Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:3 - ಕನ್ನಡ ಸಮಕಾಲಿಕ ಅನುವಾದ

3 ಅವರು ಬಡತನದಿಂದಲೂ ಹಸಿವಿನಿಂದಲೂ ಬಳಲಿಹೋಗಿದ್ದರು. ನಿರ್ಜನ ಮತ್ತು ಕತ್ತಲೆಯಾದ ಮರುಭೂಮಿಗಳ ಕಡೆಗೆ ಆಹಾರಕ್ಕಾಗಿ ಓಡಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ಕೊರತೆಯಿಂದಲೂ, ಹಸಿವಿನಿಂದಲೂ ಸೊರಗಿ, ನಿನ್ನೆಯವರೆಗೂ ಹಾಳುಬೀಳಾದ ಒಣ ನೆಲವನ್ನು ನೆಕ್ಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕೊರತೆಯಿಂದ, ಬರದಿಂದ ಅವರು ಸೊರಗಿಹೋಗಿದ್ದರು ನಿನ್ನೆಯವರೆಗೂ ಹಾಳುಬೀಳಾದ ನೆಲವನ್ನು ನೆಕ್ಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ಕೊರತೆಯಿಂದಲೂ ಹಸಿವಿನಿಂದಲೂ ಸೊರಗಿ ನಿನ್ನೆಯವರೆಗೂ ಹಾಳುಬೀಳಾಗಿದ್ದ ಒಣನೆಲವನ್ನು ನೆಕ್ಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಮನುಷ್ಯರು ಬಡಕಲಾಗಿದ್ದರು; ತಿನ್ನಲಿಕ್ಕಿಲ್ಲದೆ ಹಸಿವೆಯಿಂದಿದ್ದರು; ಅಡವಿಯ ಒಣಧೂಳನ್ನು ತಿನ್ನುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:3
6 ತಿಳಿವುಗಳ ಹೋಲಿಕೆ  

ಕಾಡುಕತ್ತೆಗಳ ಹಾಗೆ ಬಡವರು ತಮ್ಮ ಆಹಾರಕ್ಕಾಗಿ ಅಲೆಯುತ್ತಾರೆ; ಪಾಳುಭೂಮಿಯಿಂದ ಅವರಿಗೂ, ಅವರ ಮಕ್ಕಳಿಗೂ ಆಹಾರ ಸಿಗುತ್ತದೆ.


ಭೂಮಿಯ ಕಾಡು, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು. ಇಂಥವರಿಗೆ ಈ ಲೋಕವು ಯೋಗ್ಯವಾದ ಸ್ಥಳವಲ್ಲ.


ಇವರ ಕೈಗಳ ಬಲದಿಂದ ನನಗೇನಾಗುತ್ತಿತ್ತು? ಆಗ ಅವರ ಚೈತನ್ಯವು ಕುಗ್ಗಿಹೋಗಿತ್ತು!


ಪೊದೆಗಳಲ್ಲಿನ ಉಪ್ಪಿನ ಸೊಪ್ಪು ಸಂಗ್ರಹಿಸುತ್ತಿದ್ದರು. ಜಾಲಿಯ ಬೇರುಗಳೇ ಅವರ ಆಹಾರವಾಗಿತ್ತು.


ಅವನು ಮಾನವ ಸಮಾಜದಿಂದ ಬಹಿಷ್ಕೃತನಾದನು. ಮಹೋನ್ನತರಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾರೆಂದೂ, ಅವರು ತಮಗೆ ಬೇಕಾದವರನ್ನು ಅದಕ್ಕೆ ನೇಮಿಸುತ್ತಾರೆಂದೂ ತಿಳಿಯುವ ತನಕ ಅವನು ಮೃಗಬುದ್ಧಿಯುಳ್ಳವನಾಗಿದ್ದನು. ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು. ಅವನು ದನಗಳಂತೆ ಹುಲ್ಲನ್ನು ಮೇಯುತ್ತಿದ್ದನು. ಅವನ ಶರೀರ ಆಕಾಶದ ಮಂಜಿನಿಂದ ತೇವವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು