Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:22 - ಕನ್ನಡ ಸಮಕಾಲಿಕ ಅನುವಾದ

22 ನನ್ನ ಮಾತಿನ ಮೇಲೆ ಅವರು ಬೇರೆ ಮಾತನಾಡುತ್ತಿರಲಿಲ್ಲ; ನನ್ನ ನುಡಿ ಅವರ ಕಿವಿಗೆ ಬೀಳುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನು ಮಾತನಾಡಿದ ಮೇಲೆ ಮತ್ತೆ ಅವರು ಮಾತನಾಡುತ್ತಿರಲಿಲ್ಲ, ನನ್ನ ವಚನವೃಷ್ಟಿಯು ಅವರ ಮೇಲೆ ಬೀಳುತ್ತಿತ್ತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಾನು ಮಾತಾಡಿದ ಮೇಲೆ ಅವರು ಮಾತೆತ್ತುತ್ತಿರಲಿಲ್ಲ ನನ್ನ ಮಾತು ಹನಿಹನಿಯಾಗಿ ಅವರ ಕಿವಿಗೆ ಬೀಳುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಾನು ಮಾತಾಡಿದ ಮೇಲೆ ಮತ್ತೆ ಅವರು ಮಾತಾಡುತ್ತಿರಲಿಲ್ಲ, ನನ್ನ ವಚನವೃಷ್ಟಿಯು ಅವರ ಮೇಲೆ ಬೀಳುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನನ್ನ ಮಾತುಗಳು ಪರಿಪೂರ್ಣವಾಗಿದ್ದ ಕಾರಣ ಅದಕ್ಕೆ ಬೇರೇನೂ ಸೇರಿಸಲು ಅವರಿಗೆ ಸಾಧ್ಯವಿರಲಿಲ್ಲ. ನನ್ನ ಮಾತುಗಳು ಅವರ ಕಿವಿಗಳಿಗೆ ಕೋಮಲವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:22
14 ತಿಳಿವುಗಳ ಹೋಲಿಕೆ  

ನನ್ನ ಬೋಧನೆ ಮಳೆಯಂತೆ ಸುರಿಯುವುದು. ನನ್ನ ಮಾತು ಮಂಜಿನಂತೆಯೂ, ಹುಲ್ಲಿನ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವುದು.


ಅದಕ್ಕೆ ಯಾರೂ ಒಂದು ಮಾತನ್ನು ಸಹ ಯೇಸುವಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರಿಗೂ ಧೈರ್ಯ ಬರಲಿಲ್ಲ.


“ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ, ದಕ್ಷಿಣದ ಕಡೆಗೆ ಮಾತನಾಡು. ದಕ್ಷಿಣ ಬಯಲು ಮರುಭೂಮಿಗೆ ವಿರೋಧವಾಗಿ ಪ್ರವಾದಿಸು.


ಹಾಗೆಯೇ ಅನೇಕ ಜನಾಂಗಗಳನ್ನು ಆತನು ವಿಸ್ಮಯಗೊಳಿಸುವನು. ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು. ಏಕೆಂದರೆ ಅವರಿಗೆ ತಿಳಿಸದಿರುವ ಸಂಗತಿಯನ್ನು ಅವರು ನೋಡುವರು, ಕೇಳದೇ ಇರುವುದನ್ನು ಗ್ರಹಿಸಿಕೊಳ್ಳುವರು.


ನನ್ನ ವಧುವೇ, ನಿನ್ನ ತುಟಿಗಳಿಂದ ಜೇನು ಸುರಿಯುತ್ತಿದೆ. ಹಾಲೂ, ಜೇನೂ ನಿನ್ನ ನಾಲಿಗೆ ಅಡಿಯಲ್ಲಿವೆ. ನಿನ್ನ ವಸ್ತ್ರಗಳ ಸುವಾಸನೆಯು ಲೆಬನೋನಿನ ಸುಗಂಧದಂತಿದೆ.


“ಪ್ರವಾದಿಸಬೇಡ, ಈ ಸಂಗತಿಗಳ ಬಗ್ಗೆ ಪ್ರವಾದನೆ ಹೇಳಬೇಡ. ಅವಮಾನ ನಮ್ಮ ಮೇಲೆ ಬರುವುದೇ ಇಲ್ಲ,” ಎಂದು ಅವರ ಪ್ರವಾದಿಗಳು ಹೇಳುತ್ತಾರೆ.


ಹೀಗಿರುವುದರಿಂದ ನೀನು ಈಗ ಯೆಹೋವ ದೇವರ ವಾಕ್ಯವನ್ನು ಕೇಳು: ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ, ಇಸಾಕನ ಮನೆತನಕ್ಕೆ ವಿರೋಧವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವೆಯಲ್ಲಾ.


ಘನವಂತರು ಮೌನ ತಾಳುತ್ತಿದ್ದರು; ಅವರ ನಾಲಿಗೆ ಅವರ ಬಾಯಿಯ ಅಂಗಳಕ್ಕೆ ಅಂಟಿರುತ್ತಿತ್ತು.


ಮಳೆಯಂತೆ ನನ್ನನ್ನು ಎದುರುನೋಡುತ್ತಿದ್ದರು. ಮುಂಗಾರಿನ ಮಳೆಯಹಾಗೆ ನನ್ನ ಮಾತುಗಳಲ್ಲಿ ಉಲ್ಲಾಸಿಸುತ್ತಿದ್ದರು.


“ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖವಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸಿ,


“ಪೂರ್ವದಲ್ಲಿ ಎಫ್ರಾಯೀಮು ಮಾತನಾಡುವಾಗ, ಅವನು ತನ್ನನ್ನು ಇಸ್ರಾಯೇಲಿನಲ್ಲಿ ಹೆಚ್ಚಿಸಿಕೊಂಡನು. ಆದರೆ ಬಾಳನ ಆರಾಧನೆಯಲ್ಲಿ ಅವನು ಅಪರಾಧಿಯಾಗಿ ಸತ್ತನು.


ಅವರು ಅಸ್ಸೀರಿಯ ದೇಶವನ್ನು ಖಡ್ಗದಿಂದಲೂ ನಿಮ್ರೋದನ ದೇಶವನ್ನು ಹಿಡಿದ ಖಡ್ಗದಿಂದಲೂ ಆಳುವರು. ಅಸ್ಸೀರಿಯವು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರದೇಶವನ್ನು ಮುತ್ತಿಗೆ ಹಾಕಿ ಪ್ರಾಂತಗಳಲ್ಲಿ ನಡೆಯುವಾಗ ಆತನು ನಮ್ಮನ್ನು ತಪ್ಪಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು