Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:7 - ಕನ್ನಡ ಸಮಕಾಲಿಕ ಅನುವಾದ

7 “ನನ್ನ ಶತ್ರು ದುಷ್ಟನ ಹಾಗಿರಲಿ; ನನ್ನ ವಿರುದ್ಧ ಏಳುವವನು ಅನ್ಯಾಯವಂತನ ಹಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ಹಗೆಗೆ ದುಷ್ಟನ ಗತಿಯಾಗಲಿ, ನನ್ನ ವಿರುದ್ಧವಾಗಿ ಎದ್ದವನು ಅ ನೀತಿವಂತನ ಗತಿಯನ್ನು ಕಾಣಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನನ್ನ ಹಗೆಗೆ ದುಷ್ಟತನ ಗತಿಯಾಗಲಿ ಅನೀತಿವಂತನ ಪಾಡು ನನ್ನ ವಿರೋಧಿಗೆ ಒದಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನನ್ನ ಹಗೆಗೆ ದುಷ್ಟನ ಗತಿಯಾಗಲಿ, ನನಗೆ ವಿರುದ್ಧವಾಗಿ ಎದ್ದವನು ಅನ್ಯಾಯಗಾರನ ಅವಸ್ಥೆಯನ್ನು ಹೊಂದಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನನ್ನ ವೈರಿಗಳಿಗೆ ದುಷ್ಟರ ಗತಿಯಾಗಲಿ. ನನ್ನ ವಿರೋಧಿಗಳಿಗೆ ಅನೀತಿವಂತರ ಗತಿಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:7
6 ತಿಳಿವುಗಳ ಹೋಲಿಕೆ  

ಆಗ ಬೇಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ, “ಬೇಲ್ತೆಶಚ್ಚರನೇ, ಕನಸಾದರೂ, ಅದರ ಅರ್ಥವಾದರೂ ನಿನ್ನನ್ನು ಕಳವಳಪಡಿಸದಿರಲಿ,” ಎಂದನು. ಬೇಲ್ತೆಶಚ್ಚರನು ಉತ್ತರವಾಗಿ, “ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ, ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.


ಅರಸನು ಕೂಷ್ಯನಿಗೆ, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದನು. ಕೂಷ್ಯನು ಉತ್ತರವಾಗಿ, “ಅರಸನಾದ ನನ್ನ ಒಡೆಯನ ಶತ್ರುಗಳು ಕೇಡು ಮಾಡುವಂತೆ ನಿನಗೆ ವಿರೋಧವಾಗಿ ಏಳುವ ಸಮಸ್ತರಿಗೂ, ಆ ಯುವಕನಿಗಾದ ಹಾಗೆಯೇ ಆಗಲಿ,” ಎಂದನು.


ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವುದಕ್ಕೂ, ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಹೋಗುವುದನ್ನು ದೇವರು ತಡೆದದ್ದರಿಂದ, ಯೆಹೋವ ದೇವರ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ ನಿನ್ನ ಶತ್ರುಗಳೂ, ನನ್ನ ಒಡೆಯನಿಗೆ ಕೇಡನ್ನು ಹುಡುಕುವವರೂ ನಾಬಾಲನ ಹಾಗೆಯೇ ಆಗಲಿ.


ನನ್ನ ನಿಷ್ಕಪಟತೆಯನ್ನು ದೃಢವಾಗಿ ಹಿಡುಕೊಂಡಿದ್ದೇನೆ; ಅದನ್ನು ಎಂದಿಗೂ ನಾನು ಹೋಗಗೊಡಿಸುವುದಿಲ್ಲ; ನಾನು ಜೀವಂತವಾಗಿ ಇರುವವರೆಗೂ ನನ್ನ ಮನಸ್ಸಾಕ್ಷಿಯು ನನ್ನನ್ನು ನಿಂದಿಸುವುದಿಲ್ಲ.


ದೇವರು ಭಕ್ತಿಹೀನನನ್ನು ಕಡಿದುಬಿಟ್ಟರೆ, ಅವನ ಪ್ರಾಣ ತೆಗೆದುಕೊಂಡರೆ, ಅವನಿಗೆ ನಿರೀಕ್ಷೆ ಎಲ್ಲಿ?


“ನನ್ನ ಕರೆಗೆ ಕಿವಿಗೊಡತಕ್ಕವರು ಒಬ್ಬರು ಈಗ ಇದ್ದರೆ ಎಷ್ಟೋ ಲೇಸು! ಸರ್ವಶಕ್ತರು ನನಗೆ ಉತ್ತರಕೊಡಲಿ; ನನ್ನ ವಿರೋಧಿಯು ನನ್ನ ಆಪಾದನಾ ಪತ್ರವನ್ನು ಬರೆದು ಕೊಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು