Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:25 - ಕನ್ನಡ ಸಮಕಾಲಿಕ ಅನುವಾದ

25 ನನಗೆ ಭಯ ಹುಟ್ಟಿದೊಡನೆ ಆಪತ್ತು ಬಂದೊದಗುತ್ತದೆ; ಯಾವುದಕ್ಕೆ ಹೆದರುತ್ತೇನೋ, ಅದೇ ತಪ್ಪದೆ ಸಂಭವಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನನಗೆ ಭಯವು ಹುಟ್ಟಿದೊಡನೆಯೇ ಆಪತ್ತು ಸಂಭವಿಸುವುದು. ನಾನು ಯಾವುದಕ್ಕೆ ಹೆದರುತ್ತೇನೋ ಅದು ತಪ್ಪದೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನನಗೆ ಭಯ ಹುಟ್ಟಿದೊಡನೆ ಆಪತ್ತು ಬಂದೊದಗುತ್ತದೆ ಯಾವುದಕ್ಕೆ ಅಂಜುತ್ತೇನೊ, ಅದೇ ತಪ್ಪದೆ ಸಂಭವಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನನಗೆ ಭಯವು ಹುಟ್ಟಿದೊಡನೆಯೇ ಆಪತ್ತು ಸಂಭವಿಸುವದು. ನಾನು ಯಾವದಕ್ಕೆ ಹೆದರುತ್ತೇನೋ ಅದು ತಪ್ಪದೆ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಪತ್ತು ಸಂಭವಿಸಬಹುದೆಂದು ನಾನು ಭಯಗೊಂಡಿದ್ದೆನು. ನಾನು ಯಾವುದಕ್ಕೆ ಹೆದರಿಕೊಂಡಿದ್ದೆನೊ ಅದು ನನಗೆ ಸಂಭವಿಸಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:25
6 ತಿಳಿವುಗಳ ಹೋಲಿಕೆ  

ಔತಣದ ದಿನಗಳು ಮುಗಿದ ಬಳಿಕ, ಯೋಬನು, “ಬಹುಶಃ ನನ್ನ ಮಕ್ಕಳು ಪಾಪಮಾಡಿ, ಮನದಲ್ಲೇ ದೇವರನ್ನು ದೂಷಿಸಿರಬಹುದು,” ಎಂದುಕೊಂಡು, ಅವರನ್ನು ಶುದ್ಧಿಗೊಳಿಸಲು ವ್ಯವಸ್ಥೆ ಮಾಡುತ್ತಿದ್ದನು. ಬೆಳಿಗ್ಗೆ ಎದ್ದು ಪ್ರತಿಯೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು. ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.


ವಿಪತ್ತುಗಳು ನನ್ನ ಮೇಲೆ ತಿರುಗಿಬಿದ್ದು, ನನ್ನ ಮಾನಮರ್ಯಾದೆ ಗಾಳಿಯಂತೆ ಹೊಡೆದುಕೊಂಡು ಹೋಗುತ್ತಿದೆ; ನನ್ನ ಕ್ಷೇಮವು ಮೇಘದ ಹಾಗೆ ಹರಿದು ಹೋಗುತ್ತಿದೆ.


ಏಕೆಂದರೆ ದೇವರಿಂದ ಬರುವ ವಿಪತ್ತಿನ ಬಗ್ಗೆ ನನಗೆ ಹೆದರಿಕೆಯಾಯಿತು; ದೇವರ ಪ್ರಭಾವದ ಭಯದ ನಿಮಿತ್ತ ನಾನು ಇಂಥ ಕೃತ್ಯವನ್ನು ಮಾಡುವುದಕ್ಕೆ ಸಾಧ್ಯವಾಗಲಿಲ್ಲ.


ನನಗಾದ ವ್ಯಥೆಗಳಿಗೆಲ್ಲಾ ನಾನು ಇನ್ನೂ ಹೆದರುತ್ತಿದ್ದೇನೆ; ದೇವರು ನನ್ನನ್ನು ನಿರಪರಾಧಿ ಎಂದು ಎಣಿಸುವುದಿಲ್ಲವೆಂದು ಸಹ ನನಗೆ ಗೊತ್ತಿದೆ.


ನಾನು ಒಳ್ಳೆಯದನ್ನು ನಿರೀಕ್ಷಿಸುತ್ತಿರಲು ಕೇಡು ಬಂದೊದಗಿತು; ನಾನು ಬೆಳಕನ್ನು ಎದುರು ನೋಡಲು, ಅಂಧಕಾರ ಬಂದು ಕವಿಯಿತು.


ನೀವು ಖಡ್ಗಕ್ಕೆ ಭಯಪಟ್ಟಿರಿ. ನಾನು ನಿಮ್ಮ ಮೇಲೆ ಒಂದು ಖಡ್ಗವನ್ನು ತರುತ್ತೇನೆ. ಇದು ಸಾರ್ವಭೌಮ ಯೆಹೋವ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು