Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 35:8 - ಕನ್ನಡ ಸಮಕಾಲಿಕ ಅನುವಾದ

8 ನಿನ್ನ ದುಷ್ಟತನವು ನಿನ್ನಂಥವರನ್ನೇ ಬಾಧಿಸುವುದು; ನಿನ್ನ ನೀತಿಯಿಂದ ಬೇರೆ ಜನರಿಗೆ ಮಾತ್ರ ಲಾಭವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿನ್ನ ಕೆಟ್ಟತನದಿಂದ ನಿನ್ನಂಥ ಮನುಷ್ಯನಿಗೇ ನಷ್ಟವಾದೀತು, ನಿನ್ನ ನೀತಿಯಿಂದ ನರಜನ್ಮದವನಿಗೇನು ಲಾಭ ಸಿಕ್ಕಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿನ್ನ ನೀಚತನದಿಂದ ನಿನ್ನಂಥವನಿಗೇ ನಷ್ಟ ನಿನ್ನ ಸಜ್ಜನಿಕೆಯಿಂದ ನರಜನ್ಮದವನಿಗೇ ಲಾಭ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿನ್ನ ಕೆಟ್ಟತನದಿಂದ ನಿನ್ನಂಥವನಿಗೇ [ನಷ್ಟವಾದೀತು], ನಿನ್ನ ನೀತಿಯಿಂದ ನರಜನ್ಮದವನಿಗೇ [ಲಾಭ ಸಿಕ್ಕೀತು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೋಬನೇ, ನಿನ್ನ ದುಷ್ಟತನದಿಂದ ನಿನ್ನಂಥವನಿಗೇ ಕೇಡಾಗುವುದು; ನಿನ್ನ ಒಳ್ಳೆಯ ಕಾರ್ಯಗಳಿಂದ ನಿನ್ನಂಥವನಿಗೇ ಒಳ್ಳೆಯದಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 35:8
15 ತಿಳಿವುಗಳ ಹೋಲಿಕೆ  

ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಕೆ ಪಡೆದು ಭಕ್ತಿಯಲ್ಲಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧಮಾಡಿದನು. ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಗೆ ಅನುಸಾರವಾಗಿ ನಂಬಿಕೆಯಿಂದ ಬರುವ ನೀತಿಗೆ ಬಾಧ್ಯನಾದನು.


‘ಪೌಲನೇ, ಭಯಪಡಬೇಡ. ನೀನು ಕೈಸರನ ಮುಂದೆ ನಿಲ್ಲಬೇಕು. ಇಗೋ, ದೇವರು ನಿನ್ನೊಂದಿಗೆ ಪ್ರಯಾಣ ಮಾಡುತ್ತಿರುವವರ ಪ್ರಾಣಗಳನ್ನು ನಿನಗೆ ಉಳಿಸಿಕೊಟ್ಟಿದ್ದಾರೆ,’ ಎಂದನು.


ಅವನು ಅವರಿಗೆ, “ನನ್ನನ್ನು ಎತ್ತಿ ಸಮುದ್ರದಲ್ಲಿ ಹಾಕಿರಿ, ಆಗ ಸಮುದ್ರವು ಶಾಂತವಾಗುವುದು. ಏಕೆಂದರೆ ನನ್ನ ನಿಮಿತ್ತ ಈ ದೊಡ್ಡ ಬಿರುಗಾಳಿ, ನಿಮ್ಮ ಮೇಲೆ ಬಂತೆಂದು ಬಲ್ಲೆನು,” ಎಂದನು.


“ಗೋಡೆಯನ್ನು ಕಟ್ಟಿ ನಾಡನ್ನು ನಾನು ಹಾಳುಮಾಡದಂತೆ ನಾಡಿನ ಪರವಾಗಿ ಪೌಳಿಗೋಡೆಯ ಬಿರುಕಿನಲ್ಲಿ ನಿಲ್ಲುವ ಒಬ್ಬ ಮನುಷ್ಯನನ್ನು ಅವರೊಳಗೆ ನಾನು ಹುಡುಕಿದೆನು. ಆದರೆ ಯಾರೂ ಸಿಕ್ಕಲಿಲ್ಲ.


ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಬಹು ಶುಭವನ್ನು ಹಾಳುಮಾಡುವನು.


ಆಗ ಫೀನೆಹಾಸನು ಎದ್ದು ಬಂದು ದಂಡಿಸಿದ್ದರಿಂದ ವ್ಯಾಧಿ ನಿಂತುಹೋಯಿತು.


ಆದ್ದರಿಂದ ದೇವರು ಅವರಿಗೆ ಪೂರ್ಣದಂಡನೆ ಕೊಡುವುದಾಗಿ ಹೇಳಿದರು. ಆದರೆ ಅವರು ಆಯ್ದುಕೊಂಡ ಮೋಶೆಯು, ದೇವರ ಕಠಿಣ ತೀರ್ಮಾನವನ್ನು ಶಾಂತಪಡಿಸಲು ಆಪತ್ತಿನಲ್ಲಿ ದೇವರ ಮುಂದೆ ಮಧ್ಯಸ್ಥನಾಗಿ ನಿಂತುಕೊಂಡನು.


ಆದುದರಿಂದ ಈಗ ನೀವು ಏಳು ಹೋರಿಗಳನ್ನು, ಏಳು ಟಗರುಗಳನ್ನು ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಬನ್ನಿರಿ. ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ; ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ದಂಡಿಸದಂತೆ, ಅವನ ಪ್ರಾರ್ಥನೆಯನ್ನು ಸ್ವೀಕರಿಸುವೆನು. ನೀವು ನನ್ನ ದಾಸನಾದ ಯೋಬನಂತೆ ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ,” ಎಂದು ಹೇಳಿದರು.


ಜೆರಹನ ಮಗ ಆಕಾನನು ಅರ್ಪಿತವಾದ ವಸ್ತುಗಳನ್ನು ಕದ್ದು ಅಪರಾಧವೆಸಗಿದಾಗ ಯೆಹೋವ ದೇವರ ಕೋಪವು ಸಮಸ್ತ ಇಸ್ರಾಯೇಲ್ ಜನರ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಇತರರೂ ಸಾಯಬೇಕಾಯಿತು,’ ” ಎಂದು ಹೇಳಿದರು.


ದೇವರು ಆ ಬಯಲುಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ, ಲೋಟನು ವಾಸವಾಗಿದ್ದ ಪಟ್ಟಣಗಳನ್ನು ನಾಶಮಾಡಿದರು. ಆದರೆ ಅಬ್ರಹಾಮನನ್ನು ಜ್ಞಾಪಕಮಾಡಿಕೊಂಡು, ಲೋಟನನ್ನು ಹೊರಗೆ ಕಳುಹಿಸಿ ಪಾರು ಮಾಡಿದರು.


“ನಾನು ನಿನ್ನನ್ನು ದೊಡ್ಡ ಜನಾಂಗದವನನ್ನಾಗಿ ಮಾಡಿ, ನಿನ್ನನ್ನು ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಸಿದ್ಧ ಮಾಡುವೆನು. ನೀನು ಆಶೀರ್ವಾದವಾಗಿ ಇರುವಿ.


ನೀನು ನೀತಿವಂತನಾಗಿದ್ದರೆ, ದೇವರಿಗೇನು ಕೊಟ್ಟಂತಾಯಿತು? ಅಥವಾ ದೇವರು ನಿನ್ನ ಕೈಯಿಂದ ಏನು ತೆಗೆದುಕೊಂಡಂತಾಯಿತು?


“ಅಪಾರ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾರೆ; ಬಲಿಷ್ಠರ ಭುಜಬಲದಿಂದ ಪೀಡಿತರು ಕಿರಿಚಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು