Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:9 - ಕನ್ನಡ ಸಮಕಾಲಿಕ ಅನುವಾದ

9 “ಏಕೆಂದರೆ ಅವನು, ‘ದೇವರನ್ನು ಮೆಚ್ಚಿಸಲು ಪ್ರಯತ್ನಿಸುವುದರಿಂದ ಮನುಷ್ಯನಿಗೆ ಯಾವುದೇ ಲಾಭವಿಲ್ಲ,’ ಎಂದು ಹೇಳುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ‘ಒಬ್ಬನು ದೇವರ ಅನ್ಯೋನ್ಯತೆಯಲ್ಲಿ ಸಂತೋಷಪಟ್ಟರೂ, ಅವನಿಗೆ ಯಾವ ಪ್ರಯೋಜನವೂ ಇಲ್ಲ’ ಎಂದು ಹೇಳಿದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದೇವರನು ಪ್ರೀತಿಸಿ ಬಾಳುವುದರಿಂದ ಪ್ರಯೋಜನವಿಲ್ಲವೆಂಬುದು ಇವನ ವಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಒಬ್ಬನು ದೇವರ ಅನ್ಯೋನ್ಯತೆಯಲ್ಲಿ ಸಂತೋಷಪಟ್ಟರೂ ಅವನಿಗೆ ಯಾವ ಪ್ರಯೋಜನವೂ ಇಲ್ಲವೆಂದು ಹೇಳಿದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಾಕೆಂದರೆ, ‘ದೇವರಿಗೆ ವಿಧೇಯನಾಗಿರುವವನಿಗೆ ಅದರಿಂದ ಯಾವ ಪ್ರಯೋಜನವೂ ಇಲ್ಲ’ ಎಂದು ಅವನೇ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:9
13 ತಿಳಿವುಗಳ ಹೋಲಿಕೆ  

ಏಕೆಂದರೆ, ‘ನೀತಿಯಿಂದ ನನಗೇನು ಪ್ರಯೋಜನವಾಯಿತು? ನಾನು ಪಾಪಮಾಡದೆ ಇದ್ದುದರಿಂದ ನನಗೆ ಲಾಭವೇನು? ಎಂದು ನೀನು ದೇವರಿಗೆ ಕೇಳಿದಿ.’


“ನೀವು, ‘ದೇವರನ್ನು ಸೇವಿಸುವುದು ವ್ಯರ್ಥ, ನಾವು ಆತನ ನಿಯಮಗಳನ್ನು ಕೈಗೊಂಡು ಸೇನಾಧೀಶ್ವರ ಯೆಹೋವ ದೇವರ ಮುಂದೆ ದುಃಖಪಡುವುದರಿಂದ ಏನು ಪ್ರಯೋಜನವೆಂದೂ,


ಯೆಹೋವ ದೇವರಲ್ಲಿ ಆನಂದವಾಗಿರು; ಆಗ ಅವರು ನಿನ್ನ ಹೃದಯದ ಅಪೇಕ್ಷೆಗಳನ್ನು ಈಡೇರಿಸುವರು.


ಭಕ್ತಿಹೀನನು ಸರ್ವಶಕ್ತರಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿಯೂ ದೇವರನ್ನು ಕರೆಯುವನೋ?


ಅವರು ದೇವರಿಗೆ, ‘ನಮ್ಮಿಂದ ತೊಲಗಿಹೋಗು! ಸರ್ವಶಕ್ತ ನಮಗೇನು ಮಾಡಲು ಸಾಧ್ಯ?’ ಎಂದು ಹೇಳಿಕೊಳ್ಳುತ್ತಿದ್ದರು.


ಹೀಗೆ ಆಪತ್ತಿನ ದಿನ ದುಷ್ಟರು ತಪ್ಪಿಸಿಕೊಳ್ಳುತ್ತಾರೆ; ದೇವರ ದಂಡನೆಯ ದಿನದಲ್ಲಿ ಅವರು ಬಿಡುಗಡೆಯಾಗುತ್ತಾರೆ.


ಕಳ್ಳನನ್ನು ಕಂಡರೆ ಅವನೊಂದಿಗೆ ಸೇರಿಕೊಳ್ಳುತ್ತೀರಿ. ವ್ಯಭಿಚಾರಿಗಳ ಸಂಗಡ ನಿಮಗೆ ಪಾಲು ಇದೆ.


ನನ್ನ ಹೃದಯವನ್ನು ಶುದ್ಧ ಮಾಡಿಕೊಂಡಿದ್ದು ವ್ಯರ್ಥವೋ? ನನ್ನ ಅಂಗೈಗಳನ್ನು ನಿರಪರಾಧದಲ್ಲಿ ತೊಳೆದಿದ್ದೂ ವ್ಯರ್ಥವೋ?


ನೀನು ನೀತಿವಂತನಾಗಿದ್ದರೆ, ಸರ್ವಶಕ್ತರಿಗೆ ಮೆಚ್ಚಿಕೆಯೋ? ನಿನ್ನ ಮಾರ್ಗಗಳು ನಿರ್ದೋಷವಾಗಿದ್ದರೆ, ದೇವರಿಗೆ ಲಾಭವೇನು?


‘ನಾವು ಉಪವಾಸ ಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸಲಿಲ್ಲ?’ ‘ನಮ್ಮ ಪ್ರಾಣವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ?’ ಎಂದು ಅವರು ಅಂದುಕೊಳ್ಳುತ್ತಾರೆ. “ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ಇಷ್ಟದ ಕೆಲಸವನ್ನು ನಡೆಸಿ ಮತ್ತು ನಿಮ್ಮ ಕೆಲಸದವರನ್ನು ದುಡಿತಕ್ಕೆ ಎಳೆಯುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು