Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:13 - ಕನ್ನಡ ಸಮಕಾಲಿಕ ಅನುವಾದ

13 ಆಗ ಸತ್ತಿದ್ದರೆ ನಾನು ಶಾಂತವಾಗಿ ಮಲಗಿಕೊಳ್ಳುತ್ತಿದ್ದೆನು; ನಾನು ವಿಶ್ರಾಂತಿಯಲ್ಲಿರುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗಲೇ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ, ಕಣ್ಣು ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ ಕಣ್ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹಾಗಿಲ್ಲದಿದ್ದರೆ ನಾನು ಮಲಗಿ ಸುಮ್ಮನಿದ್ದು ನಿದ್ರೆಮಾಡುತ್ತಿದ್ದೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ಹುಟ್ಟಿದಾಗಲೇ ಸತ್ತುಹೋಗಿದ್ದರೆ, ಸಮಾಧಾನದಿಂದ ನಿದ್ರೆಮಾಡುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:13
22 ತಿಳಿವುಗಳ ಹೋಲಿಕೆ  

ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಒಬ್ಬ ವ್ಯಕ್ತಿಯು ಸುಖವಾಗಿಯೂ, ಸಮೃದ್ಧನಾಗಿಯೂ, ನೆಮ್ಮದಿಯಿಂದ ಇರುವಾಗಲೂ ಸಾಯುತ್ತಾನೆ.


ಅವರು ಸಂಪತ್ತಿನಲ್ಲಿ ತಮ್ಮ ದಿನಗಳನ್ನು ಕಳೆಯುತ್ತಾರೆ; ಕೊನೆಗೆ ಸಮಾಧಾನದಿಂದ ಸಮಾಧಿಗೆ ಸೇರುತ್ತಾರೆ.


ದೇವರನ್ನು ನಾನೇ ನೋಡುವೆನು; ಬೇರೆಯವರಲ್ಲ, ನನ್ನ ಕಣ್ಣಾರೆ ಅವರನ್ನು ಕಾಣುವೆನು; ಅದಕ್ಕಾಗಿ ನನ್ನ ಹೃದಯವು ನನ್ನೊಳಗೆ ಹಂಬಲಿಕೆಯಿಂದ ಹಾರೈಸುತ್ತಿದೆ!


ಸಮಾಧಿಯೇ ನನ್ನ ಮನೆಯೆಂದು ನಾನು ನಿರೀಕ್ಷಿಸಿದರೆ, ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿಕೊಂಡರೆ,


ಆ ದೇಶದಲ್ಲಿ ಕಾರ್ಗತ್ತಲೂ, ಗಾಢಾಂಧಕಾರವೂ ಮರಣದ ತುಂಬಿರುವುದು. ಕ್ರಮವಿಲ್ಲದ ಆ ದೇಶದಲ್ಲಿ ಬೆಳಕೂ ಕತ್ತಲೆಯೇ.”


ನೀವು ನನ್ನ ಅಪರಾಧವನ್ನು ಪರಿಹರಿಸಬಾರದೇ? ನನ್ನ ಪಾಪವನ್ನು ಕ್ಷಮಿಸಬಾರದೇ? ನಾನು ಬೇಗ ಮಣ್ಣಿಗೆ ಸೇರಿಬಿಡುವೆನು; ನೀವು ನನ್ನನ್ನು ಹುಡುಕಿದರೆ ನಾನು ಇರುವುದಿಲ್ಲ.”


ತಾಯಿಯ ಮಡಿಲು ನನ್ನನ್ನು ಸ್ವಿಕರಿಸಿದ್ದೇಕೆ? ತಾಯಿಯ ಮೊಲೆಹಾಲು ಕುಡಿಯಮಾಡಿದ್ದೇಕೆ?


ನಾನು ಹಿಂದಿರುಗಲಾಗದ ಮಬ್ಬಾಗಿರುವ ಕತ್ತಲೆಯ ದೇಶಕ್ಕೆ ಸೇರಲಿರುವೆನು.


ನೀವು ಅವನ ಮೇಲೆ ಶಾಶ್ವತವಾಗಿ ಮೇಲುಗೈ ಸಾಧಿಸಿರುವದರಿಂದ ಅವನು ಹೊರಟು ಹೋಗುವನು; ನೀವು ಅವನ ಮುಖಭಾವವನ್ನು ಮಾರ್ಪಡಿಸಿ, ಅವನನ್ನು ಕಳುಹಿಸಿಬಿಡುತ್ತೀರಿ.


“ನಾನು ಹಿಂದಿರುಗಿ ಬಾರದ ದಾರಿಯನ್ನು ಹಿಡಿಯಲು, ಇನ್ನೂ ಕೆಲವೇ ವರ್ಷಗಳು ಉಳಿದಿವೆ.


ನನ್ನ ವಿಮೋಚಕರು ಜೀವಿಸುತ್ತಿದ್ದಾರೆ ಎಂದು ತಿಳಿದಿದ್ದೇನೆ. ಕಡೆಯ ದಿನದಲ್ಲಿ ಭೂಮಿಯ ಮೇಲೆ ನನ್ನ ವಿಮೋಚಕರು ಬಂದು ನಿಲ್ಲುವರೆಂದೂ ತಿಳಿದಿದ್ದೇನೆ.


ಇವರಿಬ್ಬರೂ ಮಣ್ಣಿಗೆ ಸೇರುತ್ತಾರೆ; ಹುಳುಗಳು ಅವರನ್ನು ಮುತ್ತಿಕೊಳ್ಳುತ್ತವೆ.


ಬರಗಾಲದ ಬಿಸಿಲು ಹಿಮದ ನೀರನ್ನು ಹೀರಿಕೊಳ್ಳುವಂತೆ, ಪಾಪಮಾಡಿದವರನ್ನು ಸಮಾಧಿಯು ಹೀರಿಕೊಳ್ಳುತ್ತದೆ.


ಹೆತ್ತ ಕರುಳು ಅಂಥವರನ್ನು ಮರೆತು ಬಿಡುವುದು; ಹುಳವು ಅಂಥವರ ಹೆಣವನ್ನು ರುಚಿಯಿಂದ ತಿಂದುಬಿಡುವುದು; ಇನ್ನು ಅವರ ನೆನಪು ಇರುವುದಿಲ್ಲ; ಮರದ ಹಾಗೆ ದುಷ್ಟರು ಮುರಿದುಹೋಗುವರು.


“ಸಾಗರದ ಕೆಳಗಿನ ಲೋಕದಲ್ಲಿ ವಾಸಿಸುವ ಸತ್ತವರ ಆತ್ಮಗಳು ಆಳವಾದ ಯಾತನೆಯಲ್ಲಿವೆ.


ಪಾತಾಳವು ದೇವರ ದೃಷ್ಟಿಗೆ ತೆರೆದಿದೆ; ನಾಶಲೋಕವು ದೇವರಿಗೆ ಮರೆಯಾಗಿಲ್ಲ.


ಆದ್ದರಿಂದ ದೇವರ ದೃಷ್ಟಿಯಿಂದ ದುಷ್ಟರು ಅಡಗಿಕೊಳ್ಳಲು, ಗಾಢಾಂಧಕಾರವೂ ಇಲ್ಲ, ನೆರಳೂ ಇರುವುದಿಲ್ಲ.


ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತಹ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಖಡ್ಗಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ. ಅವರ ಗುರಾಣಿಗಳು ಅವರ ಮೂಳೆಗಳ ಮೇಲೆ ಇಡಲಾದವು. ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರರಾಗಿದ್ದರೂ ಅವರ ಅಕ್ರಮಗಳು ಅವರ ಎಲುಬುಗಳ ಮೇಲೆ ಇರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು