Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:18 - ಕನ್ನಡ ಸಮಕಾಲಿಕ ಅನುವಾದ

18 ಹವಳವೂ, ಸೂರ್ಯಕಾಂತ ಶಿಲೆಯೂ ಜ್ಞಾನಕ್ಕೆ ಹೋಲಿಸಲು ಅರ್ಹವಲ್ಲ; ಜ್ಞಾನದ ಬೆಲೆಯು ಮಾಣಿಕ್ಯಗಳಿಗಿಂತ ಎಷ್ಟೋ ಶ್ರೇಷ್ಠ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಜ್ಞಾನವಿರುವಲ್ಲಿ ಹವಳವೂ, ಸ್ಫಟಿಕವೂ ನೆನಪಿಗೆ ಬರುವುದಿಲ್ಲ. ಮುತ್ತುಗಳನ್ನು ಸಂಪಾದಿಸುವುದಕ್ಕಿಂತಲೂ ಜ್ಞಾನವನ್ನು ಸಂಪಾದಿಸುವುದು ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸುಜ್ಞಾನವಿರುವಲ್ಲಿ ಹವಳ-ಸ್ಫಟಿಕಗಳು ನೆನಪಿಗೆ ಬಾರವು ಮಾಣಿಕ್ಯಗಳ ಸಂಪಾದನೆಗಿಂತ ಅದರ ಸಂಪಾದನೆ ಶ್ರೇಷ್ಠವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 [ಜ್ಞಾನವಿರುವಲ್ಲಿ] ಹವಳವೂ ಸ್ಪಟಿಕವೂ ನೆನಪಿಗೆ ಬರುವದಿಲ್ಲ. ಮುತ್ತುಗಳನ್ನು ಸಂಪಾದಿಸುವದಕ್ಕಿಂತಲೂ ಜ್ಞಾನವನ್ನು ಸಂಪಾದಿಸುವದು ಎಷ್ಟೋ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಜ್ಞಾನವು ಹವಳಕ್ಕಿಂತಲೂ ಸ್ಪಟಿಕಕ್ಕಿಂತಲೂ ಹೆಚ್ಚು ಬೆಲೆ ಬಾಳುತ್ತದೆ. ಜ್ಞಾನವು ಮಾಣಿಕ್ಯಕ್ಕಿಂತಲೂ ಅಮೂಲ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:18
13 ತಿಳಿವುಗಳ ಹೋಲಿಕೆ  

ಜ್ಞಾನವು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯ; ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವುದಿಲ್ಲ.


“ ‘ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮ್ಯರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.


ಅವಳ ರಾಜಕುಮಾರರು ಹಿಮಕ್ಕಿಂತಲೂ ಪ್ರಕಾಶಮಾನವಾಗಿದ್ದರು. ಹಾಲಿಗಿಂತಲೂ ಬೆಳ್ಳಗಿದ್ದರು. ಅವರು ಮೈಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು. ಅವರ ಹೊಳಪು ಇಂದ್ರನೀಲ ಮಣಿಯ ಹಾಗಿತ್ತು.


ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು? ಅವಳು ಹವಳಕ್ಕಿಂತಲೂ ಬಹು ಅಮೂಲ್ಯಳು.


ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿ ಹೆಬ್ಬಾಗಿಲೂ ಒಂದೊಂದು ಮುತ್ತಿನಿಂದಾಗಿತ್ತು. ಪಟ್ಟಣದ ಮಹಾ ಬೀದಿಯು ಸ್ವಚ್ಛವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.


ಅವರ ಸರಕುಗಳಾದ ಚಿನ್ನ, ಬೆಳ್ಳಿ, ಬೆಲೆಬಾಳುವ ಕಲ್ಲು ಹಾಗೂ ಮುತ್ತುಗಳು, ನಯವಾದ ನಾರುಮಡಿ, ಕಡುಗೆಂಪು ವಸ್ತ್ರ, ರೇಷ್ಮೆ, ಊದಾವರ್ಣದ ವಸ್ತ್ರ, ಅಗಿಲು ಮರ ಮತ್ತು ದಂತ ಪಾತ್ರೆಗಳು, ಬೆಲೆಬಾಳುವ ಮರ, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತ ಶಿಲೆ,


ಆ ಸ್ತ್ರೀಯು ನೇರಳೆ ಮತ್ತು ಕಡುಗೆಂಪು ಬಣ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ, ಅಮೂಲ್ಯವಾದ ಹರಳು, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ ಅಸಹ್ಯವಾದ ವಸ್ತುಗಳಿಂದಲೂ ಮತ್ತು ತನ್ನ ಅಶುದ್ಧ ಅನೈತಿಕತೆಯಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು.


ಹಾಗೆಯೇ ಸ್ತ್ರೀಯರು ಸಭ್ಯತೆ ಹಾಗೂ ಸ್ವಸ್ಥಬುದ್ಧಿಯುಳ್ಳವರಾಗಿದ್ದು ಗೌರವಕ್ಕೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ, ಚಿನ್ನ, ಮುತ್ತುಗಳು, ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ,


“ಪವಿತ್ರವಾದದ್ದನ್ನು ನಾಯಿಗಳಿಗೆ ಕೊಡಬೇಡಿರಿ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಚೆಲ್ಲಬೇಡಿರಿ. ಹಾಗೆ ಮಾಡಿದರೆ ಹಂದಿಗಳು ಮುತ್ತುಗಳನ್ನು ತಮ್ಮ ಕಾಲುಗಳಿಂದ ತುಳಿದು ಹಾಕಿಯಾವು. ನಾಯಿಗಳು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.


ಏಕೆಂದರೆ ಮಾಣಿಕ್ಯಗಳಿಗಿಂತ ಜ್ಞಾನವು ಅಮೂಲ್ಯವಾದದ್ದು. ಅಪೇಕ್ಷಿಸತಕ್ಕ ಯಾವ ವಸ್ತುಗಳನ್ನು ಅದಕ್ಕೆ ಹೋಲಿಸಲಾಗದು.


ಜ್ಞಾನವನ್ನು ಕಂಡುಕೊಳ್ಳುವವನು ಧನ್ಯನು, ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು.


ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ; ಆದರೆ ಪರಿಜ್ಞಾನದ ತುಟಿಗಳು ಅಪರೂಪದ ರತ್ನವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು