Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:13 - ಕನ್ನಡ ಸಮಕಾಲಿಕ ಅನುವಾದ

13 “ಹೃದಯದಲ್ಲಿ ಭಕ್ತಿಹೀನರಾಗಿರುವವರು ಕೋಪವನ್ನು ಕೂಡಿಸುವರು; ದೇವರು ಅವರನ್ನು ಬಂಧಿಸಿದರೂ, ಅವರು ದೇವರಿಗೆ ಮೊರೆ ಇಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವರನ್ನು ಹೃದಯದಲ್ಲಿ ನಂಬದಿರುವವರು ಸಿಟ್ಟುಗೊಂಡಿರುವರು, ಆತನು ಅವರನ್ನು ಬಂಧಿಸುವಾಗಲೂ ಆತನಿಗೆ ಮೊರೆಯಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕಪಟ ಹೃದಯಿಗಳು ಕೋಪಿಷ್ಠರಾಗುವರು ತಮ್ಮನ್ನು ಬಂಧಿಸುವಾಗಲು ಮೊರೆಯಿಡಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಭ್ರಷ್ಟಹೃದಯವುಳ್ಳವರಾದರೋ ಸಿಟ್ಟುಗೊಂಡಿರುವರು, ಆತನು ಅವರನ್ನು ಬಂಧಿಸುವಾಗಲೂ [ಆತನಿಗೆ] ಮೊರೆಯಿಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ದೇವರ ಬಗ್ಗೆ ಲಕ್ಷಿಸದವರು ಯಾವಾಗಲೂ ಕೋಪದಿಂದಿರುವರು. ದೇವರು ಅವರನ್ನು ದಂಡಿಸಿದರೂ ಅವರು ದೇವರಿಗೆ ಮೊರೆಯಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:13
15 ತಿಳಿವುಗಳ ಹೋಲಿಕೆ  

ನೀನು ನಿನ್ನ ಕಠಿಣವಾದ ಮತ್ತು ಪಶ್ಚಾತ್ತಾಪ ಪಡದ ಹೃದಯದಿಂದ, ನಿನಗೋಸ್ಕರ ದೇವರ ನೀತಿಯುಳ್ಳ ತೀರ್ಪು ಪ್ರಕಟವಾಗುವ ಕೋಪದ ದಿನಕ್ಕಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಿದ್ದಿ.


ಒಂದು ವೇಳೆ ಜನರು ಸಂಕಟದ ಸಂಕೋಲೆಗಳಿಂದ ಬಂಧಿತರಾಗಿ, ಬಾಧೆಯ ಹಗ್ಗಗಳಿಂದ ಹಿಡಿಯಲಾಗಿದ್ದರೆ,


ಕೆಲವರು ಕತ್ತಲಲ್ಲಿ ಮತ್ತು ಮರಣದ ನೆರಳಿನಲ್ಲಿ ಕುಳಿತರು, ಕೆಲವರು ಸಂಕಟದಲ್ಲಿಯೂ, ಕಬ್ಬಿಣದ ಬೇಡಿಗಳಲ್ಲಿ ಬಂಧಿತರಾಗಿ ಸೆರೆಬಿದ್ದವರು ಕೆಲವರು.


ನೀನಾದರೋ ದೇವರ ಭಯಭಕ್ತಿಯನ್ನು ಹಾಳುಮಾಡುತ್ತಿರುವೆ. ದೇವರ ಮೇಲಿನ ಭಕ್ತಿಯನ್ನು ಕಡಿಮೆ ಮಾಡುತ್ತಿರುವೆ.


ಇದಲ್ಲದೆ ಈ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಇನ್ನೂ ಅಧಿಕವಾಗಿ ಯೆಹೋವ ದೇವರಿಗೆ ಅಪನಂಬಿಗಸ್ತನಾದನು.


ಅವರಿಗೆ, “ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ. ಏಕೆಂದರೆ ನಾವು ಯೆಹೋವ ದೇವರಿಗೆ ವಿರೋಧವಾಗಿ ಅಪರಾಧ ಮಾಡಿದ್ದೇವೆ. ನೀವು ನಮ್ಮ ಪಾಪಗಳನ್ನೂ, ನಮ್ಮ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾಧವು ದೊಡ್ಡದಾಗಿದೆ. ಇಸ್ರಾಯೇಲಿನ ಮೇಲೆ ಯೆಹೋವ ದೇವರ ಉಗ್ರಕೋಪವು ಉಂಟಾಯಿತು,” ಎಂದರು.


“ನಿಮ್ಮ ಪಿತೃಗಳ ಬದಲಾಗಿ ಬಂದಿರುವ ನೀವು, ಪಾಪಿಗಳಾಗಿ ಇಸ್ರಾಯೇಲ್ ಕುರಿತು ಯೆಹೋವ ದೇವರ ಕೋಪವನ್ನೂ ಮತ್ತಷ್ಟು ಹೆಚ್ಚಿಸುತ್ತಿದ್ದೀರಲ್ಲಾ.


ನಿನ್ನ ಹೃದಯವು ನಿನ್ನನ್ನು ಸೆಳೆದಿರುವುದು ಏಕೆ? ಏಕೆ ನಿನ್ನ ಕಣ್ಣು ಕಿಡಿಕಾರುತ್ತಿದೆ?


ಅವರು ವಿಧೇಯರಾಗದಿದ್ದರೆ, ಸಂಕಟದ ಸಾಗರದಲ್ಲಿ ಸಾಗಿಹೋಗುವರು; ತಿಳುವಳಿಕೆಯಿಲ್ಲದ ಬಾಳನ್ನು ಬಾಳುವರು.


ಅವರು ತಮ್ಮ ಯೌವನದಲ್ಲಿ, ಪುರುಷಗಾಮಿಗಳ ಮಂದಿರದಲ್ಲಿ ಗತಿಸಿಹೋಗುವರು.


ಮೋಶೆಯ ನಿಯಮದಲ್ಲಿ ಬರೆದಿರುವ ಪ್ರಕಾರ, ಈ ಎಲ್ಲಾ ವಿನಾಶ ನಮ್ಮ ಮೇಲೆ ಬಂದಿದೆ. ಆದರೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿಮ್ಮ ಸತ್ಯವನ್ನು ತಿಳಿದುಕೊಳ್ಳುವಂತೆ, ನಮ್ಮ ದೇವರಾದ ಯೆಹೋವ ದೇವರ ದಯೆಯನ್ನು ಬೇಡಿಕೊಳ್ಳಲಿಲ್ಲ.


ಅವುಗಳನ್ನು ನಾನು ಇಕ್ಕಟ್ಟಿನ ಕಾಲಕ್ಕಾಗಿ ಇಟ್ಟಿರುವೆನು; ಯುದ್ಧಕದನಗಳ ದಿನಗಳಿಗಾಗಿಯೂ ಕಾದಿಟ್ಟಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು