Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 35:12 - ಕನ್ನಡ ಸಮಕಾಲಿಕ ಅನುವಾದ

12 ಜನರು ದುಷ್ಟರ ಸೊಕ್ಕಿನಿಂದ ನೊಂದು ಗೋಳಾಡುತ್ತಾರೆ; ಆದರೂ ದೇವರು ಅವರಿಗೆ ಉತ್ತರವನ್ನು ದಯಪಾಲಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಂಥಾ ಸಂದರ್ಭದಲ್ಲಿ ಅವರು ದುಷ್ಟರ ಸೊಕ್ಕಿನಿಂದ ನೊಂದು ಗೋಳಾಡುವರು, ಆದರೂ ಆತನು ಉತ್ತರವನ್ನು ದಯಪಾಲಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಎಂತಲೆ ದುರುಳರ ಸೊಕ್ಕನ್ನು ಮುಂದಿಟ್ಟು ಗೋಳಿಟ್ಟರೂ ದೇವರು ಅವರಿಗೆ ಉತ್ತರ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಂಥಾ ಸಂದರ್ಭದಲ್ಲಿ ಅವರು ದುಷ್ಟರ ಸೊಕ್ಕಿನಿಂದ ನೊಂದು ಗೋಳಾಡುವರು, ಆದರೂ ಆತನು ಉತ್ತರವನ್ನು ದಯಪಾಲಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಅಲ್ಲದೆ ಆ ಕೆಟ್ಟವರು ದೇವರನ್ನು ಸಹಾಯಕ್ಕಾಗಿ ಕೇಳಿಕೊಂಡರೂ ಆತನು ಅವರಿಗೆ ಉತ್ತರಿಸುವುದಿಲ್ಲ. ಯಾಕೆಂದರೆ ಅವರು ದುಷ್ಟರೂ ದುರಾಭಿಮಾನಿಗಳೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 35:12
7 ತಿಳಿವುಗಳ ಹೋಲಿಕೆ  

ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲ; ಆದರೆ ಯಾರು ದೇವರಿಗೆ ಭಯಪಡುವವರಾಗಿದ್ದು ಅವರ ಚಿತ್ತದಂತೆ ನಡೆಯುತ್ತಾರೋ, ಅಂಥವರಿಗೆ ಕಿವಿಗೊಡುತ್ತಾರೆಂದು ನಾವು ಬಲ್ಲೆವು.


“ಆಗ ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರ ಕೊಡೆನು. ಅವರು ನನ್ನನ್ನು ಆತುರದಿಂದ ಹುಡುಕುವರು, ಆದರೆ ಅವರು ನನ್ನನ್ನು ಕಂಡುಕೊಳ್ಳುವುದಿಲ್ಲ.


ಅವರು ಸಹಾಯಕ್ಕಾಗಿ ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇರಲಿಲ್ಲ ಯೆಹೋವ ದೇವರಿಗೂ ಮೊರೆಯಿಟ್ಟರು, ಆದರೆ ಅವರೂ ಉತ್ತರ ಕೊಡಲಿಲ್ಲ.


ಭಕ್ತಿಹೀನನಿಗೆ ಯಾತನೆ ಬಂದರೆ, ದೇವರು ಅವನ ಮೊರೆಯನ್ನು ಕೇಳುವರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು