Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 35:11 - ಕನ್ನಡ ಸಮಕಾಲಿಕ ಅನುವಾದ

11 ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಬುದ್ಧಿಕಲಿಸಿಕೊಡುವ ದೇವರು ಎಲ್ಲಿ? ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುವ ದೇವರು ಎಲ್ಲಿ?’ ಎಂದು ಯಾರೂ ಹೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆತನು ಕಾಡು ಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನು ಬೋಧಿಸುತ್ತಾ, ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ಧಿಯನ್ನು ನಮಗೆ ಕಲಿಸುತ್ತಾನೆ’ ಎಂದು ಹೇಳುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕಾಡುಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನೀಯುವವನೆಲ್ಲಿ? ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ದಿಕಲಿಸುವನೆಲ್ಲಿ? ಎನ್ನುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕಾಡುಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನು ಬೋಧಿಸುತ್ತಾ ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ಧಿಯನ್ನು ನಮಗೆ ಕಲಿಸುತ್ತಾನೆ ಎಂದು ಹೇಳಿಕೊಳ್ಳುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ‘ನಮ್ಮನ್ನು ಪಕ್ಷಿಗಳಿಗಿಂತಲೂ ಪ್ರಾಣಿಗಳಿಗಿಂತಲೂ ಜ್ಞಾನಿಗಳನ್ನಾಗಿ ಮಾಡುವ ದೇವರೆಲ್ಲಿ?’ ಎಂದು ಅವರು ಕೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 35:11
9 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ನೀವು ಯಾರನ್ನು ಶಿಕ್ಷಿಸುವಿರೋ ಅಂಥವರು ಧನ್ಯರು. ನಿಮ್ಮ ನಿಯಮದಿಂದ ಯಾರಿಗೆ ಕಲಿಸಿಕೊಡುವಿರೋ ಅವರು ಧನ್ಯರು.


“ದೇವರು ತಮ್ಮ ಶಕ್ತಿಯಲ್ಲಿ ಉನ್ನತರಾಗಿದ್ದಾರೆ. ದೇವರಂಥ ಬೋಧಕರು ಯಾರಿದ್ದಾರೆ?


ಆದರೆ ಮನುಷ್ಯನಲ್ಲಿ ಒಂದು ಆತ್ಮ ಉಂಟು; ಸರ್ವಶಕ್ತರ ಶ್ವಾಸವು ಅವನಿಗೆ ತಿಳುವಳಿಕೆಯನ್ನು ಕೊಡುತ್ತದೆ.


ಹೀಗಿರಲು ಯೆಹೋವ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ, ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು ಆಗ ಅವನು ಜೀವಿಸುವ ವ್ಯಕ್ತಿಯಾದನು.


ತರುವಾಯ ದೇವರು, “ನಾವು ನಮ್ಮ ಸ್ವರೂಪದಲ್ಲಿ, ನಮ್ಮ ಹೋಲಿಕೆಯಲ್ಲಿ ಮನುಷ್ಯನನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ಮಾಡಲಿ,” ಎಂದರು.


ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದಿಲ್ಲ. ಆದರೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾರೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಲ್ಲವೇ?


“ದೇವರಿಗೆ ಅರಿವನ್ನು ಬೋಧಿಸಬಹುದೇ? ಉನ್ನತರಿಗೂ ನ್ಯಾಯತೀರಿಸುವುದು ದೇವರೇ ಅಲ್ಲವೇ?


ರಾಷ್ಟ್ರಗಳಿಗೆ ಶಿಕ್ಷಣ ಕೊಡುವ ದೇವರು ಶಿಕ್ಷಿಸುವುದಿಲ್ಲವೋ? ಮಾನವನಿಗೆ ಕಲಿಸುವ ದೇವರಲ್ಲಿ ಜ್ಞಾನದ ಕೊರತೆಯಿದೆಯೋ?


ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ನಾನು ಅವರಿಗೆ ಬೋಧಿಸಿದೆನು. ಪುನಃ ಬೋಧಿಸಿದೆನು. ಆದರೂ ಉಪದೇಶ ಹೊಂದುವುದಕ್ಕೆ ಅವರು ಕಿವಿಗೊಡಲಿಲ್ಲ ಅಥವಾ ಪ್ರತಿಕ್ರಿಯಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು