Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:5 - ಕನ್ನಡ ಸಮಕಾಲಿಕ ಅನುವಾದ

5 “ನಾನು ಕಪಟವಾಗಿ ನಡೆದುಕೊಂಡಿದ್ದರೆ, ಮೋಸಕ್ಕೆ ನನ್ನ ಕಾಲು ತ್ವರೆಪಟ್ಟಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಒಂದು ವೇಳೆ ನಾನು ಕಪಟತನದ ಜೊತೆಯಲ್ಲಿ ನಡೆದು ಮೋಸವನ್ನು ಹಿಂಬಾಲಿಸಿ ಓಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಾನು ಕಪಟ ಮಾರ್ಗದಲಿ ನಡೆದಿದ್ದರೆ ಮೋಸವನ್ನು ಹಿಂಬಾಲಿಸಿ ಓಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೇವರು ನನ್ನನ್ನು ನ್ಯಾಯವಾದ ತ್ರಾಸಿನಲ್ಲಿ ತೂಗಿ ನನ್ನ ಯಥಾರ್ಥತ್ವವನ್ನು ತಿಳಿದುಕೊಳ್ಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ನಾನು ಸುಳ್ಳು ಹೇಳಲಿಲ್ಲ; ಜನರಿಗೆ ಮೋಸಮಾಡಲು ಪ್ರಯತ್ನಿಸಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:5
11 ತಿಳಿವುಗಳ ಹೋಲಿಕೆ  

ತನ್ನ ಹೊಲವನ್ನು ವ್ಯವಸಾಯ ಮಾಡುವವನು ಆಹಾರದಿಂದ ತೃಪ್ತಿಹೊಂದುವನು, ಆದರೆ ವ್ಯರ್ಥ ಕಾರ್ಯವನ್ನು ಹಿಂಬಾಲಿಸುವವನು ವಿವೇಕಶೂನ್ಯನು.


ಒಬ್ಬ ಸುಳ್ಳುಗಾರನೂ ಮೋಸಗಾರನೂ ಬಂದು, ‘ನಿನಗೆ ದ್ರಾಕ್ಷಾರಸವೂ ಮದ್ಯಪಾನವೂ ಯಥೇಚ್ಛವಾಗಿ ದೊರೆಯುವುದೆಂದು ನಾನು ಪ್ರವಾದಿಸುವೆನು,’ ಎಂದು ಹೇಳಿದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಸುಳ್ಳಾಗಿ ಮಾತನಾಡಿದ್ದರಿಂದಲೂ, ಸುಳ್ಳನ್ನು ದರ್ಶಿಸಿದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನು. ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ, ವ್ಯರ್ಥವಾಗುವ ಹಾಗೆ ನನ್ನಲ್ಲಿ ಏನು ತಪ್ಪನ್ನು ಕಂಡಿದ್ದಾರೆ?


ಪ್ರತಿಯೊಬ್ಬರು ತಮ್ಮ ನೆರೆಯವರ ಸಂಗಡ ಸುಳ್ಳಾಡುತ್ತಾರೆ; ಅವರು ತಮ್ಮ ತುಟಿಯಿಂದ ಹೊಗಳಿ, ಹೃದಯದಲ್ಲಿ ವಂಚನೆಯನ್ನು ಮಾತನಾಡುತ್ತಾರೆ.


ಓ ಮಾನವ, ನೀನು ಎಲ್ಲಿಯತನಕ ನನ್ನ ಮಹಿಮೆಯನ್ನು ಅವಮಾನಕ್ಕೆ ಗುರಿಪಡಿಸುವಿ? ನೀನು ಎಲ್ಲಿಯತನಕ ವ್ಯರ್ಥವಾದದ್ದನ್ನು ಪ್ರೀತಿಸಿ, ಸುಳ್ಳನ್ನು ಹುಡುಕುವಿ?


ದುಷ್ಟನು ವ್ಯರ್ಥವಾದದ್ದನ್ನು ನಂಬಿ ಮೋಸಹೋಗದಿರಲಿ. ಏಕೆಂದರೆ, ವ್ಯರ್ಥವಾದವುಗಳಿಂದ ಅವನಿಗಾಗುವ ಪ್ರತಿಫಲವು ಶೂನ್ಯವೇ.


“ದೇವಾದಿದೇವರಾದ ಯೆಹೋವ ದೇವರು ಇದಕ್ಕೆ ಸಾಕ್ಷಿ, ನಾವು ದೇವಾದಿದೇವರಾದ ಯೆಹೋವ ದೇವರಿಗೆ ವಿರುದ್ಧ ಪಾಪಮಾಡಿದವರಾಗಿದ್ದರೆ ಅಥವಾ ಅವಿಧೇಯರಾಗಿದ್ದರೆ, ಆ ದೇವರು ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.


ಮೋಸಗಾರರ ಸಂಗಡ ನಾನು ಕುಳಿತುಕೊಳ್ಳಲಿಲ್ಲ; ವಂಚಕರ ಸಂಗಡ ನಾನು ಹೋಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು