Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:37 - ಕನ್ನಡ ಸಮಕಾಲಿಕ ಅನುವಾದ

37 ನನ್ನ ಹೆಜ್ಜೆಗಳ ಲೆಕ್ಕವನ್ನು ದೇವರಿಗೆ ಒಪ್ಪಿಸುತ್ತಿದ್ದೆನು; ಒಬ್ಬ ಅಧಿಪತಿಯಂತೆ ನಾನು ದೇವರನ್ನು ಸಮೀಪಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಪ್ರಭುವಿನಂತೆ ಆತನ ಸಾನ್ನಿಧ್ಯದಲ್ಲಿ ಪ್ರವೇಶಿಸಿ ನನ್ನ ಹೆಜ್ಜೆಗಳ ಲೆಕ್ಕವನ್ನು, ಆತನಿಗೆ ಅರಿಕೆಮಾಡಿಕೊಳ್ಳುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅಧಿಪತಿಯಂತೆ ಆತನ ಸಾನಿಧ್ಯವನು ಸೇರುತ್ತಿದ್ದೆ ಒಂದೊಂದು ಹೆಜ್ಜೆಯ ಲೆಕ್ಕವನು ಒಪ್ಪಿಸುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಪ್ರಭುವಿನಂತೆ ಆತನ ಸಾನ್ನಿಧ್ಯದಲ್ಲಿ ಪ್ರವೇಶಿಸಿ ನನ್ನ ಹೆಜ್ಜೆಗಳ ಲೆಕ್ಕವನ್ನು ಆತನಿಗೆ ಅರಿಕೆಮಾಡಿಕೊಳ್ಳುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನಾನು ಮಾಡಿರುವ ಪ್ರತಿಯೊಂದನ್ನು ದೇವರಿಗೆ ವಿವರಿಸುವೆನು. ನಾನು ಅಧಿಪತಿಯಂತೆ ತಲೆಯೆತ್ತಿಕೊಂಡು ಆತನ ಸಮೀಪಕ್ಕೆ ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:37
14 ತಿಳಿವುಗಳ ಹೋಲಿಕೆ  

ದೇವರು ನನ್ನನ್ನು ಕೊಂದರೂ, ನಾನು ದೇವರ ಮೇಲೆ ನಿರೀಕ್ಷೆಯಿಂದಿರುವೆನು; ನಾನು ನಿಶ್ಚಯವಾಗಿ ನನ್ನ ನಡತೆಯ ಒಳ್ಳೆಯತನವನ್ನು ದೇವರ ಮುಂದೆ ಸ್ಥಾಪಿಸುವೆನು.


ಕ್ರಿಸ್ತನಲ್ಲಿಯೂ ಕ್ರಿಸ್ತನ ಮೇಲೆ ನಂಬಿಕೆಯನ್ನಿಡುವುದರ ಮೂಲಕವೂ ನಾವು ಸ್ವಾತಂತ್ರ್ಯದಿಂದಲೂ ಭರವಸೆಯಿಂದಲೂ ದೇವರನ್ನು ಸಮೀಪಿಸಲು ಈಗ ಸಾಧ್ಯ.


ತಮ್ಮ ತಪ್ಪುಗಳನ್ನು ತಿಳಿದುಕೊಳ್ಳಲು ಯಾರಿಗೆ ಸಾಧ್ಯ? ನನ್ನ ಗುಪ್ತ ಪಾಪಗಳನ್ನು ಕ್ಷಮಿಸು.


ನಾನು ಅವರ ಪ್ರಧಾನನಾಗಿ ಕೂತು ಸೈನ್ಯಗಳ ನಡುವೆ ಅರಸನಂತೆ ಆಸೀನನಾಗಿದ್ದೆನು. ನಾನು ದುಃಖಿಸುವವರನ್ನು ಸಂತೈಸುವವನಾಗಿಯೂ ಇದ್ದೆನು.


ಆಗ ನೀವು ನನ್ನ ಹೆಜ್ಜೆಗಳನ್ನು ಲೆಕ್ಕಿಸುವಿರಿ; ಆದರೆ ನೀವು ನನ್ನ ಪಾಪದ ಬಗ್ಗೆ ದಾಖಲೆ ಇಡುವುದಿಲ್ಲ.


ದೇವರ ಸಂಗಡ ವ್ಯಾಜ್ಯವಾಡಲು ಮನುಷ್ಯನು ಬಯಸಿದರೂ, ದೇವರ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರ ಕೊಡಲಾರನು.


ಅವನಿಗೆ ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಐನೂರು ಕತ್ತೆಗಳು ಮತ್ತು ಅನೇಕ ಕೆಲಸಗಾರರಿದ್ದರು. ಅವನು ಪೂರ್ವದೇಶದ ಜನರೆಲ್ಲರಲ್ಲಿಯೇ ಹೆಚ್ಚು ಐಶ್ವರ್ಯವುಳ್ಳವನಾಗಿದ್ದನು.


ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.


ನೀವು, ‘ಪ್ರಧಾನನ ಮನೆ ಈಗ ಎಲ್ಲಿದೆ? ದುಷ್ಟರು ವಾಸಿಸಿದ ಗುಡಾರ ಎಲ್ಲಿ?’ ಎನ್ನುತ್ತೀರಿ.


ದೇವರು ನನ್ನ ಮಾರ್ಗಗಳನ್ನು ನೋಡಿ, ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುತ್ತಾರಲ್ಲವೆ?


ನಾನು ನನ್ನ ಹೆಗಲಲ್ಲಿ ಆ ಲಿಖಿತವನ್ನು ನಿಶ್ಚಯವಾಗಿ ಹೊತ್ತು ನಡೆಯುತ್ತಿದ್ದೆ; ಅದನ್ನು ಕಿರೀಟವಾಗಿ ಧರಿಸಿಕೊಳ್ಳುತ್ತಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು