Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:34 - ಕನ್ನಡ ಸಮಕಾಲಿಕ ಅನುವಾದ

34 ನಾನು ದೊಡ್ಡ ಸಮೂಹಕ್ಕೆ ಹೆದರಿದೆನೋ? ಕುಲಗಳ ಅವಹೇಳನಕ್ಕೆ ಕಳವಳಗೊಂಡರೂ, ಬಾಗಿಲಿನಿಂದ ಹೊರಗೆ ಹೋಗದೆ ಮೌನವಾಗಿದ್ದೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನಾನು ಬಾಗಿಲು ದಾಟದೆ ಮೌನವಾಗಿದ್ದು, ಸಾಮಾನ್ಯ ಜನರ ಹಾಗೆ ನನ್ನ ದ್ರೋಹಗಳನ್ನು ಮರೆಮಾಡಿ, ಎದೆಯಲ್ಲಿ ನನ್ನ ಪಾಪವನ್ನು ಬಚ್ಚಿಟ್ಟುಕೊಂಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಬಾಗಿಲನ್ನೂ ದಾಟದೆ ಒಳಗೇ ನಾನು ಮೌನವಿದ್ದಿದ್ದರೆ ಜನಸಾಮಾನ್ಯರಂತೆ ಪಾಪವನು ಮನದಲೆ ಬಚ್ಚಿಟ್ಟಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನಾನು ಬಾಗಲು ದಾಟದೆ ಮೌನವಾಗಿದ್ದು ಸಾಮಾನ್ಯ ಜನರ ಹಾಗೆ ನನ್ನ ದ್ರೋಹಗಳನ್ನು ಮರೆಮಾಜಿ ಎದೆಯಲ್ಲಿ ನನ್ನ ಪಾಪವನ್ನು ಬಚ್ಚಿಟ್ಟುಕೊಂಡಿದ್ದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಜನರ ಮಾತಿಗೆ ನಾನೆಂದೂ ಭಯಗೊಂಡಿರಲಿಲ್ಲ; ಯಾವ ಕುಟುಂಬದ ಅಸಮ್ಮತಿಗೂ ನಾನೆಂದೂ ಹೆದರಿಕೊಂಡಿರಲಿಲ್ಲ; ಅಂಥ ಯಾವ ಭಯವೂ ನನ್ನನ್ನು ಮೌನಗೊಳಿಸಿ ಮನೆಯೊಳಗಿರಿಸಲಿಲ್ಲ. ಯಾಕೆಂದರೆ ನನ್ನ ಮೇಲೆ ಜನರಿಗಿರುವ ದ್ವೇಷಕ್ಕೆ ನಾನು ಹೆದರಿಕೊಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:34
20 ತಿಳಿವುಗಳ ಹೋಲಿಕೆ  

“ಕೆಟ್ಟದ್ದನ್ನು ಮಾಡುವವರು ಬಹುಮಂದಿ ಆದರೂ ನೀವು ಅವರನ್ನು ಹಿಂಬಾಲಿಸಬೇಡ. ಬಹುಮಂದಿಯೊಂದಿಗೆ ನ್ಯಾಯಕ್ಕೆ ವಿರುದ್ಧವಾಗಿ ವ್ಯಾಜ್ಯದಲ್ಲಿ ಸಾಕ್ಷಿಕೊಡಬೇಡ.


ಇನ್ನು ಮೇಲೆ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವುದಿಲ್ಲ. ಒಂದು ಕಾಲದಲ್ಲಿ ಕ್ರಿಸ್ತ ಯೇಸುವನ್ನು ನಾವು ಶರೀರ ಸಂಬಂಧವಾಗಿ ಅರಿತಿದ್ದೆವು. ಆದರೆ ಇನ್ನು ಮುಂದೆ ಕ್ರಿಸ್ತ ಯೇಸುವನ್ನು ಶರೀರ ಸಂಬಂಧವಾಗಿ ನಾವು ಅರಿತುಕೊಳ್ಳುವುದಿಲ್ಲ.


ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವಂತೆ ಆಡಳಿತಗಾರರು ಉಡುಗೊರೆಗಳನ್ನು ಕೇಳುತ್ತಾರೆ. ನ್ಯಾಯಾಧಿಪತಿಗಳು ಲಂಚವನ್ನು ತೆಗೆದುಕೊಳ್ಳುತ್ತಾರೆ. ಶಕ್ತಿಶಾಲಿ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರೆಲ್ಲರೂ ಒಟ್ಟಾಗಿ ಒಳಸಂಚುಮಾಡುತ್ತಾರೆ.


ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನಾನು ಕಸ್ದೀಯರಿಗೆ ಒಳಗಾಗಿರುವ ಯೆಹೂದ್ಯರ ವಿಷಯ ಅಂಜುತ್ತೇನೆ. ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು. ಆಗ ಅವರು ನನ್ನನ್ನು ಹಿಂಸಿಸಬಹುದು,” ಎಂದನು.


ಹೀಗೆ ಅರಸನಾದ ಚಿದ್ಕೀಯನು ಯೆರೆಮೀಯನಿಗೆ ಅಂತರಂಗದಲ್ಲಿ ಪ್ರಮಾಣಮಾಡಿ, “ನಮಗೆ ಈ ಪ್ರಾಣವನ್ನು ಉಂಟುಮಾಡಿದ ಯೆಹೋವ ದೇವರ ಜೀವದಾಣೆ, ನಾನು ನಿನ್ನನ್ನು ಕೊಂದುಹಾಕುವುದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವುದಿಲ್ಲ,” ಎಂದನು.


ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು; ಯೆಹೋವ ದೇವರಲ್ಲಿ ಭರವಸವಿಡುವವನು, ಸಂರಕ್ಷಣೆ ಹೊಂದುವನು.


ದೇವರು ಅಧಿಪತಿಗಳಿಗೆ ಮುಖದಾಕ್ಷಿಣ್ಯ ತೋರಿಸುವರೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ದೇವರು ಲಕ್ಷಿಸುವರೋ? ಏಕೆಂದರೆ ಅವರೆಲ್ಲರೂ ದೇವರ ಸೃಷ್ಟಿಯಾಗಿದ್ದಾರೆ.


ನೀನು ಬಲಿಷ್ಠನಾಗಿದ್ದರೂ, ಜಮೀನು ಬಹಳವಾಗಿದ್ದರೂ, ಗೌರವಕ್ಕೆ ಯೋಗ್ಯನಾದ ಮನುಷ್ಯನಾಗಿ ಊರಲ್ಲಿ ವಾಸಿಸಿದರೂ,


ಏಕೆಂದರೆ ನೀನು ಈಗ ಮೌನವಾಗಿದ್ದು ಬಿಟ್ಟರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ಬಿಡುಗಡೆಯೂ ಉಂಟಾಗುವುವು. ಆದರೆ ನೀನೂ ನಿನ್ನ ತಂದೆಯ ಮನೆಯವರೂ ನಾಶವಾಗಿಹೋಗುವಿರಿ. ಇಂಥಾ ಕಾಲಕ್ಕೋಸ್ಕರ ನೀನು ಪಟ್ಟಕ್ಕೆ ಬಂದಿರಬಹುದು, ಯಾರಿಗೆ ಗೊತ್ತು?” ಎಂದು ಹೇಳಿ ಕಳುಹಿಸಿದನು.


“ಅರಸನು ಹೇಳಿಕಳುಹಿಸದೆ ಅರಸನ ಬಳಿಗೆ ಅರಮನೆಯ ಒಳಾಂಗಣಕ್ಕೆ ಹೋಗುವ ಗಂಡಸರಿಗಾಗಲಿ, ಹೆಂಗಸರಿಗಾಗಲಿ ಮರಣದಂಡನೆಯಾಗುವುದು. ಒಂದು ವೇಳೆ ಒಳಗೆ ಬಂದ ವ್ಯಕ್ತಿಯ ಕಡೆಗೆ ಅರಸನು ತನ್ನ ಸ್ವರ್ಣದಂಡವನ್ನು ಚಾಚಿದರೆ ಅವನಿಗೆ ಮಾತ್ರ ಮರಣದಂಡನೆಯಾಗದೆ ಜೀವದಿಂದ ಉಳಿಯುವರು. ಈ ರಾಜಾಜ್ಞೆಯನ್ನು ಅರಸನ ಸಮಸ್ತ ಸೇವಕರೂ ಅರಸನ ಪ್ರಾಂತಗಳ ಜನರೂ ತಿಳಿದಿದ್ದಾರೆ. ಆದರೆ ಕಳೆದ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ನನಗೆ ಆಮಂತ್ರಣವೇ ಬರಲಿಲ್ಲ,” ಎಂದು ತಿಳಿಸುವಂತೆ ಹೇಳಿದಳು.


ಮಹಾಯಾಜಕನಾದ ಎಲ್ಯಾಷೀಬನ ಮಗ ಯೋಯಾದನ ಮಕ್ಕಳಲ್ಲಿ ಒಬ್ಬನು ಹೋರೋನಿನವನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.


ನಾನು ತುಸು ಆಲೋಚಿಸಿ ನೋಡಿದೆ. ಬಳಿಕ ಶ್ರೇಷ್ಠರನ್ನೂ, ಅಧಿಕಾರಿಗಳನ್ನೂ ಖಂಡಿಸಿ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದು ಸರಿಯೇ?” ಎಂದು ಹೇಳಿ ಅವರೊಡನೆ ಬಹಳವಾಗಿ ವಾಗ್ವಾದಿಸಿ, ಅವರಿಗೆ ವಿರೋಧವಾಗಿ ಮಹಾ ಸಭೆಯನ್ನು ಕೂಡಿಸಿದೆ.


ಆಗ ಅವನು ಅವರಿಗೆ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಪ್ರತಿಯೊಬ್ಬನು ತನ್ನ ಖಡ್ಗವನ್ನು ಪಕ್ಕದಲ್ಲಿ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಂದು ದ್ವಾರದಿಂದ ಇನ್ನೊಂದು ದ್ವಾರಕ್ಕೆ ಹೋಗಿ ಹೋಗುತ್ತಾ ಬರುತ್ತಾ ತನ್ನ ಸಹೋದರನನ್ನೂ, ತನ್ನ ಜೊತೆಗಾರನನ್ನೂ ಮತ್ತು ನೆರೆಹೊರೆಯವನೆಂದು ಲಕ್ಷಿಸದೆ ಕೊಲ್ಲಲಿ,’ ” ಎಂದು ಹೇಳಿದನು.


ಇದಲ್ಲದೆ ಅವರು ಪಟ್ಟಣವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವುದಕ್ಕೂ, ಯೆಹೂದ್ಯರ ಭಾಷೆಯಾದ ಹಿಬ್ರಿಯದಲ್ಲಿ ದೊಡ್ಡ ಶಬ್ದದಿಂದ ಅವರನ್ನು ಕೂಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು