ಯೋಬ 32:6 - ಕನ್ನಡ ಸಮಕಾಲಿಕ ಅನುವಾದ6 ಆಗ ಬೂಜ್ಯನಾದ ಬರಕೇಲನ ಮಗ ಎಲೀಹು ಹೇಳಿದ್ದೇನೆಂದರೆ: “ನಾನು ಪ್ರಾಯದಲ್ಲಿ ಯುವಕನು, ನೀವು ಪ್ರಾಯಸ್ಥರು. ಆದ್ದರಿಂದ ನಾನು ಸಂಕೋಚಗೊಂಡು ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವುದಕ್ಕೆ ಭಯಪಟ್ಟೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಆ ಎಲೀಹು ಇಂತೆಂದನು, “ನಾನು ಯೌವನಸ್ಥನು, ನೀವು ನನಗಿಂತ ಹಿರಿಯರು; ಆದುದರಿಂದ ಸಂಕೋಚಪಟ್ಟು ನನ್ನ ಅಭಿಪ್ರಾಯವನ್ನು ನಿಮಗೆ ಅರಿಕೆಮಾಡಲು ಹೆದರಿದೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ಬೂಜಿನವನಾದ ಬರಕೇಲನ ಮಗ ಎಲೀಹುವನು ಕೊಟ್ಟ ಉತ್ತರ: “ನಾನು ಕಿರಿಯವನು, ನೀವು ಎಷ್ಟೋ ಹಿರಿಯವರು ಎಂದೇ ಸಂಕೋಚಪಟ್ಟೆನು ನನ್ನ ಅಭಿಪ್ರಾಯ ತಿಳಿಸಲು ಅಂಜಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಆ ಎಲೀಹು ಇಂತೆಂದನು - ನಾನು ಯೌವನಸ್ಥನು, ನೀವು ಅತಿವೃದ್ಧರು; ಆದದರಿಂದ ಸಂಕೋಚಪಟ್ಟು ನನ್ನ ಅಭಿಪ್ರಾಯವನ್ನು ನಿಮಗೆ ಅರಿಕೆ ಮಾಡಲು ಅಂಜಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದ್ದರಿಂದ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಎಲೀಹು ಮಾತಾಡಲಾರಂಭಿಸಿ ಹೀಗೆಂದನು: “ನಾನು ವಯಸ್ಸಿನಲ್ಲಿ ಚಿಕ್ಕವನು, ನೀವು ವೃದ್ಧರು. ಆದಕಾರಣ, ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸಲು ಹಿಂಜರಿದೆನು ಮತ್ತು ಹೆದರಿಕೊಂಡಿದ್ದೆನು. ಅಧ್ಯಾಯವನ್ನು ನೋಡಿ |