Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:12 - ಕನ್ನಡ ಸಮಕಾಲಿಕ ಅನುವಾದ

12 ತಾಯಿಯ ಮಡಿಲು ನನ್ನನ್ನು ಸ್ವಿಕರಿಸಿದ್ದೇಕೆ? ತಾಯಿಯ ಮೊಲೆಹಾಲು ಕುಡಿಯಮಾಡಿದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತಾಯಿಯ ಮಡಿಲು ನನ್ನನ್ನು ಹೊತ್ತದ್ದೇಕೆ? ತಾಯಿಯ ಮೊಲೆಗಳು ನನಗೆ ಕುಡಿಯ ಕೊಟ್ಟದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತಾಯಿಯ ಮಡಿಲು ನನ್ನನು ಹೊತ್ತುದೇಕೆ? ಆ ತಾಯ್ಮೊಲೆಗಳು ನನಗೆ ಕುಡಿಯಕೊಟ್ಟುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತಂದೆಯ ತೊಡೆಯು ನನ್ನನ್ನು ಹೊತ್ತದ್ದೇಕೆ? ತಾಯಿಯ ಮೊಲೆಗಳು ಕುಡಿಯಗೊಟ್ಟದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ತಾಯಿಯು ತನ್ನ ಮಡಿಲಲ್ಲಿ ನನ್ನನ್ನು ಹೊತ್ತುಕೊಂಡದ್ದೇಕೆ? ಆಕೆಯ ಸ್ತನಗಳು ನನಗೆ ಹಾಲು ಕುಡಿಯಕೊಟ್ಟದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:12
6 ತಿಳಿವುಗಳ ಹೋಲಿಕೆ  

ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ನದಿಯಂತೆ ಸಮಾಧಾನವನ್ನೂ, ಹರಿಯುವ ಹಳ್ಳದಂತೆ ಜನಾಂಗಗಳ ವೈಭವವನ್ನೂ ಆಕೆಯ ಕಡೆಗೆ ಬರಮಾಡುವೆನು. ಆಗ ನೀವು ಪಾನ ಮಾಡುವಿರಿ; ನಿಮ್ಮನ್ನು ಆಕೆಯ ಪಕ್ಕೆಯಲ್ಲಿ ಎತ್ತಿಕೊಂಡುಹೋಗುವರು. ನೀವು ಆಕೆಯ ಮಡಿಲಲ್ಲಿ ನಲಿದಾಡುವಿರಿ.


ಅದಕ್ಕೆ ಆಕೆಯು, “ನನ್ನ ದಾಸಿ ಬಿಲ್ಹಳು ಇದ್ದಾಳೆ, ಅವಳ ಬಳಿಗೆ ಹೋಗು, ಅವಳು ಹೆತ್ತು ನನ್ನ ಮಡಿಲಲ್ಲಿ ಇಡಲಿ. ಅವಳಿಂದ ನನಗೆ ಮಕ್ಕಳಾಗುವರು,” ಎಂದಳು.


ಯೋಸೇಫನು ಎಫ್ರಾಯೀಮನ ಮರಿಮೊಮ್ಮಕ್ಕಳನ್ನೂ ಕಂಡನು. ಮನಸ್ಸೆಯ ಮಗ ಮಾಕೀರನ ಮಕ್ಕಳೂ ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.


“ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ? ನಾನು ಗರ್ಭದಿಂದ ಬಂದಾಗಲೇ ಏಕೆ ಪ್ರಾಣ ಬಿಡಲಿಲ್ಲ?


ಆಗ ಸತ್ತಿದ್ದರೆ ನಾನು ಶಾಂತವಾಗಿ ಮಲಗಿಕೊಳ್ಳುತ್ತಿದ್ದೆನು; ನಾನು ವಿಶ್ರಾಂತಿಯಲ್ಲಿರುತ್ತಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು