ಯೋಬ 30:1 - ಕನ್ನಡ ಸಮಕಾಲಿಕ ಅನುವಾದ1 “ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು, ನನ್ನನ್ನು ನೋಡಿ ಪರಿಹಾಸ್ಯ ಮಾಡುತ್ತಾರೆ. ಇವರ ಪಿತೃಗಳನ್ನು ನನ್ನ ಕುರಿಮಂದೆಯ ನಾಯಿಗಳೊಡನೆ ಇರಲೂ ಅಯೋಗ್ಯರು ಎಂದೆಣಿಸಿದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಈಗಲಾದರೋ ನನಗಿಂತ ಚಿಕ್ಕವಯಸ್ಸಿನವರು ನನ್ನನ್ನು ಪರಿಹಾಸ್ಯಮಾಡುತ್ತಾರೆ; ಇವರ ಹೆತ್ತವರನ್ನು ನನ್ನ ಕುರಿ ಮಂದೆಯ ನಾಯಿಗಳ ಸಂಗಡ ಸೇರಿಸುವುದಕ್ಕೂ ಉದಾಸಿನ ಮಾಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಈಗಲಾದರೊ ನನಗಿಂತ ಚಿಕ್ಕವರು ನನ್ನನ್ನು ಪರಿಹಾಸ್ಯಮಾಡುತ್ತಾರೆ. ಇವರ ಹೆತ್ತವರು ನನ್ನ ಮುಂದೆ. ನಾಯಿಗಳೊಡನೆ ಇರಲೂ ಅಯೋಗ್ಯರು ಎಂದೆಣಿಸಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಈಗಲಾದರೋ ನನಗಿಂತ ಚಿಕ್ಕ ವಯಸ್ಸಿನವರು ನನ್ನನ್ನು ಪರಿಹಾಸ್ಯ ಮಾಡುತ್ತಾರೆ; ಇವರ ತಂದೆಗಳನ್ನು ನನ್ನ ಮಂದೆನಾಯಿಗಳೊಡನೆಯೂ ಇರತಕ್ಕವರಲ್ಲವೆಂದು ತಳ್ಳಿಬಿಟ್ಟಿದ್ದೆನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಈಗಲಾದರೋ, ನನಗಿಂತ ಚಿಕ್ಕವರೂ ನನ್ನನ್ನು ಗೇಲಿ ಮಾಡುತ್ತಾರೆ. ಅವರ ತಂದೆಗಳನ್ನು ನನ್ನ ಕುರಿಕಾಯುವ ನಾಯಿಗಳಿಗೂ ಯೋಗ್ಯರಲ್ಲವೆಂದು ತಳ್ಳಿಬಿಟ್ಟಿದ್ದೆನು. ಅಧ್ಯಾಯವನ್ನು ನೋಡಿ |