Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:15 - ಕನ್ನಡ ಸಮಕಾಲಿಕ ಅನುವಾದ

15 ಸ್ವಪ್ನದಲ್ಲಿ, ರಾತ್ರಿಯ ದರ್ಶನದಲ್ಲಿ, ಗಾಢನಿದ್ರೆಯು ಮನುಷ್ಯರಿಗೆ ಬಂದಾಗ, ಹಾಸಿಗೆಯ ಮೇಲಿನ ತೂಕಡಿಕೆಗಳಲ್ಲಿ ಸಹ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮನುಷ್ಯರಿಗೆ ಗಾಢನಿದ್ರೆಯು ಉಂಟಾದಾಗಲೂ, ಹಾಸಿಗೆಯ ಮೇಲೆ ಮಲಗಿದಾಗ ಜೊಂಪುಹತ್ತಿದಾಗಲೂ ಆತನು ಸ್ವಪ್ನದಲ್ಲಿ ರಾತ್ರಿಯ ಕನಸಿನಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮಾನವನಿಗೆ ಗಾಢನಿದ್ರೆ ಬಂದಾಗ ಹಾಸಿಗೆ ಮೇಲೆ ಮಲಗಿರುವಾಗ ಸ್ವಪ್ನ ಬಿದ್ದಾಗ, ಕನಸು ಕಾಣುವಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮನುಷ್ಯರಿಗೆ ಗಾಢನಿದ್ರೆಯುಂಟಾದಾಗಲೂ ಹಾಸಿಗೆಯ ಮೇಲೆ ಜಂಪುಹತ್ತಿದಾಗಲೂ ಆತನು ಸ್ವಪ್ನದಲ್ಲಿ ರಾತ್ರಿಯ ಕನಸಿನಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜನರು ಗಾಢನಿದ್ರೆಯಲ್ಲಿರುವಾಗ ದೇವರು ಕನಸಿನ ಮೂಲಕವಾಗಲಿ ದರ್ಶನದ ಮೂಲಕವಾಗಲಿ ಮಾತಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:15
15 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಅವರಿಗೆ ಹೀಗೆ ಹೇಳಿದನು, “ನನ್ನ ಮಾತುಗಳನ್ನು ಈಗ ಕೇಳಿರಿ: “ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಯೆಹೋವ ದೇವರಾದ ನಾನು ದರ್ಶನದಲ್ಲಿ ಪ್ರಕಟಿಸುವೆನು, ಇಲ್ಲವೆ ಕನಸಿನಲ್ಲಿಯೂ ನಾನು ಅವನೊಡನೆ ಮಾತನಾಡುವೆನು.


ರಾತ್ರಿ ಕನಸಿನ ಆಲೋಚನೆಗಳಲ್ಲಿಯೂ ಗಾಢನಿದ್ರೆಯು ಜನರಿಗೆ ಹತ್ತುವಾಗಲೂ


ನನ್ನನ್ನು ಭಯಪಡಿಸುವಂಥಹ ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ನನ್ನ ಮನಸ್ಸಿನಲ್ಲಿ ಹಾದುಹೋದ ಚಿತ್ರಗಳು ಮತ್ತು ದರ್ಶನಗಳು ನನ್ನನ್ನು ಭಯಭೀತಗೊಳಿಸಿದವು.


ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮಿನವನಾದ ಲಾಬಾನನ ಬಳಿಗೆ ಬಂದು ಅವನಿಗೆ, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು,” ಎಂದರು.


ಆದರೆ ದೇವರು ಅಬೀಮೆಲೆಕನಿಗೆ ರಾತ್ರಿಯ ಕನಸಿನಲ್ಲಿ ಬಂದು, “ನೀನು ಆ ಸ್ರೀಯನ್ನು ತೆಗೆದುಕೊಂಡ ಕಾರಣ ಸಾಯತಕ್ಕವನಾಗಿದ್ದಿ, ಏಕೆಂದರೆ ಆಕೆಯು ಆ ಮನುಷ್ಯನ ಹೆಂಡತಿ,” ಎಂದು ಅವನಿಗೆ ಹೇಳಿದರು.


ಈಗ ಅವನು ನನ್ನ ಸಂಗಡ ಮಾತನಾಡುತ್ತಿರುವಾಗ, ನಾನು ಮುಖ ಕೆಳಗಾಗಿ ನೆಲದ ಮೇಲೆ ಗಾಢನಿದ್ರೆಯಲ್ಲಿ ಬಿದ್ದಿದ್ದೆನು. ಆದರೆ ಅವನು ನನ್ನನ್ನು ಮುಟ್ಟಿ, ಎದ್ದು ನಿಲ್ಲುವಂತೆ ಮಾಡಿದನು.


ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ. ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ?” ಎಂದು ಯೆಹೋವ ದೇವರು ಹೇಳುತ್ತಾರೆ.


ಸೂರ್ಯನು ಅಸ್ತಮಿಸಲಾಗಿ ಅಬ್ರಾಮನಿಗೆ ಗಾಢನಿದ್ರೆ ಹತ್ತಿತ್ತು. ಭೀಕರವಾದ ಕಾರ್ಗತ್ತಲು ಅವನ ಮೇಲೆ ಕವಿಯಿತು.


ಗತಕಾಲದಲ್ಲಿ ನಮ್ಮ ಪಿತೃಗಳ ಸಂಗಡ ವಿವಿಧ ರೀತಿಯಲ್ಲಿಯೂ ಅನೇಕಬಾರಿ ಪ್ರವಾದಿಗಳ ಮುಖಾಂತರವೂ ಮಾತನಾಡಿದ ದೇವರು,


ಅನಂತರ ಅವರು ಕನಸಿನಲ್ಲಿ ಹೆರೋದನ ಬಳಿಗೆ ಹಿಂತಿರುಗಬಾರದೆಂಬ ಎಚ್ಚರಿಕೆಯನ್ನು ಹೊಂದಿದ್ದರಿಂದ, ಬೇರೆ ದಾರಿಯಿಂದ ತಮ್ಮ ದೇಶಕ್ಕೆ ಹೊರಟು ಹೋದರು.


ಪಿಲಾತನು ನ್ಯಾಯಾಸನದ ಮೇಲೆ ಕೂತಿದ್ದಾಗ, ಅವನ ಹೆಂಡತಿಯು ಅವನಿಗೆ, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ. ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ,” ಎಂದು ಹೇಳಿ ಕಳುಹಿಸಿದಳು.


ದೇವರು ಇಸ್ರಾಯೇಲನಿಗೆ ರಾತ್ರಿಯ ದರ್ಶನದಲ್ಲಿ ಮಾತನಾಡಿ, “ಯಾಕೋಬನೇ, ಯಾಕೋಬನೇ,” ಎಂದರು. ಅದಕ್ಕವನು, “ಇಗೋ, ಇದ್ದೇನೆ,” ಎಂದನು.


“ಒಂದು ಮಾತು ನನಗೆ ಗುಟ್ಟಾಗಿ ತಿಳಿದುಬಂತು, ಅದರ ಪಿಸುಮಾತು ನನ್ನ ಕಿವಿಗೆ ಬಿತ್ತು.


ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರ್ಷದಲ್ಲಿ ನೆಬೂಕದ್ನೆಚ್ಚರನು ಕನಸುಗಳನ್ನು ಕಂಡನು. ಅವನ ಆತ್ಮವು ಕಳವಳಗೊಂಡಿತು. ಅವನಿಗೆ ನಿದ್ರೆಯೇ ಬರಲಿಲ್ಲ.


ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನದಲ್ಲಿ ಪ್ರಕಟವಾಯಿತು. ದಾನಿಯೇಲನು ಪರಲೋಕದ ದೇವರನ್ನು ಸ್ತುತಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು