Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:15 - ಕನ್ನಡ ಸಮಕಾಲಿಕ ಅನುವಾದ

15 ಎಲ್ಲಾ ಮನುಷ್ಯರೂ ಒಟ್ಟಿಗೆ ಅಳಿದುಹೋಗುವರು; ಇಡೀ ಮಾನವಕುಲವು ಧೂಳಿಗೆ ಹಿಂದಿರುಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸಮಸ್ತ ಜನರು ಒಟ್ಟಾಗಿ ಅಳಿದುಹೋಗುವರು, ಪುನಃ ಮನುಷ್ಯರು ಧೂಳೇ ಆಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸಮಸ್ತಜನರು ಒಟ್ಟಾಗಿ ಅಳಿದುಹೋಗುವರು ಮರಳಿ ಮನುಷ್ಯರೆಲ್ಲರೂ ಮಣ್ಣಾಗಿ ಮಾರ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸಮಸ್ತಜನರು ಒಟ್ಟಾಗಿ ಅಳಿದುಹೋಗುವರು, ಪುನಃ ಮನುಷ್ಯರು ದೂಳೇ ಆಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಭೂಮಿಯ ಮೇಲಿರುವ ಎಲ್ಲಾ ಜನರು ಸತ್ತುಹೋಗಿ ಧೂಳಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:15
12 ತಿಳಿವುಗಳ ಹೋಲಿಕೆ  

ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”


ಆಮೇಲೆ ಮಣ್ಣಿನ ದೇಹ ಅದು ಇದ್ದ ಹಾಗೆಯೇ ಭೂಮಿಗೆ ಸೇರುವುದು. ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂದಿರುಗುವುದು.


ನಾನು ಎಂದೆಂದಿಗೂ ವ್ಯಾಜ್ಯವಾಡುವುದಿಲ್ಲ. ಯಾವಾಗಲೂ ಕೋಪಿಸಿಕೊಳ್ಳೆನು. ಏಕೆಂದರೆ ಆತ್ಮವೂ, ನಾನು ಉಂಟುಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.


ರೌದ್ರವು ನನ್ನಲ್ಲಿ ಇಲ್ಲ. ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ, ನಾನು ಅವುಗಳನ್ನು ಹಾದು ಹೋಗಿ, ಅವುಗಳನ್ನು ಒಟ್ಟಿಗೆ ಸುಡುವೆನು.


ದೇವರೇ, ನೀವು ನನ್ನನ್ನು ಎಲ್ಲಾ ಜೀವಿಗಳಿಗೆ ನೇಮಕವಾದ ಮನೆಯೆಂಬ ಮರಣಕ್ಕೆ, ಸೇರಿಸುವಿರಿ ಎಂದು ನನಗೆ ಗೊತ್ತಿದೆ.


ನೀವು ಕುಂಬಾರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀರಿ ಎಂದು ಜ್ಞಾಪಕಮಾಡಿಕೊಳ್ಳಿರಿ. ಈಗ ನೀವೇ ನನ್ನನ್ನು ಮಣ್ಣಿಗೆ ಸೇರಿಸುವಿರೋ?


ಇದೆಲ್ಲಾ ಒಂದೇ ವಿಷಯ; ಆದ್ದರಿಂದ ನಾನು ಇದನ್ನು ಹೇಳುತ್ತೇನೆ: ‘ನಿರ್ದೋಷಿಯನ್ನೂ, ಕೆಟ್ಟವನನ್ನೂ ದೇವರು ದಂಡಿಸುತ್ತಾರೆ.’


ಪಕ್ಷಿಗಳು, ಪಶುಗಳು, ಕಾಡುಮೃಗಗಳು, ನೆಲದ ಮೇಲೆ ಚಲಿಸುವ ಸಕಲ ಪ್ರಾಣಿಗಳು ಮತ್ತು ಮನುಷ್ಯರು ನಾಶವಾದರು.


ನಾವೆಲ್ಲರೂ ಸಾಯುವುದು ಅವಶ್ಯವೇ. ನಾವು ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಹಾಗೆ ಯಾರ ಪ್ರಾಣವನ್ನೂ ತೆಗೆಯ ಬಯಸುವವರಲ್ಲ. ಅದಕ್ಕೆ ಬದಲಾಗಿ ಬಹಿಷ್ಕಾರವಾದವವರನ್ನು ತಿರುಗಿ ತಮ್ಮ ಬಳಿಗೆ ಬರುವಂತೆ ದೇವರು ಸದುಪಾಯಗಳನ್ನು ಕಲ್ಪಿಸುವವರಾಗಿದ್ದಾರೆ.


“ಯೋಬನೇ, ಅರ್ಥಮಾಡಿಕೊಂಡು, ಇದನ್ನು ಕೇಳಿಸಿಕೋ; ನನ್ನ ಮಾತಿಗೆ ಕಿವಿಗೊಡು.


ನೀವು ನಿಮ್ಮ ಮುಖವನ್ನು ಮರೆಮಾಡಲು, ಅವು ಹೆದರುತ್ತವೆ. ನೀವು ಅವುಗಳ ಶ್ವಾಸವನ್ನು ತೆಗೆದುಬಿಡಲು, ಸತ್ತು ಹೋಗಿ, ಮಣ್ಣುಪಾಲಾಗುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು