Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:8 - ಕನ್ನಡ ಸಮಕಾಲಿಕ ಅನುವಾದ

8 ದೇವರು ಭಕ್ತಿಹೀನನನ್ನು ಕಡಿದುಬಿಟ್ಟರೆ, ಅವನ ಪ್ರಾಣ ತೆಗೆದುಕೊಂಡರೆ, ಅವನಿಗೆ ನಿರೀಕ್ಷೆ ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇವರು ಭ್ರಷ್ಟನ ಆತ್ಮವನ್ನು ಕಡಿದು ಎಳೆಯುವಾಗ, ಅವನಿಗೆ ನಿರೀಕ್ಷೆಯೆಲ್ಲಿರುವುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದೇವರೇ ದುಷ್ಟನ ಪ್ರಾಣ ತೆಗೆವ ಕಾಲಕ್ಕೆ ಅವನಿಗೆಲ್ಲಿಂದ ಬಂದೀತು ಭರವಸೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇವರು ಭ್ರಷ್ಟನ ಆತ್ಮವನ್ನು ಕಡಿದೆಳೆಯುವಾಗ ಅವನಿಗೆ ನಿರೀಕ್ಷೆಯೆಲ್ಲಿಯದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೈವಿಕನಲ್ಲದವನ ಜೀವವನ್ನು ದೇವರು ತೆಗೆದುಹಾಕುವಾಗ ಅವನಿಗೆ ನಿರೀಕ್ಷೆಯೇ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:8
19 ತಿಳಿವುಗಳ ಹೋಲಿಕೆ  

ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?


ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವುದಿಲ್ಲ; ಪ್ರಾಣಬಿಡಬೇಕೆಂಬುದೇ ಅವರ ನಿರೀಕ್ಷೆಯಾಗಿರುವುದು.”


ದೇವರನ್ನು ಮರೆಯುವವರೆಲ್ಲರ ದಾರಿ ಹಾಗೆಯೇ; ಭಕ್ತಿಹೀನರ ನಿರೀಕ್ಷೆಯು ನಾಶವಾಗುವುದು.


ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡು, ತನ್ನನ್ನು ತಾನೇ ಹಾಳು ಮಾಡಿಕೊಂಡರೆ, ಇಲ್ಲವೆ ನಷ್ಟಪಡಿಸಿಕೊಂಡರೆ, ಆ ವ್ಯಕ್ತಿಗೆ ಪ್ರಯೋಜನವೇನು?


“ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.


ದುಷ್ಟರಿಗೆ ವಿಪತ್ತು ಇಲ್ಲವೋ? ಕೆಡುಕರಿಗೆ ವಿನಾಶ ಇಲ್ಲವೋ?


ದುಷ್ಟರ ಜಯವು ಅಲ್ಪ ಕಾಲ, ಭಕ್ತಿಹೀನರ ಸಂತೋಷವು ಕ್ಷಣ ಮಾತ್ರ.


ದೇವರಿಲ್ಲದವರ ಸಹವಾಸ ಬಂಜರು, ಬೆಂಕಿಯು ಲಂಚಕೋರರ ಮನೆಗಳನ್ನು ಸುಟ್ಟುಹಾಕುವುದು.


ಇದೇ ನನ್ನ ಬಿಡುಗಡೆಗೆ ಕಾರಣವಾಗಿರುವುದು; ಭಕ್ತಿಹೀನರು ದೇವರ ಮುಂದೆ ಬರಲು ಧೈರ್ಯಮಾಡುವುದಿಲ್ಲ.


ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲ; ಆದರೆ ಯಾರು ದೇವರಿಗೆ ಭಯಪಡುವವರಾಗಿದ್ದು ಅವರ ಚಿತ್ತದಂತೆ ನಡೆಯುತ್ತಾರೋ, ಅಂಥವರಿಗೆ ಕಿವಿಗೊಡುತ್ತಾರೆಂದು ನಾವು ಬಲ್ಲೆವು.


ನೀವು ತಿರುಗಿಕೊಂಡು ಯೆಹೋವ ದೇವರ ಮುಂದೆ ಅತ್ತಿರಿ. ಆದರೆ ಯೆಹೋವ ದೇವರು ನಿಮ್ಮ ಧ್ವನಿಗೆ ಕಿವಿಗೊಡಲಿಲ್ಲ.


ದೇವರ ಕೈಯಲ್ಲಿ ಎಲ್ಲಾ ಜೀವಿಗಳ ಪ್ರಾಣವೂ ಎಲ್ಲಾ ಮನುಷ್ಯರ ಶ್ವಾಸವೂ ಇವೆ.


“ನನ್ನ ಶತ್ರು ದುಷ್ಟನ ಹಾಗಿರಲಿ; ನನ್ನ ವಿರುದ್ಧ ಏಳುವವನು ಅನ್ಯಾಯವಂತನ ಹಾಗಿರಲಿ.


ನೀವು ನಿಮಗೆ ಆಯ್ದುಕೊಂಡ ನಿಮ್ಮ ಅರಸನ ನಿಮಿತ್ತ ಆ ದಿವಸದಲ್ಲಿ ಕೂಗುವಿರಿ, ಆದರೆ ಆ ದಿವಸದಲ್ಲಿ ಯೆಹೋವ ದೇವರು ನಿಮಗೆ ಕಿವಿಗೊಡುವುದಿಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು