Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:3 - ಕನ್ನಡ ಸಮಕಾಲಿಕ ಅನುವಾದ

3 ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುತ್ತವೆ; ನನ್ನ ತುಟಿಗಳು ನಾನು ತಿಳಿದುಕೊಂಡಿದ್ದನ್ನೇ ಯಥಾರ್ಥವಾಗಿ ಹೇಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುವವು, ನನ್ನ ತುಟಿಗಳು ತಿಳಿದುಕೊಂಡದ್ದನ್ನೇ ಸತ್ಯವಾಗಿ ಹೇಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನನ್ನ ನುಡಿ ವ್ಯಕ್ತಪಡಿಸುತ್ತದೆ ಹೃದಯದ ಯಥಾರ್ಥತೆಯನು ನನ್ನ ತುಟಿ ನುಡಿಯುತ್ತದೆ ಸತ್ಯವೆಂದು ಅರಿತವುಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುವವು, ನನ್ನ ತುಟಿಗಳು ತಿಳಿದುಕೊಂಡದ್ದನ್ನೇ ಸತ್ಯವಾಗಿ ಹೇಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನ ಹೃದಯವು ಯಥಾರ್ಥವಾಗಿದೆ; ಆದ್ದರಿಂದ ನಾನು ಯಥಾರ್ಥವಾದ ಮಾತುಗಳನ್ನು ಹೇಳುವೆನು, ನನಗೆ ತಿಳಿದಿರುವ ಸಂಗತಿಗಳ ಬಗ್ಗೆ ಸತ್ಯವನ್ನು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:3
15 ತಿಳಿವುಗಳ ಹೋಲಿಕೆ  

ನನ್ನ ತುಟಿಗಳು ಸುಳ್ಳನ್ನು ನುಡಿಯುವುದೇ ಇಲ್ಲ. ನನ್ನ ನಾಲಿಗೆಯು ಎಷ್ಟು ಮಾತ್ರಕ್ಕೂ ಮೋಸದ ಮಾತುಗಳನ್ನಾಡುವುದಿಲ್ಲ.


ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ; ಆದರೆ ಪರಿಜ್ಞಾನದ ತುಟಿಗಳು ಅಪರೂಪದ ರತ್ನವಾಗಿವೆ.


ಜ್ಞಾನಿಗಳ ತುಟಿಗಳು ಪರಿಜ್ಞಾನವನ್ನು ಹರಡುತ್ತವೆ. ಆದರೆ ಬುದ್ಧಿಹೀನರ ಹೃದಯವು ಹಾಗೆ ಮಾಡುವುದೇ ಇಲ್ಲ.


ಜ್ಞಾನಿಯ ನಾಲಿಗೆಯು ಒಳ್ಳೆಯ ಪರಿಜ್ಞಾನವನ್ನು ಹರಡುತ್ತದೆ. ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನು ಹೊರಗೆಡವುತ್ತದೆ.


“ಅಜ್ಞಾನದ ಮಾತುಗಳಿಂದ ನನ್ನ ಯೋಜನೆಗಳನ್ನು ಮಂಕುಮಾಡುವ ನೀನು ಯಾರು?


“ಜ್ಞಾನಿಯು ವ್ಯರ್ಥ ತಿಳುವಳಿಕೆಯನ್ನು ನುಡಿದು ಪೂರ್ವದಿಕ್ಕಿನ ಗಾಳಿಯಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುವುದು ಉಂಟೋ?


“ಆದ್ದರಿಂದ ಈಗ ಸ್ವಲ್ಪ ದಯೆಯುಳ್ಳವರಾಗಿ ನನ್ನನ್ನು ದೃಷ್ಟಿಸಿರಿ; ನಾನು ನಿಮ್ಮೆದುರಿನಲ್ಲಿ ಸುಳ್ಳು ಹೇಳುವೆನೋ?


ಈಗ ನಾನು ಮಾತಾಡಲು ಪ್ರಾರಂಭಿಸಿದ್ದೇನೆ; ನನ್ನ ಮಾತುಗಳು ನನ್ನ ನಾಲಿಗೆಯ ತುದಿಯಲ್ಲಿವೆ.


ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು; ನಾನು ಯಾವ ಮನುಷ್ಯನನ್ನು ಹೊಗಳೆನು.


ಹೊಗಳುವುದರಲ್ಲಿ ನಾನು ಪ್ರವೀಣನಾಗಿದ್ದರೆ, ನನ್ನ ಸೃಷ್ಟಿಕರ್ತ ಆಗಿರುವವರು ನನ್ನನ್ನು ಬೇಗ ತೆಗೆದುಕೊಂಡು ಹೋಗಲಿ.


ಏಕೆಂದರೆ ನಾನು ನಿಮಗೆ ಸದುಪದೇಶವನ್ನು ಮಾಡುವೆನು, ನನ್ನ ಉಪದೇಶವನ್ನು ಬಿಟ್ಟುಬಿಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು