Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:18 - ಕನ್ನಡ ಸಮಕಾಲಿಕ ಅನುವಾದ

18 ಇಲ್ಲಾ, ನನ್ನ ಯೌವನಕಾಲದಿಂದ ನಾನು ಅನಾಥರನ್ನು ತಂದೆಯಂತೆ ಬೆಳೆಸಿದೆನು. ಹುಟ್ಟಿದಂದಿನಿಂದ ವಿಧವೆಯರಿಗೆ ಮಾರ್ಗದರ್ಶಿಯಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹಾಗಲ್ಲ, ನಾನು ಬಾಲ್ಯದಿಂದಲೂ ತಂದೆಯ ರೀತಿಯಲ್ಲಿ ಅನಾಥನನ್ನು ಸಾಕುತ್ತಾ, ನಾನು ಹುಟ್ಟಿದಂದಿನಿಂದಲು ಅನಾಥಳಿಗೆ ದಾರಿತೋರಿಸುತ್ತಾ ಇದ್ದೇನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಲ್ಲ, ಬಾಲ್ಯದಲ್ಲಿ ಅನಾಥನನು ತಂದೆಯೋಪಾದಿಯಲಿ ಸಾಕಿದೆ ಹುಟ್ಟಿದಂದಿನಿಂದ ಅನಾಥನಿಗೆ ದಾರಿತೋರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹಾಗಲ್ಲ, ನಾನು ಬಾಲ್ಯದಿಂದಲೂ ತಂದೆಯೋಪಾದಿಯಲ್ಲಿ ಅನಾಥನನ್ನು ಸಾಕುತ್ತಾ ನಾನು ಹುಟ್ಟಿದಂದಿನಿಂದಲೂ ಅನಾಥಳಿಗೆ ದಾರಿ ತೋರಿಸುತ್ತಾ ಇದ್ದೆನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ನನ್ನ ಜೀವಮಾನವೆಲ್ಲಾ, ಅನಾಥರಿಗೆ ತಂದೆಯಂತಿದ್ದೆನು; ವಿಧವೆಯರನ್ನು ಪರಿಪಾಲಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:18
8 ತಿಳಿವುಗಳ ಹೋಲಿಕೆ  

ವಿಧವೆಯರನ್ನು ಬರಿದಾಗಿ ಕಳುಹಿಸಿಬಿಟ್ಟೆ; ದಿಕ್ಕಿಲ್ಲದವರ ತೋಳುಗಳನ್ನು ಮುರಿದುಬಿಟ್ಟೆ.


ದಿಕ್ಕಿಲ್ಲದವರು ಊಟ ಉಣ್ಣದ ಹಾಗೆ, ನಾನು ಮಾತ್ರ ತುತ್ತನ್ನೆಲ್ಲಾ ಒಂಟಿಯಾಗಿ ತಿಂದೆನೋ?


ಬಟ್ಟೆ ಇಲ್ಲದೆ ಕಷ್ಟಪಡುವವರನ್ನೂ, ಹೊದಿಕೆ ಇಲ್ಲದೆ ನಡುಗುವವರನ್ನೂ ನಾನು ನೋಡಿದಾಗೆಲ್ಲಾ,


ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ, “ಲೆಬನೋನಿನಲ್ಲಿದ್ದ ಮುಳ್ಳುಗಿಡವು ಲೆಬನೋನಿನಲ್ಲಿರುವ ದೇವದಾರು ಮರಕ್ಕೆ, ‘ನನ್ನ ಮಗನಿಗೆ ಹೆಂಡತಿಯಾಗಿರಲು ನೀನು ನಿನ್ನ ಮಗಳನ್ನು ಕೊಡು,’ ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿಯಿತು.


ಇವನು ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರ್ ಎಂಬ ಹೆಸರನ್ನು ಪಡೆದ ಹದೆಸ್ಸಳನ್ನು ಸಾಕುತ್ತಿದ್ದನು. ಏಕೆಂದರೆ ಅವಳಿಗೆ ತಂದೆತಾಯಿಗಳು ಇರಲಿಲ್ಲ. ಈಕೆಯು ರೂಪವತಿಯಾಗಿಯೂ ಸೌಂದರ್ಯವಂತಳಾಗಿಯೂ ಇದ್ದಳು. ಅವಳ ತಂದೆತಾಯಿಗಳು ಸತ್ತು ಹೋದ ತರುವಾಯ ಮೊರ್ದೆಕೈ ಅವಳನ್ನು ತನ್ನ ಸ್ವಂತ ಮಗಳಂತೆ ನೋಡಿಕೊಳ್ಳುತ್ತಿದ್ದನು.


ಏಕೆಂದರೆ ಅಂಗಲಾಚುವ ಬಡವನನ್ನೂ, ಸಹಾಯಕನಿಲ್ಲದ ಅನಾಥನನ್ನೂ ನಾನು ರಕ್ಷಿಸುವವನಾಗಿದ್ದೆನು.


ದರಿದ್ರರಿಗೆ ನಾನು ತಂದೆಯಾಗಿದ್ದೆನು; ಅಪರಿಚಿತರ ವ್ಯಾಜ್ಯವನ್ನು ವಿಚಾರಿಸುತ್ತಿದ್ದೆನು.


ಹಸಿದವರಿಗೆ ಅನ್ನ ಕೊಡುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬಟ್ಟೆಯಿಲ್ಲದವರನ್ನು ಕಂಡಾಗ ಅವರಿಗೆ ಬಟ್ಟೆ ಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೇ ನನಗೆ ಇಷ್ಟಕರವಾದ ಉಪವಾಸ ವ್ರತ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು