Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 35:7 - ಕನ್ನಡ ಸಮಕಾಲಿಕ ಅನುವಾದ

7 ನೀನು ನೀತಿವಂತನಾಗಿದ್ದರೆ, ದೇವರಿಗೇನು ಕೊಟ್ಟಂತಾಯಿತು? ಅಥವಾ ದೇವರು ನಿನ್ನ ಕೈಯಿಂದ ಏನು ತೆಗೆದುಕೊಂಡಂತಾಯಿತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನು ನೀತಿವಂತನಾಗಿದ್ದರೆ ಆತನಿಗೇನು ಕೊಟ್ಟಂತಾಯಿತು? ನಿನ್ನ ಕೈಯಿಂದ ಆತನಿಗೆ ಲಾಭವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀನು ಸಜ್ಜನನಾಗಿದ್ದರೆ ಅವರಿಗೇನು ಕೊಟ್ಟಂತಾಯಿತು? ನಿನ್ನ ಕೈಯಿಂದ ಅವರಿಗೆ ದೊರಕಿದ ಲಾಭ ಯಾವುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀನು ನೀತಿವಂತನಾಗಿದ್ದರೆ ಆತನಿಗೇನು ಕೊಟ್ಟಂತಾಯಿತು? ನಿನ್ನ ಕೈಯಿಂದ ಆತನಿಗೆ ಲಾಭವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೋಬನೇ, ನೀನು ಒಳ್ಳೆಯವನಾಗಿದ್ದರೆ, ಅದರಿಂದ ದೇವರಿಗೇನೂ ಸಹಾಯವಾಗುವುದಿಲ್ಲ. ದೇವರಿಗೆ ನಿನ್ನಿಂದೇನೂ ಲಾಭವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 35:7
7 ತಿಳಿವುಗಳ ಹೋಲಿಕೆ  

“ದೇವರಿಗೆ ಮೊದಲು ಕೊಟ್ಟು, ಅವರಿಂದ ಪ್ರತಿಫಲವನ್ನು ಪಡೆಯುವವರು ಯಾರು?”


ಅದೇ ರೀತಿಯಾಗಿ, ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ, ‘ನಾವು ಅಯೋಗ್ಯರಾದ ಆಳುಗಳಷ್ಟೇ, ನಾವು ಮಾಡಬೇಕಾದ ಕರ್ತವ್ಯವನ್ನೇ ಮಾಡಿದ್ದೇವೆ ಎಂದು ನೀವು ಹೇಳಿರಿ,’ ” ಎಂದು ಹೇಳಿದರು.


ನೀನು ಜ್ಞಾನಿಯಾದರೆ, ನಿನ್ನ ಜ್ಞಾನವು ನಿನಗೆ ಪ್ರತಿಫಲ ಕೊಡುವುದು; ನೀನು ನಿಂದಿಸುವವನಾದರೆ, ನೀನೇ ಅದರ ಫಲವನ್ನು ಅನುಭವಿಸುವಿ.


ನಾನು ಯೆಹೋವ ದೇವರಿಗೆ, “ನೀವೇ ನನ್ನ ಕರ್ತ; ನಿಮ್ಮನ್ನು ಬಿಟ್ಟು ನನಗಿಲ್ಲ ಒಳಿತು,” ಎಂದು ಹೇಳಿದೆನು.


“ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವುದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಏಕೆಂದರೆ ಸಮಸ್ತವೂ ನಿಮ್ಮಿಂದಲೇ.


ನಿನ್ನ ದುಷ್ಟತನವು ನಿನ್ನಂಥವರನ್ನೇ ಬಾಧಿಸುವುದು; ನಿನ್ನ ನೀತಿಯಿಂದ ಬೇರೆ ಜನರಿಗೆ ಮಾತ್ರ ಲಾಭವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು