Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:31 - ಕನ್ನಡ ಸಮಕಾಲಿಕ ಅನುವಾದ

31 ಈ ರೀತಿಯಾಗಿ ದೇವರು ದೇಶಗಳನ್ನು ಆಳುತ್ತಾರೆ ಸಮೃದ್ಧಿಯಾಗಿ ದೇವರು ಆಹಾರ ಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಮೋಡಗಳ ಮುಖಾಂತರವಾಗಿಯೇ ಜನಾಂಗಗಳಿಗೆ ನ್ಯಾಯವನ್ನು ವಿಧಿಸಿ, ಆಹಾರವನ್ನು ಧಾರಾಳವಾಗಿ ದಯಪಾಲಿಸುವನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಹೀಗೆ ಜನಾಂಗಗಳನ್ನು ಪೋಷಣೆ ಮಾಡುತ್ತಾನೆ ಆಹಾರವನ್ನು ಧಾರಾಳವಾಗಿ ದಯಪಾಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಮೋಡಗಳ ಮುಖಾಂತರವಾಗಿಯೇ ಜನಾಂಗಗಳಿಗೆ ನ್ಯಾಯವನ್ನು ವಿಧಿಸಿ ಆಹಾರವನ್ನು ಧಾರಾಳವಾಗಿ ದಯಪಾಲಿಸುವನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಜನಾಂಗಗಳನ್ನು ಹತೋಟಿಯಲ್ಲಿಡುವುದಕ್ಕಾಗಿಯೂ ಬೇಕಾದಷ್ಟು ಆಹಾರವನ್ನು ಕೊಡುವುದಕ್ಕಾಗಿಯೂ ದೇವರು ಅವುಗಳನ್ನು ಉಪಯೋಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:31
19 ತಿಳಿವುಗಳ ಹೋಲಿಕೆ  

ಆದರೂ ದೇವರು ತಮ್ಮ ಬಗ್ಗೆ ಸಾಕ್ಷಿಕೊಡದೆ ಇರಲಿಲ್ಲ. ಆಕಾಶದಿಂದ ಮಳೆಯನ್ನೂ ಸಕಾಲದಲ್ಲಿ ಬೆಳೆಯನ್ನೂ ನಿಮಗೆ ದಯಪಾಲಿಸಿ ಆಹಾರಕೊಟ್ಟು ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೆಯದನ್ನು ಮಾಡುತ್ತಾ ಬಂದವರು ದೇವರೇ.”


ಸಕಲ ಜೀವಿಗಳಿಗೂ ಆಹಾರವನ್ನು ಕೊಡುತ್ತಾರೆ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ಜನರ ಶಿಕ್ಷಣಕ್ಕಾಗಿಯೂ, ಭೂಮಿಯ ಹಿತಕ್ಕಾಗಿಯೂ ದೇವರು ತಮ್ಮ ಪ್ರೀತಿಯನ್ನು ತೋರಿಸಲು, ಮೇಘಗಳನ್ನು ಬರಮಾಡುತ್ತಾರೆ.


ಸಮುಯೇಲನು ಯೆಹೋವ ದೇವರಿಗೆ ಮೊರೆ ಇಟ್ಟಿದ್ದರಿಂದ, ಆ ದಿವಸದಲ್ಲೇ ಯೆಹೋವ ದೇವರು ಗುಡುಗನ್ನೂ, ಮಳೆಯನ್ನೂ ಕಳುಹಿಸಿದರು. ಆಗ ಜನರೆಲ್ಲರು ಯೆಹೋವ ದೇವರಿಗೂ, ಸಮುಯೇಲನಿಗೂ ಬಹಳವಾಗಿ ಭಯಪಟ್ಟರು.


ಸಮುಯೇಲನು ದಹನಬಲಿಯನ್ನು ಅರ್ಪಿಸುವಾಗ, ಫಿಲಿಷ್ಟಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಲು ಸಮೀಪಕ್ಕೆ ಬಂದರು. ಆಗ ಯೆಹೋವ ದೇವರು ಫಿಲಿಷ್ಟಿಯರ ಮೇಲೆ ದೊಡ್ಡ ಶಬ್ದದಿಂದ ಗುಡುಗಿ ಅವರನ್ನು ಕಳವಳಗೊಳಿಸಿ, ಇಸ್ರಾಯೇಲರಿಗೆ ಸೋತು ಓಡಿಹೋಗುವಂತೆ ಮಾಡಿದರು.


ಯೆಹೋವ ದೇವರ ಸಂಗಡ ವಿವಾದಿಸುವವರು ಚದರಿಹೋಗುವರು. ಅವರು ಆಕಾಶದಲ್ಲಿಂದ ಅವರ ಮೇಲೆ ಗುಡುಗುವರು, ಯೆಹೋವ ದೇವರು ಲೋಕಾಂತ್ಯದವರೆಗೂ ನ್ಯಾಯತೀರಿಸುವರು. “ತಮ್ಮ ಅರಸನಿಗೆ ಬಲ ಕೊಡುವರು. ತಮ್ಮ ಅಭಿಷಿಕ್ತನ ಕೊಂಬನ್ನು ಉನ್ನತ ಮಾಡುವರು.”


ಅವರು ಬೇತ್ ಹೋರೋನಿನಿಂದ ಇಳಿದು ಅಜೇಕದವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ, ಅವರ ಮೇಲೆ ಯೆಹೋವ ದೇವರು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಇಸ್ರಾಯೇಲರ ಖಡ್ಗದ ದಾಳಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.


ದೇವರು ಅಗ್ನಿಸರ್ಪಗಳೂ, ಚೇಳುಗಳೂ ತುಂಬಿದ ಮತ್ತು ನೀರಿಲ್ಲದ ಆ ಭಯಂಕರವಾದ ವಿಶಾಲ ಮರುಭೂಮಿಯಲ್ಲಿ ನಿಮ್ಮನ್ನು ನಡೆಸಿ, ಗಟ್ಟಿಯಾದ ಬಂಡೆಯೊಳಗಿಂದ ನಿಮಗೆ ನೀರು ಬರಮಾಡಿದರು.


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ತಗ್ಗಿಸಿ, ನೀವು ದೇವರ ಆಜ್ಞೆಗಳನ್ನು ಕಾಪಾಡುವಿರೋ ಇಲ್ಲವೋ ಎಂದು ನಿಮ್ಮ ಹೃದಯವನ್ನು ಪರೀಕ್ಷಿಸುವುದಕ್ಕೆ ನಿಮ್ಮನ್ನು ನಡೆಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಿರಿ.


ಆಗ ಯೆಹೋವ ದೇವರು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ, ಬೆಂಕಿಯನ್ನೂ ಆಕಾಶದಿಂದ ಸುರಿಸಿದರು.


ನಾನು ಆಕಾಶದ ಕೆಳಗಿರುವ ಜೀವಶ್ವಾಸವುಳ್ಳ ಸಕಲ ಪ್ರಾಣಿಗಳನ್ನು ನಾಶಮಾಡುವುದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ. ಆಗ ಭೂಮಿಯಲ್ಲಿರುವುದೆಲ್ಲವೂ ನಾಶವಾಗುವುದು.


ಇಗೋ, ದೇವರು ಮಿಂಚನ್ನು ತಮ್ಮ ಸುತ್ತಲು ಚದರಿಸುತ್ತಾರೆ. ಸಮುದ್ರದ ಆಳವನ್ನು ಸಹ ಆವರಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು