Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:19 - ಕನ್ನಡ ಸಮಕಾಲಿಕ ಅನುವಾದ

19 ಅಲ್ಲಿ ಕಿರಿಯರು ಹಿರಿಯರು ಎಂಬ ಭೇದ ಇಲ್ಲಾ; ಗುಲಾಮರು ಯಜಮಾನರಿಂದ ಬಿಡುಗಡೆಯಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅಲ್ಲಿ ದೊಡ್ಡವರು, ಚಿಕ್ಕವರು ಎಂಬ ಭೇದವಿಲ್ಲಾ. ಆಳು, ಒಡೆಯ ಎಂಬ ಕಟ್ಟಳೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಚಿಕ್ಕವರು ದೊಡ್ಡವರು ಎಂಬ ತಾರತಮ್ಯ ಅಲ್ಲಿಲ್ಲ ಗುಲಾಮ ಯಜಮಾನನೆಂಬ ನಿಯಮವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅಲ್ಲಿ ದೊಡ್ಡವರು, ಚಿಕ್ಕವರು ಎಂಬ ಭೇದವಿಲ್ಲಾ, ಆಳು, ಒಡೆಯ ಎಂಬ ಕಟ್ಟಳೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸಮಾಧಿಯಲ್ಲಿ ದೊಡ್ಡವರು, ಚಿಕ್ಕವರು ಎಂಬ ಭೇದವಿಲ್ಲ; ಆಳು, ಒಡೆಯ ಎಂಬ ಕಟ್ಟಳೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:19
13 ತಿಳಿವುಗಳ ಹೋಲಿಕೆ  

ದೇವರೇ, ನೀವು ನನ್ನನ್ನು ಎಲ್ಲಾ ಜೀವಿಗಳಿಗೆ ನೇಮಕವಾದ ಮನೆಯೆಂಬ ಮರಣಕ್ಕೆ, ಸೇರಿಸುವಿರಿ ಎಂದು ನನಗೆ ಗೊತ್ತಿದೆ.


ಒಂದೇ ಸಾರಿ ಸಾಯುವುದೂ ತರುವಾಯ ನ್ಯಾಯತೀರ್ಪು ಪಡೆಯುವುದೂ ಮನುಷ್ಯರಿಗಾಗಿ ನೇಮಕವಾಗಿದೆ.


ಆಮೇಲೆ ಮಣ್ಣಿನ ದೇಹ ಅದು ಇದ್ದ ಹಾಗೆಯೇ ಭೂಮಿಗೆ ಸೇರುವುದು. ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂದಿರುಗುವುದು.


ಎತ್ತರವನ್ನು ಕಂಡು ಹೆದರಿಕೆಯಾಗುವುದು. ದಾರಿಯ ಅಪಾಯಗಳ ಬಗ್ಗೆ ಅಂಜಿಕೆಯಾಗುವುದು. ಬಾದಾಮಿಯ ಮರದಂತೆ ಹೂವು ಬಿಡುವುದು. ಮಿಡತೆಯು ಸಹ ಭಾರಾವಾಗಿರುವುದು. ಆಸೆ ಕುಂದಿಹೋಗುವುದು. ಈ ರೀತಿಯಾಗಿ ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಟು ಹೋಗುವರು. ಗೋಳಾಡುವವರು ಬೀದಿಯಲ್ಲಿ ತಿರುಗಾಡುವರು.


ನಮ್ಮ ಆತ್ಮವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಹಾಗೆಯೇ ಸಾಯುವ ಸಮಯವನ್ನು ತಡೆಯುವ ಶಕ್ತಿಯು ಸಹ ಯಾರಿಗೂ ಇಲ್ಲ. ಯುದ್ಧ ಸಮಯದಲ್ಲಿ ಹೇಗೆ ವಿರಾಮ ಇರುವುದಿಲ್ಲವೋ, ಹಾಗೆಯೇ ದುಷ್ಟನಿಗೆ ದುಷ್ಟತ್ವದಿಂದ ಬಿಡುಗಡೆಯೇ ಇಲ್ಲ.


ಸಾಮಾನ್ಯರೇ, ಉನ್ನತರೇ, ಐಶ್ವರ್ಯವಂತರೇ, ಬಡವರೇ ಎಲ್ಲರೂ ಕಿವಿಗೊಡಿರಿ.


ಸೆರೆಯವರು ಕೂಡ ಶಾಂತವಾಗಿರುತ್ತಾರೆ; ಬಾಧೆಪಡಿಸುವವನ ಶಬ್ದವನ್ನು ಕೇಳುವುದಿಲ್ಲ.


“ಕಷ್ಟದಲ್ಲಿ ಇರುವವನಿಗೆ ಬೆಳಕೂ ಕಹಿ ಮನಸ್ಸುಳ್ಳವರಿಗೆ ಜೀವವನ್ನು ಕೊಡುವುದೇಕೆ?


ಕಣಿವೆಯಲ್ಲಿನ ಮಣ್ಣು ಅವರಿಗೆ ಸಿಹಿಯಾಗಿರುತ್ತದೆ; ಪ್ರತಿಯೊಬ್ಬರೂ ಅವರನ್ನು ಹಿಂಬಾಲಿಸುತ್ತಾರೆ. ಹೀಗೆ ಅವರನ್ನು ಲೆಕ್ಕವಿಲ್ಲದಷ್ಟು ಜನರು ಹಿಂಬಾಲಿಸುತ್ತಾರೆ.


ಇವರಿಬ್ಬರೂ ಮಣ್ಣಿಗೆ ಸೇರುತ್ತಾರೆ; ಹುಳುಗಳು ಅವರನ್ನು ಮುತ್ತಿಕೊಳ್ಳುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು