Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:14 - ಕನ್ನಡ ಸಮಕಾಲಿಕ ಅನುವಾದ

14 ಭೂಲೋಕದಲ್ಲಿ ಹಾಳುಬಿದ್ದ ಪಟ್ಟಣಗಳನ್ನು ತಮಗಾಗಿ ಕಟ್ಟಿಸಿಕೊಂಡ ರಾಜರೊಂದಿಗೂ ಮಂತ್ರಿಗಳೊಡನೆಯೂ ನಾನಿರುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಭೂಲೋಕದಲ್ಲಿ ಹಾಳುಬಿದ್ದ ಪಟ್ಟಣಗಳನ್ನು ತಮ್ಮ ಸಮಾಧಿಗಾಗಿ ಕಟ್ಟಿಸಿಕೊಂಡ ಅರಸರೊಂದಿಗೂ, ಮಂತ್ರಿಗಳೊಡನೆಯೂ ನಾನಿರುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪಾಳು ಪೊಡವಿಯಲ್ಲಿ ನೆಲಮಾಳಿಗೆಗಳನ್ನು ನಿರ್ಮಿಸಿಕೊಂಡಿದ್ದ ರಾಜ-ಮಂತ್ರಿಗಳೊಡನೆ ನಾನಿರುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಭೂಲೋಕದಲ್ಲಿ ಹಾಳುಬಿದ್ದ ಪಟ್ಟಣಗಳನ್ನು ತಮಗಾಗಿ ಕಟ್ಟಿಸಿಕೊಂಡ ಅರಸರೊಂದಿಗೂ ಮಂತ್ರಿಗಳೊಡನೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಭೂರಾಜರೊಂದಿಗೂ ಮಂತ್ರಿಗಳೊಂದಿಗೂ ವಿಶ್ರಮಿಸಿಕೊಳ್ಳುತ್ತಿದ್ದೆನು. ಅವರು ತಮಗಾಗಿ ಕಟ್ಟಿಸಿಕೊಂಡ ಪಟ್ಟಣಗಳು ಈಗ ಹಾಳುಬಿದ್ದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:14
17 ತಿಳಿವುಗಳ ಹೋಲಿಕೆ  

ಹಾಳಾದ ಪಟ್ಟಣಗಳಲ್ಲಿಯೂ, ಯಾರೂ ವಾಸಿಸದ, ಕುಸಿಯಲು ಸಿದ್ಧವಾದಂಥ ಮನೆಗಳಲ್ಲಿಯೂ ವಾಸಮಾಡಿಕೊಂಡಿದ್ದಾನೆ.


ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವವುಳ್ಳವರ ಲೋಕದಲ್ಲಿ ನೆಲೆಗೊಳಿಸದೆ ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರೊಂದಿಗೆ ವಾಸಿಸುವಂತೆ ಸೇರಿಸುವೆನು.


ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು. ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳನ್ನು ನೀನು ಎಬ್ಬಿಸುವೆ. ಬಿದ್ದ ಗೋಡೆಯನ್ನು ಎಬ್ಬಿಸುವ ದೇಶ ಎಂದೂ, ನಿವಾಸಿಗಳಿಗಾಗಿ ನಡೆದಾಡಲು ಹಾದಿಗಳನ್ನು ಉಂಟುಮಾಡುವ ದೇಶ ಎಂದೂ ನಿನಗೆ ಬಿರುದು ಬರುವುದು.


ಅಯ್ಯೋ, ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ, ಹೊಲಕ್ಕೆ ಹೊಲ ಸೇರಿಸುವ ನಿಮಗೆ ಕಷ್ಟ!


ನಮ್ಮ ಆತ್ಮವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಹಾಗೆಯೇ ಸಾಯುವ ಸಮಯವನ್ನು ತಡೆಯುವ ಶಕ್ತಿಯು ಸಹ ಯಾರಿಗೂ ಇಲ್ಲ. ಯುದ್ಧ ಸಮಯದಲ್ಲಿ ಹೇಗೆ ವಿರಾಮ ಇರುವುದಿಲ್ಲವೋ, ಹಾಗೆಯೇ ದುಷ್ಟನಿಗೆ ದುಷ್ಟತ್ವದಿಂದ ಬಿಡುಗಡೆಯೇ ಇಲ್ಲ.


ಮರಣವನ್ನು ಕಾಣದೆ ಬದುಕುವಂಥವರು ಯಾರು? ಸಮಾಧಿಯ ಶಕ್ತಿಯಿಂದ ಪ್ರಾಣವನ್ನು ತಪ್ಪಿಸಿಕೊಳ್ಳುವಂಥವರು ಯಾರು?


ಅವರು ಕುರಿಗಳಂತೆ ಸಾಯಲು ನೇಮಕವಾಗಿದ್ದಾರೆ. ಮರಣವೇ ಅವರ ಕುರುಬ; ಅವರ ವೈಭವ ನಿವಾಸದಿಂದ ದೂರ ಸಮಾಧಿಯಲ್ಲಿರುವುದು ಅವರ ರೂಪ ಕ್ಷಯವಾಗುವುದು. ಆದರೆ ಯಥಾರ್ಥರು ಬೆಳಿಗ್ಗೆ ಅವರನ್ನು ಬಿಟ್ಟು ಸಾಗುತ್ತಿರುವರು.


ದೇವರೇ, ನೀವು ನನ್ನನ್ನು ಎಲ್ಲಾ ಜೀವಿಗಳಿಗೆ ನೇಮಕವಾದ ಮನೆಯೆಂಬ ಮರಣಕ್ಕೆ, ಸೇರಿಸುವಿರಿ ಎಂದು ನನಗೆ ಗೊತ್ತಿದೆ.


ದೇವರು ಸಲಹೆಗಾರರನ್ನು ಸೆರೆಹಿಡಿಯುತ್ತಾರೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾರೆ.


ಸೊಲೊಮೋನನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ಅವನ ತಂದೆ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ರೆಹಬ್ಬಾಮನು ಅವನಿಗೆ ಬದಲಾಗಿ ಅರಸನಾದನು.


ಹೀಗೆಯೇ ದಾವೀದನು ಮರಣಹೊಂದಿ ತನ್ನ ಪಿತೃಗಳ ಜೊತೆ ಸೇರಿದನು. ದಾವೀದನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು.


ದೇವರು ಅರಸರಿಂದ ಹಾಕಲಾದ ಬಂಧನಗಳನ್ನು ಬಿಚ್ಚಿ, ಅವರ ನಡುಗಳಿಗೆ ವಸ್ತ್ರವನ್ನು ಕಟ್ಟುತ್ತಾರೆ.


ಜನಾಂಗಗಳ ಅರಸರೆಲ್ಲಾ ವೈಭವದಿಂದ ತಮ್ಮ ತಮ್ಮ ಸಮಾಧಿಗಳಲ್ಲಿ ಮಲಗುತ್ತಾರೆ.


ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ನಿನಗೆ ಸಮಾಧಿಯನ್ನು ತೋಡಿಸಿದೆ, ಬಂಡೆಯಲ್ಲಿ ನಿನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದಿ ಅಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು