Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:14 - ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ ದೇವರು ಮಾತನಾಡುತ್ತಾರೆ. ಹೌದು, ವಿವಿಧ ರೀತಿಯಿಂದ ಮಾತನಾಡುತ್ತಾರೆ; ಆದರೂ ಯಾರು ದೇವರ ಸ್ವರವನ್ನು ಗ್ರಹಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದೇವರು ಮಾತನಾಡುವ ರೀತಿ ಒಂದುಂಟು ಹೌದು, ಎರಡೂ ಉಂಟು, ಮನುಷ್ಯನಾದರೋ ಲಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದೇವರು ಪದೇ ಪದೇ ಮಾತನಾಡಿದರೂ ನರಮಾನವನು ಗ್ರಹಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ದೇವರು ಮಾತಾಡುವ ರೀತಿ ಒಂದುಂಟು ಹೌದು, ಎರಡೂ ಉಂಟು, ಮನುಷ್ಯನಾದರೋ ಲಕ್ಷಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಒಂದುವೇಳೆ ದೇವರು ತನ್ನ ಕಾರ್ಯದ ಕುರಿತಾಗಿ ವಿವರಿಸಬಹುದು. ಒಂದುವೇಳೆ ನಮಗೆ ಅರ್ಥವಾಗದ ರೀತಿಯಲ್ಲಿ ಆತನು ಮಾತಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:14
15 ತಿಳಿವುಗಳ ಹೋಲಿಕೆ  

ನಾನು ಕರೆದಾಗ ನೀವು ನನ್ನನ್ನು ತಿರಸ್ಕರಿಸಿದ್ದೀರಿ ನಾನು ನನ್ನ ಕೈಚಾಚಿದಾಗ ಯಾರೂ ಮನುಷ್ಯನೂ ಗಮನಿಸಲಿಲ್ಲ.


ಯೆಹೋವ ದೇವರು ಮನಸ್ಸೆಯೊಂದಿಗೂ, ಅವನ ಜನರೊಂದಿಗೂ ಮಾತನಾಡಿದರು. ಆದರೆ ಅವರು ಲಕ್ಷಿಸಲಿಲ್ಲ.


ಒಂದು ಸಾರಿ ದೇವರು ಮಾತನಾಡಿದ್ದಾರೆ. ನಾನು ಎರಡು ಸಾರಿ ಇದನ್ನು ಹೀಗೆಂದು ಕೇಳಿದ್ದೇನೆ: “ದೇವರೇ, ಶಕ್ತಿಯು ನಿಮಗೇ ಸೇರಿದೆ.


ಆಗ ಯೇಸು ಅವರಿಗೆ, “ಎಂಥ ಬುದ್ಧಿಹೀನರು ನೀವು, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವುದರಲ್ಲಿ ಮಂದ ಹೃದಯದವರೇ!


“ನೋಡು, ದೇವರು ಎರಡು ಸಾರಿಯಲ್ಲದೆ, ಮೂರು ಸಾರಿ ಈ ಕಾರ್ಯಗಳನ್ನೆಲ್ಲಾ ಮನುಷ್ಯರಿಗಾಗಿ ಮಾಡುವರು.


ಆ ತೀರ್ಪು ಏನೆಂದರೆ: ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.


ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನೆಂದರೆ, “ ‘ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ.


ಅದಕ್ಕೆ ಅವರು, “ನೀನು ಈ ಜನರ ಬಳಿಗೆ ಹೋಗಿ: “ ‘ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ,’


ಏಕೆಂದರೆ ಅವರು ಅರಿವನ್ನು ಹಗೆಮಾಡಿ, ಯೆಹೋವ ದೇವರಿಗೆ ಭಯಪಡುವುದನ್ನು ಆರಿಸಿಕೊಳ್ಳದೆ ಹೋದರು.


ಒಂದು ಸಾರಿ ಮಾತಾಡಿದೆ, ಈಗ ನನಗೆ ಕೊಡುವುದಕ್ಕೆ ಉತ್ತರ ಇಲ್ಲ; ಮತ್ತೆ ಮಾತಾಡುತ್ತಿದ್ದೇನೆ, ಆದರೆ ಮಾತಾಡಲು ನನಗೆ ಇನ್ನೇನೂ ಇಲ್ಲ,” ಎಂದನು.


ದೇವರು ಇಸ್ರಾಯೇಲನಿಗೆ ರಾತ್ರಿಯ ದರ್ಶನದಲ್ಲಿ ಮಾತನಾಡಿ, “ಯಾಕೋಬನೇ, ಯಾಕೋಬನೇ,” ಎಂದರು. ಅದಕ್ಕವನು, “ಇಗೋ, ಇದ್ದೇನೆ,” ಎಂದನು.


ಬಾಬಿಲೋನಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಕನಸನ್ನೂ, ದರ್ಶನಗಳನ್ನೂ ಕಂಡು, ತನ್ನ ಕನಸಿನ ತಾತ್ಪರ್ಯವನ್ನು ಬರೆದಿಟ್ಟನು.


ರಾತ್ರಿ ಕನಸಿನ ಆಲೋಚನೆಗಳಲ್ಲಿಯೂ ಗಾಢನಿದ್ರೆಯು ಜನರಿಗೆ ಹತ್ತುವಾಗಲೂ


ಯೆಹೋವ ದೇವರೇ, ನಿಮ್ಮಲ್ಲಿ ಒಡಂಬಡಿಕೆಯ ಪ್ರೀತಿ ಇದೆ. ನೀವು ಪ್ರತಿ ಮನುಷ್ಯನಿಗೂ ಅವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುತ್ತೀರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು