Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:6 - ಕನ್ನಡ ಸಮಕಾಲಿಕ ಅನುವಾದ

6 ನನ್ನ ಹೆಜ್ಜೆಗಳನ್ನು ಮೊಸರಿನಿಂದ ತೊಳೆಯುತ್ತಾ ಇದ್ದೆನು; ಬಂಡೆಯಿಂದ ನನಗೆ ಓಲಿವ್ ಎಣ್ಣೆ ಪ್ರವಾಹವಾಗಿ ಸುರಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹಾಲು ತುಪ್ಪದಲ್ಲಿ ನನ್ನ ಪಾದಗಳನ್ನು ತೊಳೆಯುತ್ತಿದ್ದೆ, ಬಂಡೆಯು ನನಗೋಸ್ಕರ ಎಣ್ಣೆಯನ್ನು ಪ್ರವಾಹವಾಗಿ ಸುರಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹಾಲುತುಪ್ಪದಲ್ಲಿ ಪಾದ ತೊಳೆಯುತ್ತಿದ್ದೆ ಎಣ್ಣೆಯನು ನದಿಯಂತೆ ಹರಿಸುತ್ತಿತ್ತಾ ದಿಣ್ಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ಹೆಜ್ಜೆಗಳು ಮೊಸರಿನಲ್ಲಿ ಮುಣುಗುತ್ತಿದ್ದವು, ಬಂಡೆಯು ನನಗೋಸ್ಕರ ಎಣ್ಣೆಯನ್ನು ಪ್ರವಾಹವಾಗಿ ಸುರಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ದಿನಗಳಲ್ಲಿ ನನ್ನ ಜೀವಿತವು ತುಂಬ ಚೆನ್ನಾಗಿತ್ತು. ನನ್ನ ಮಾರ್ಗಗಳು ಕೆನೆಯಿಂದ ತುಂಬಿರುವಂತೆಯೂ ಬಂಡೆಗಳು ನನಗಾಗಿ ಆಲೀವ್ ಎಣ್ಣೆಯ ನದಿಗಳನ್ನೇ ಹರಿಸುತ್ತಿರುವಂತೆಯೂ ನನ್ನ ಜೀವಿತವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:6
7 ತಿಳಿವುಗಳ ಹೋಲಿಕೆ  

ನಿಮಗಾದರೋ ಉತ್ತಮವಾದ ಗೋಧಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ನಿಮ್ಮನ್ನು ತೃಪ್ತಿಪಡಿಸುವೆನು.”


ಅವನು ಜೇನು, ಮೊಸರೂ ಹರಿಯುವ ಹಳ್ಳಗಳನ್ನೂ, ಸಮೃದ್ಧಿಯಾಗಿ ಹರಿಯುವ ನದಿಗಳನ್ನೂ ನೋಡನು.


ಮೋಶೆ ಆಶೇರನ ವಿಷಯವಾಗಿ ಹೇಳಿದ್ದೇನೆಂದರೆ: “ಪುತ್ರರಲ್ಲಿಯೇ ಶ್ರೇಷ್ಠನಾದ ಆಶೇರನು ಭಾಗ್ಯ ಹೊಂದಲಿ. ಅವನ ಸಹೋದರರು ಅವನನ್ನು ಮೆಚ್ಚಿಕೊಳ್ಳಲಿ, ಎಣ್ಣೆಯಲ್ಲಿ ಪಾದಸ್ನಾನ ಮಾಡುವಂತಾಗಲಿ.


ಅವನು ತನ್ನ ವಾಹನ ಪಶುವನ್ನು ದ್ರಾಕ್ಷಾಲತೆಗೆ ಕಟ್ಟುವನು. ರಾಜದ್ರಾಕ್ಷೆಗೆ ತನ್ನ ಕತ್ತೆಯನ್ನು ಬಿಗಿಯುವನು. ದ್ರಾಕ್ಷಾರಸದಲ್ಲಿ ತನ್ನ ಬಟ್ಟೆ ಒಗೆಯುವನು, ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು.


ಆಗ ಸರ್ವಶಕ್ತರು ನನ್ನ ಸಂಗಡ ಇರುತ್ತಿದ್ದರು; ನನ್ನ ಸುತ್ತಲೂ ನನ್ನ ಮಕ್ಕಳು ಇದ್ದರು.


ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ, ನಿನ್ನ ಆಹಾರವು ನಯವಾದ ಹಿಟ್ಟು, ಜೇನು, ಎಣ್ಣೆ ತಿನ್ನುತ್ತಿದ್ದೆ. ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು