Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:9 - ಕನ್ನಡ ಸಮಕಾಲಿಕ ಅನುವಾದ

9 “ಆದರೆ ಈಗ ನಾನು ಅವರ ಹಾಸ್ಯದ ಹಾಡೂ, ಅವರಿಗೆ ಗಾದೆಯೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈಗಲಾದರೋ ನನ್ನ ಮೇಲೆ ಗೇಲಿಮಾಡುವ ಹಾಡುಗಳನ್ನು ಕಟ್ಟುವರು. ಮತ್ತು ಅವರ ಕಟ್ಟುಕಥೆಗಳಿಗೆ ಆಸ್ಪದವಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಂಥವರ ಲಾವಣಿಗೆ ನಾನೀಗ ಗುರಿಯಾದೆ ಅವರ ಕಟ್ಟುಕತೆಗಳಿಗೆ ಅಡ್ಡಹೆಸರಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈಗಲಾದರೋ ನನ್ನ ಮೇಲೆ ಗೇಲಿ ಹಾಡುಗಳನ್ನು ಕಟ್ಟುವರು. ಮತ್ತು ಅವರ ಗಾದೆಗಳಿಗೆ ಆಸ್ಪದವಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಈಗಲಾದರೋ ಅವರ ಗಂಡುಮಕ್ಕಳು ನನ್ನ ಮೇಲೆ ಗೇಲಿ ಹಾಡುಗಳನ್ನು ಕಟ್ಟುವರು; ನನ್ನ ಹೆಸರು ಅವರಿಗೆ ಹಾಸ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:9
10 ತಿಳಿವುಗಳ ಹೋಲಿಕೆ  

ಅವರನ್ನು ನೋಡು! ಕುಳಿತು ಅಥವಾ ನಿಂತಾಗ, ಅವರು ತಮ್ಮ ಹಾಡುಗಳಲ್ಲಿ ನನ್ನನ್ನು ಅಣಕಿಸುತ್ತಾರೆ.


“ದೇವರು ನನ್ನನ್ನು ಜನರ ಕಟ್ಟುಗಾದೆಗೆ ಆಸ್ಪದ ಮಾಡಿದ್ದಾರೆ; ನನ್ನನ್ನು ಕಾಣುವವರು ನನ್ನ ಮುಖಕ್ಕೆ ಉಗುಳುವಂತೆ ಮಾಡಿದ್ದಾರೆ.


ನಾನು ನನ್ನ ಎಲ್ಲಾ ಜನರಿಗೆ ಹಾಸ್ಯವೂ, ದಿನವೆಲ್ಲವೂ ಅವರ ಗೇಲಿಯ ಹಾಡಾಗಿಯೂ ಇದ್ದೇನೆ.


ನಮ್ಮನ್ನು ಇತರ ದೇಶಗಳವರ ಗಾದೆಗೆ ಆಸ್ಪದ ಮಾಡಿರುವಿರಿ; ಅವರು ನಮ್ಮನ್ನು ಪರಿಹಾಸ್ಯದ ವಿಷಯವನ್ನಾಗಿ ಮಾಡಿಕೊಂಡಿದ್ದಾರೆ.


“ನಾನು ನೀತಿವಂತನೂ, ನಿರ್ದೋಷಿಯಾದರೂ ಗೆಳೆಯರ ಗೇಲಿ ಪರಿಹಾಸ್ಯಕ್ಕೆ ಗುರಿಯಾದೆನು; ನಾನು ದೇವರಿಗೆ ಪ್ರಾರ್ಥಿಸಿದೆ; ದೇವರು ನನಗೆ ಉತ್ತರಕೊಟ್ಟರು;


ಆಗ ಅವರು ಹುಚ್ಚರಂತೆಯೂ ಹೆಸರಿಲ್ಲದ ಮಕ್ಕಳಂತೆಯೂ ನಾಡಿನಿಂದ ಹೊರಗೆ ಅಲೆದಾಡುತ್ತಿದ್ದರು.


ನಮ್ಮ ಎಲ್ಲಾ ಶತ್ರುಗಳು ನಮಗೆ ವಿರುದ್ಧವಾಗಿ ಅವರ ಬಾಯಿಗಳನ್ನು ತೆರೆದಿದ್ದಾರೆ.


ಓ ಯೆಹೋವ ದೇವರೇ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆನು. ನೀವು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿರಿ. ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ. ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು