Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:19 - ಕನ್ನಡ ಸಮಕಾಲಿಕ ಅನುವಾದ

19 ಕೂಷ್ ದೇಶದ ಪುಷ್ಯರಾಗವು ಸಹ ಜ್ಞಾನಕ್ಕೆ ಹೋಲಿಸಲಾಗುವುದಿಲ್ಲ; ಶುದ್ಧ ಬಂಗಾರದಿಂದಲೂ ಜ್ಞಾನವನ್ನು ಕೊಂಡುಕೊಳ್ಳಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕೂಷ್ ದೇಶದ ಪುಷ್ಯರಾಗವು ಅದಕ್ಕೆ ಸಾಟಿಯಿಲ್ಲ, ಶುದ್ಧ ಕನಕದೊಡನೆ ಅದನ್ನು ತೂಗಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕೂಷ್ ದೇಶದ ಪುಷ್ಯರಾಗವು ಅದಕ್ಕೆ ಸಾಟಿಯಲ್ಲ ಶುದ್ಧ ಕನಕದೊಡನೆ ಅದನು ತೂಕಮಾಡಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕೂಷ್ ದೇಶದ ಪುಷ್ಯರಾಗವು ಅದಕ್ಕೆ ಸಾಟಿಯಲ್ಲ, ಶುದ್ಧ ಕನಕದೊಡನೆ ಅದನ್ನು ತೂಗಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಇಥಿಯೋಪಿಯಾ ದೇಶದ ಪುಷ್ಯರಾಗವೂ ಜ್ಞಾನದಷ್ಟು ಅಮೂಲ್ಯವಲ್ಲ. ಶುದ್ಧಬಂಗಾರವನ್ನು ಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲು ಅಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:19
8 ತಿಳಿವುಗಳ ಹೋಲಿಕೆ  

ದೇವರ ತೋಟವಾದ ಏದೆನಿನಲ್ಲಿ ನೀನಿದ್ದೆ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು, ಸ್ಪಟಿಕ ಚಿನ್ನ ಈ ಅಮೂಲ್ಯವಾದವುಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.


ನನ್ನ ಫಲವು ಬಂಗಾರಕ್ಕಿಂತಲೂ, ನನ್ನ ಆದಾಯವು ಉತ್ತಮವಾದ ಬೆಳ್ಳಿಗಿಂತಲೂ ಶ್ರೇಷ್ಠವಾಗಿವೆ.


ನಂತರ ಅದರಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಜೋಡಿಸಿದರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಪಟಿಕಗಳಿದ್ದವು.


ನಂತರ ಅದರಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಜೋಡಿಸಬೇಕು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಫಟಿಕಗಳಿರಬೇಕು.


ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಬತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ, ಹನ್ನೆರಡನೆಯದು ನೀಲ ಸ್ಪಟಿಕ.


ಆದರೆ ಜ್ಞಾನವು ಎಲ್ಲಿಂದ ಬರುವುದು? ಗ್ರಹಿಕೆಯ ಸ್ಥಳವು ಎಲ್ಲಿ?


ಜ್ಞಾನವನ್ನು ಕಂಡುಕೊಳ್ಳುವವನು ಧನ್ಯನು, ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು.


ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ; ಆದರೆ ಪರಿಜ್ಞಾನದ ತುಟಿಗಳು ಅಪರೂಪದ ರತ್ನವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು