್ನು ಮೆಚ್ಚುವಿರೋ?


ನಾನು ಉಸಿರಾಡಲು ಕಷ್ಟಪಡುತ್ತಿದ್ದೇನೆ, ದೇವರು ಕಹಿಯಾದವುಗಳಿಂದ ನನ್ನನ್ನು ತುಂಬಿಸುತ್ತಾರೆ.


ಅದಕ್ಕೆ ಎಲೀಯನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸೇನಾಧೀಶ್ವರ ಯೆಹೋವ ದೇವರಾಣೆ, ಇಂದು ನನ್ನನ್ನು ಅವನಿಗೆ ತೋರಿಸಿಕೊಳ್ಳುವೆನು,” ಎಂದನು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯ ಊರಿನವನಾದ ಎಲೀಯನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಮಾತಿನ ಪ್ರಕಾರ ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳವರೆಗೆ ಮಂಜಾಗಲಿ ಅಥವಾ ಮಳೆಯಾಗಲಿ ಬೀಳುವುದಿಲ್ಲ,” ಎಂದನು.


ಅದಕ್ಕೆ ಯೋವಾಬನು, “ದೇವರ ಜೀವದಾಣೆ, ನೀನು ಮಾತನಾಡದೆ ಹೋದರೆ, ನಿಶ್ಚಯವಾಗಿ ಪ್ರತಿ ಮನುಷ್ಯನು ಉದಯದವರೆಗೆ ತನ್ನ ಸಹೋದರನನ್ನು ಹಿಂದಟ್ಟಿ ಹೋಗುತ್ತಿದ್ದನು,” ಎಂದನು.


ಏಕೆಂದರೆ ನಿನಗೆ ಕೇಡು ಆಗದ ಹಾಗೆ ನನ್ನನ್ನು ತಡೆದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಜೀವದಾಣೆ, ನೀನು ತ್ವರೆಯಾಗಿ ನನ್ನನ್ನು ಎದುರುಗೊಳ್ಳದಿದ್ದರೆ, ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ,” ಎಂದು ಹೇಳಿದನು.


ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವುದಕ್ಕೂ, ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಹೋಗುವುದನ್ನು ದೇವರು ತಡೆದದ್ದರಿಂದ, ಯೆಹೋವ ದೇವರ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ ನಿನ್ನ ಶತ್ರುಗಳೂ, ನನ್ನ ಒಡೆಯನಿಗೆ ಕೇಡನ್ನು ಹುಡುಕುವವರೂ ನಾಬಾಲನ ಹಾಗೆಯೇ ಆಗಲಿ.


ಅನಂತರ ಹುಡುಗನನ್ನು ಕಳುಹಿಸಿ, ‘ಆ ಬಾಣಗಳನ್ನು ಹುಡುಕಿಕೊಂಡು ಬಾ,’ ಎಂದು ಹೇಳುವೆನು. ‘ಆ ಬಾಣಗಳು ನಿನಗೆ ಈಚೆ ಬಿದ್ದಿವೆ, ಅವುಗಳನ್ನು ತೆಗೆದುಕೊಂಡು ಬಾ,’ ಎಂದು ನಾನು ಹುಡುಗನಿಗೆ ಹೇಳಿದರೆ, ನೀನು ಬರಬಹುದು. ಏಕೆಂದರೆ ಯೆಹೋವ ದೇವರಾಣೆ, ನಿನಗೆ ಕೇಡಿಲ್ಲದೆ ಸಮಾಧಾನವಿರುವುದು.


ಆದರೆ ಜನರು ಸೌಲನಿಗೆ, “ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆಯನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಎಂದಿಗೂ ಇಲ್ಲ. ಯೆಹೋವ ದೇವರ ಜೀವದಾಣೆ, ಇದನ್ನು ಅವನು ದೇವರ ಸಹಾಯದಿಂದ ಮಾಡಿದ್ದರಿಂದ, ಅವನ ಒಂದು ಕೂದಲು ನೆಲಕ್ಕೆ ಬೀಳಬಾರದು,” ಎಂದು ಹೇಳಿ ಯೋನಾತಾನನು ಸಾಯದ ಹಾಗೆ ಪ್ರಾಯಶ್ಚಿತ್ತವನ್ನು ಮಾಡಿ ಬಿಡಿಸಿಕೊಂಡರು.


ಏಕೆಂದರೆ ನನ್ನ ಪುತ್ರನಾದ ಯೋನಾತಾನನಿಂದಾದರೂ ಉಂಟಾಗಿದ್ದರೆ, ಅವನು ಸತ್ತೇ ಸಾಯುವನೆಂದು ಇಸ್ರಾಯೇಲರನ್ನು ರಕ್ಷಿಸುವ ಯೆಹೋವ ದೇವರ ಮೇಲೆ ಆಣೆ ಇಟ್ಟು ಹೇಳುತ್ತೇನೆ,” ಎಂದನು. ಆದರೆ ಸಮಸ್ತ ಜನರಲ್ಲಿ ಒಬ್ಬನಾದರೂ ಅವನಿಗೆ ಉತ್ತರ ಕೊಡಲಿಲ್ಲ.


ಈ ರಾತ್ರಿಯಲ್ಲಿ ಇಲ್ಲಿರು. ನಾಳೆ ಬೆಳಿಗ್ಗೆ ಅವನು ನಿನಗೆ ವಿಮೋಚಕ ಬಂಧುವಿನ ಕರ್ತವ್ಯ ಮಾಡಿದರೆ ಒಳ್ಳೆಯದು. ಅವನು ನಿನಗೆ ವಿಮೋಚಕ ಬಂಧುವಿನ ಕರ್ತವ್ಯ ಮಾಡಲು ಮನಸ್ಸಿಲ್ಲದಿದ್ದರೆ ಯೆಹೋವ ದೇವರ ಜೀವದಾಣೆ, ನಾನೇ ಅದನ್ನು ಮಾಡುವೆನು. ಉದಯಕಾಲದವರೆಗೂ ಇಲ್ಲಿಯೇ ಮಲಗಿರು,” ಎಂದನು.


ದೇವರು ನನ್ನನ್ನು ದುಷ್ಟರ ಕೈಗೆ ಒಪ್ಪಿಸಿಬಿಟ್ಟಿದ್ದಾರೆ; ಹೌದು, ದುಷ್ಟರ ಕೈಗೆ ನನ್ನನ್ನು ಎಸೆದುಬಿಟ್ಟಿದ್ದಾರೆ.


ದೇವರಿಂದಲೇ ನನಗೆ ಅನ್ಯಾಯವಾಗಿದೆ; ದೇವರು ತಮ್ಮ ಬಲೆಯನ್ನು ನನ್ನ ಮೇಲೆ ಬೀಸಿದ್ದಾರೆಂದು ನಿಮಗೆ ತಿಳಿದಿರಲಿ.


ದೇವರು ನನ್ನ ಹೃದಯವನ್ನು ಹೆದರಿಸಿದ್ದಾರೆ; ಸರ್ವಶಕ್ತರು ನನ್ನನ್ನು ಗಾಬರಿಪಡಿಸಿದ್ದಾರೆ.


“ಯೋಬನೇ, ‘ನನ್ನ ನೀತಿಯು ದೇವರ ನೀತಿಗಿಂತ ದೊಡ್ಡದು,’ ಎಂದು ನೀನು ಹೇಳಿದ್ದು ಸರಿಯೆಂದು ನೆನಸುತ್ತೀಯೋ?


“ನನ್ನ ನ್ಯಾಯವನ್ನು ನೀನು ಅಪಕೀರ್ತಿ ಮಾಡುತ್ತೀಯೋ? ನೀನು ನಿನ್ನ ನ್ಯಾಯವನ್ನು ಸ್ಥಾಪಿಸಲು ನನ್ನನ್ನು ಅಪರಾಧಿ ಎಂದು ನಿರ್ಣಯಿಸುತ್ತೀಯೋ?


ಏಕೆಂದರೆ ದೇವರು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾರೆ; ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು