Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:40 - ಕನ್ನಡ ಸಮಕಾಲಿಕ ಅನುವಾದ

40 ಗೋಧಿಗೆ ಬದಲಾಗಿ ಮುಳ್ಳುಗಳೂ, ಜವೆಗೋಧಿಗೆ ಬದಲಾಗಿ ಕಳೆಗಳೂ ಬೆಳೆಯಲಿ.” ಹೀಗೆ ಯೋಬನ ಮಾತುಗಳು ಮುಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಗೋದಿಗೆ ಬದಲಾಗಿ ಮುಳ್ಳುಗಳೂ, ಜವೆಗೋದಿಗೆ ಪ್ರತಿಯಾಗಿ ಕೆಟ್ಟ ಕಳೆಗಳೂ ಬೆಳೆಯಲಿ.” ಎಂದನು. ಹೀಗೆ ಯೋಬನ ಮಾತುಗಳು ಮುಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಅದು ಬೆಳೆಯಲಿ ಮುಳ್ಳುಗಳನ್ನು ಗೋದಿಗೆ ಬದಲಾಗಿ ಹಣಜಿಹುಲ್ಲನು ಜವೆಗೋದಿಗೆ ಪ್ರತಿಯಾಗಿ.” ಇತಿ, ಯೋಬನ ಮಾತುಗಳು ಮುಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಗೋದಿಗೆ ಬದಲಾಗಿ ಮುಳ್ಳುಗಳೂ ಜವೆಗೋದಿಗೆ ಪ್ರತಿಯಾಗಿ ಕೆಟ್ಟ ಕಳೆಗಳೂ ಬೆಳೆಯಲಿ. ಹೀಗೆ ಯೋಬನ ಮಾತುಗಳು ಮುಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಇವುಗಳಲ್ಲಿ ನಾನು ಯಾವುದನ್ನಾದರೂ ಮಾಡಿದ್ದರೆ, ಗೋಧಿ ಮತ್ತು ಬಾರ್ಲಿಗಳ ಬದಲಾಗಿ ನನ್ನ ಹೊಲಗಳಲ್ಲಿ ಮುಳ್ಳುಗಳೂ ಕಳೆಗಳೂ ಬೆಳೆಯಲಿ.” ಹೀಗೆ ಯೋಬನ ಮಾತುಗಳು ಮುಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:40
9 ತಿಳಿವುಗಳ ಹೋಲಿಕೆ  

ಏಸಾವನನ್ನು ದ್ವೇಷ ಮಾಡಿದೆನು. ಅವನ ಬೆಟ್ಟಗಳನ್ನು ಹಾಳು ಮಾಡಿ, ಅವನ ಸೊತ್ತನ್ನು ಅಡವಿಯ ನರಿಗಳಿಗೆ ಕೊಟ್ಟೆನು.”


ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಜೀವದಾಣೆ,” “ನಿಶ್ಚಯವಾಗಿ ಮೋವಾಬು ಸೊದೋಮಿನ ಅಮ್ಮೋನ್ಯರು ಗೊಮೋರದ ಹಾಗೆ ಆಗುವುದು. ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಳಿಗಳುಳ್ಳಂಥ ನಿತ್ಯವಾಗಿ ಹಾಳಾದ ಸ್ಥಳವಾಗುವರು. ನನ್ನ ಜನರಲ್ಲಿ ಉಳಿದವರು ಅವರನ್ನು ಸುಲಿದುಕೊಳ್ಳುವರು. ನನ್ನ ಜನರಲ್ಲಿ ಮಿಕ್ಕಾದವರು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.”


ಆ ದಿನದಲ್ಲಿ ಸಾವಿರ ಬೆಳ್ಳಿ ನಾಣ್ಯಗಳ ಬೆಲೆಯ ಸಮಸ್ತ ದ್ರಾಕ್ಷಿಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿಗಳಿಂದ ಆಗುವುದು.


ಇಷಯನ ಮಗ ದಾವೀದನ ಪ್ರಾರ್ಥನೆಗಳು ಇಲ್ಲಿಗೆ ಮುಕ್ತಾಯವಾಗುತ್ತವೆ.


‘ನಾವು ಯೋಬನಲ್ಲಿ ಜ್ಞಾನವನ್ನು ಕಂಡುಕೊಂಡಿದ್ದೇವೆ ದೇವರೇ ಅವನನ್ನು ಖಂಡಿಸಿಬಿಡಲಿ, ಇದು ಮನುಷ್ಯನಿಂದಾಗುವುದಿಲ್ಲ,’ ಎಂಬುದಾಗಿ ಅಂದುಕೊಳ್ಳಬೇಡಿರಿ.


ಅದನ್ನು ನಾನು ಹಾಳಾಗಲು ಬಿಡುವೆನು. ಅದರ ಕುಡಿ ಯಾರೂ ಕತ್ತರಿಸುವುದಿಲ್ಲ, ಅಗೆಯುವುದೂ ಇಲ್ಲ, ಅದರಲ್ಲಿ ಮುಳ್ಳು ಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾಪಿಸುವೆನು.”


ಹೀಗೆ ಹೇಳು, ‘ಈ ಪ್ರಕಾರ ಬಾಬಿಲೋನ್ ಮುಳುಗಿ ಹೋಗುವುದು. ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು. ಅವರು ಬೀಳುವರು.’ ” ಇಲ್ಲಿಯ ತನಕ ಯೆರೆಮೀಯನ ವಾಕ್ಯಗಳು.


ನನ್ನ ಹೆಗಲು, ಬೆನ್ನಿನ ಕೀಲು ತಪ್ಪಿಹೋಗಲಿ; ನನ್ನ ತೋಳು ಅದರ ಸಂದಿನಿಂದ ಕಳಚಿಬೀಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು