ಯೋಬ 31:12 - ಕನ್ನಡ ಸಮಕಾಲಿಕ ಅನುವಾದ12 ಅದು ನಾಶಲೋಕದವರೆಗೆ ದಹಿಸುವಂಥಾ ಅಗ್ನಿಯಾಗುತ್ತಿತ್ತು, ಅದು ನನ್ನ ಆದಾಯವನ್ನೆಲ್ಲಾ ನಿರ್ಮೂಲ ಮಾಡುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದು ನಾಶ ಲೋಕದವರೆಗೂ ನುಂಗುವ ಬೆಂಕಿಯಾಗಿದ್ದು, ನನ್ನ ಆದಾಯವನ್ನೆಲ್ಲಾ ನಿರ್ಮೂಲಮಾಡುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನರಕ ಕೂಪದವರೆಗೆ ಬೆಂಕಿಯಾಗುತ್ತಿತ್ತು ನನ್ನ ಆದಾಯವನ್ನೆಲ್ಲ ನಿರ್ಮೂಲಮಾಡುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅದು ನಾಶಲೋಕದವರೆಗೂ ನುಂಗುವ ಬೆಂಕಿಯಾಗಿದ್ದು ನನ್ನ ಆದಾಯವನ್ನೆಲ್ಲಾ ನಿರ್ಮೂಲ ಮಾಡುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ವ್ಯಭಿಚಾರವು ಸುಟ್ಟು ನಾಶಮಾಡುವ ಬೆಂಕಿಯಂತಿದೆ. ನಾನು ಹೊಂದಿರುವ ಪ್ರತಿಯೊಂದನ್ನು ಅದು ನಾಶಮಾಡಿಬಿಡುತ್ತಿತ್ತು. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.