Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:20 - ಕನ್ನಡ ಸಮಕಾಲಿಕ ಅನುವಾದ

20 “ಕಷ್ಟದಲ್ಲಿ ಇರುವವನಿಗೆ ಬೆಳಕೂ ಕಹಿ ಮನಸ್ಸುಳ್ಳವರಿಗೆ ಜೀವವನ್ನು ಕೊಡುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕಷ್ಟದಲ್ಲಿರುವವನಿಗೆ ಬೆಳಕನ್ನು, ಮನನೊಂದವರಿಗೆ ಜೀವವನ್ನು ಕೊಡುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕಷ್ಟದಲ್ಲಿರುವವರಿಗೆ ಏತಕ್ಕೆ ಬೆಳಕು? ದುಃಖಪೀಡಿತನಿಗೆ ಏತಕ್ಕೆ ಬದುಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕಷ್ಟದಲ್ಲಿರುವವನಿಗೆ ಬೆಳಕನ್ನು ಮನನೊಂದವರಿಗೆ ಜೀವವನ್ನು ಕೊಡುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಬಹು ವ್ಯಥೆಯಿಂದ ಸಂಕಟಪಡುತ್ತಿರುವವನು ಯಾಕೆ ಜೀವಿಸಬೇಕು? ಮನನೊಂದಿರುವವನಿಗೆ ಜೀವವನ್ನು ಕೊಡುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:20
10 ತಿಳಿವುಗಳ ಹೋಲಿಕೆ  

ನಾನು ಕಷ್ಟವನ್ನೂ, ಚಿಂತೆಯನ್ನೂ ನೋಡುವುದಕ್ಕೂ, ನನ್ನ ದಿವಸಗಳು ನಾಚಿಕೆಯಲ್ಲಿ ಕಳೆದುಹೋಗುವುದಕ್ಕೂ ಗರ್ಭದಿಂದ ಹೊರಗೆ ಬಂದದ್ದು ಏಕೆ?


ನಾಶವಾಗುವವರಿಗೆ ಮದ್ಯಪಾನವಿರಲಿ. ಮನೋವ್ಯಥೆಪಡುವವರಿಗೆ ಮದ್ಯವಿರಲಿ.


ಅವಳು ಬಹಳ ಮನಗುಂದಿದವಳಾಗಿ ಯೆಹೋವ ದೇವರನ್ನು ಪ್ರಾರ್ಥಿಸಿ, ಅತ್ತು ಒಂದು


ಮನುಷ್ಯನ ಆತ್ಮವು ಅಧೋಲೋಕದಿಂದ ಹಿಂದಿರುಗಿ ಬಂದು, ಜೀವ ಬೆಳಕನ್ನು ಅನುಭವಿಸುವಂತೆಯೇ ದೇವರು ಹೀಗೆ ಮಾಡುವರು.


ನನ್ನನ್ನು ಜಜ್ಜುವುದು ದೇವರಿಗೆ ಮೆಚ್ಚಿಗೆಯಾದರೆ, ದೇವರು ತಮ್ಮ ಕೈಚಾಚಿ ನನ್ನ ಪ್ರಾಣವನ್ನು ತೆಗೆದುಕೊಳ್ಳಲಿ.


ಗರ್ಭಸ್ರಾವವಾಗಿ ಹೂಣಿಟ್ಟ ಪಿಂಡದಂತೆಯೂ ಬೆಳಕನ್ನು ನೋಡದ ಕೂಸುಗಳಂತೆಯೂ ನಾನೇಕೆ ಆಗಲಿಲ್ಲ?


ಅವಳು ಬೆಟ್ಟಕ್ಕೆ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಿ ಹಾಕಲು ಗೇಹಜಿಯು ಹತ್ತಿರ ಬಂದದ್ದರಿಂದ ದೇವರ ಮನುಷ್ಯನು, “ಅವಳನ್ನು ಬಿಡು. ಏಕೆಂದರೆ ಅವಳ ಹೃದಯವು ಬಹಳ ನೋವಿನಿಂದ ತುಂಬಿದೆ. ಯೆಹೋವ ದೇವರು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾರೆ,” ಎಂದನು.


ದೇವರು ನನ್ನನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾರೆ; ನಾನು ಜೀವ ಬೆಳಕನ್ನು ಆನಂದಿಸಲು ಬಾಳುವೆನು.’


ಅಲ್ಲಿ ಕಿರಿಯರು ಹಿರಿಯರು ಎಂಬ ಭೇದ ಇಲ್ಲಾ; ಗುಲಾಮರು ಯಜಮಾನರಿಂದ ಬಿಡುಗಡೆಯಾಗಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು