Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:11 - ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ ನಾನು ಹಾಗೆಲ್ಲಾ ಮಾಡಿದ್ದರೆ, ಅಂಥ ನಡತೆ ದುಷ್ಕಾರ್ಯವಾಗುತ್ತಿತ್ತು, ಆ ಅಪರಾಧವು ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ಹೀಗೆ ಮಾಡಿದ್ದರೆ ಅದು ದುಷ್ಕಾರ್ಯವೇ ಸರಿ, ಆ ಅಪರಾಧವು ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಏಕೆಂದರೆ ಅಂಥ ನಡತೆ ಕಾಮುಕತನವಾಗುತ್ತಿತ್ತು ನ್ಯಾಯಾಧಿಪತಿಗಳ ದಂಡನೆಗೆ ತಕ್ಕ ಅಪರಾಧವಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 [ನಾನು ಹೀಗೆ ಮಾಡಿದ್ದರೆ] ಅದು ದುಷ್ಕಾರ್ಯವೇ ಸರಿ, ಆ ಅಪರಾಧವು ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾದದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯಾಕೆಂದರೆ ವ್ಯಭಿಚಾರ ಅವಮಾನಕರ. ಆ ಪಾಪಕ್ಕೆ ದಂಡನೆಯಾಗಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:11
10 ತಿಳಿವುಗಳ ಹೋಲಿಕೆ  

“ ‘ಇದಲ್ಲದೆ ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿಚಾರ ಮಾಡಿದರೆ, ವ್ಯಭಿಚಾರ ಮಾಡುವವನಿಗೂ ಮತ್ತು ವ್ಯಭಿಚಾರ ಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.


ಇದು ಸಹ ನ್ಯಾಯಾಧಿಪತಿಯ ದಂಡನೆಗೆ ಯೋಗ್ಯವಾಗುತ್ತಿತ್ತು; ಏಕೆಂದರೆ, ಆಗ ನಾನು ಉನ್ನತದಲ್ಲಿರುವ ದೇವರಿಗೆ ದ್ರೋಹಿಯಾಗುತ್ತಿದ್ದೆನು.


ಹೆಚ್ಚು ಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆ ತಾಮಾರಳು ವೇಶ್ಯಾವೃತ್ತಿಮಾಡಿ ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ,” ಎಂದು ತಿಳಿಸಿದರು. ಆಗ ಯೆಹೂದನು, “ಅವಳನ್ನು ಹೊರಗೆ ತನ್ನಿರಿ, ಅವಳನ್ನು ಸುಡಬೇಕು,” ಎಂದನು.


ವ್ಯಭಿಚಾರ ಮಾಡಿದ ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ಮೇಲೆ ರಕ್ತ ಸುರಿಸುವೆನು.


ಆಗ ಅಬೀಮೆಲೆಕನು, “ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯನ್ನು ತೆಗೆದುಕೊಂಡಿದ್ದರೆ, ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ,” ಎಂದನು.


ಅಬೀಮೆಲೆಕನು ಅಬ್ರಹಾಮನನ್ನು ಕರೆದು ಅವನಿಗೆ, “ನೀನು ನಮಗೆ ಮಾಡಿದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಿನಗೆ ನಾನು ಏನು ಅಪರಾಧ ಮಾಡಿದ್ದೇನೆ? ನೀನು ನನಗೆ ಮಾಡಬಾರದ ಕೆಲಸಗಳನ್ನು ಮಾಡಿದ್ದೀಯೆ,” ಎಂದನು.


ಈ ಮನೆಯಲ್ಲಿ ನನಗಿಂತ ದೊಡ್ಡವನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವುದರಿಂದ, ನಿನ್ನನ್ನು ಹೊರತುಪಡಿಸಿ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ಮಹಾ ದುಷ್ಕೃತ್ಯ ಮಾಡಿ, ದೇವರಿಗೆ ವಿರೋಧವಾಗಿ ಪಾಪ ಮಾಡುವುದು ಹೇಗೆ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು