Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:17 - ಕನ್ನಡ ಸಮಕಾಲಿಕ ಅನುವಾದ

17 ಭೂಮಿಯು ದಕ್ಷಿಣ ಗಾಳಿಯಿಂದ ಸ್ತಬ್ಧವಾಗಿರುವಾಗ, ನಿನ್ನ ವಸ್ತ್ರ ಹೇಗೆ ಬಿಸಿಯಾಗಿರುತ್ತವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಭೂಮಿಯು ದಕ್ಷಿಣ ಗಾಳಿಯ ದೆಸೆಯಿಂದ ಸ್ತಬ್ಧವಾಗಿರುವ ಸಮಯದಲ್ಲಿ, ಉಡುಪಿನ ಬಿಸಿಯನ್ನು ಅನುಭವಿಸುವ ಅರಿವು ನಿನಗಿರುತ್ತದೆಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ತೆಂಕಣಗಾಳಿಯಿಂದ ಪೊಡವಿ ತಪಿಸಿ ಸ್ತಬ್ದವಿರುವಾಗಲೆ ನಿನ್ನ ಬಟ್ಟೆಬರೆ ಬಿಸಿಯಿರುವಾಗಲೆ ಆ ಅರಿವು ನಿನಗಿರುತ್ತದೆಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಭೂವಿುಯು ತೆಂಕಣಗಾಳಿಯ ದೆಸೆಯಿಂದ ಸ್ತಬ್ಧವಾಗಿರುವ ಸಮಯದಲ್ಲಿ ಉಡುಪಿನ ಬಿಸಿಯನ್ನು ಅನುಭವಿಸಿದವನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೋಬನೇ, ನಿನಗೆ ಇವುಗಳ ಬಗ್ಗೆ ಗೊತ್ತಿಲ್ಲ. ದಕ್ಷಿಣ ದಿಕ್ಕಿನ ಬಿಸಿಗಾಳಿಯಿಂದ ಭೂಮಿಯು ಸ್ತಬ್ಧವಾದಾಗ, ನೀನು ಬೆವತು ಬಟ್ಟೆಗಳು ಒದ್ದೆಯಾಗುವುದಷ್ಟೇ ನಿನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:17
6 ತಿಳಿವುಗಳ ಹೋಲಿಕೆ  

ದಕ್ಷಿಣ ದಿಕ್ಕಿನ ಗಾಳಿ ಬೀಸುವುದನ್ನು ನೀವು ನೋಡಿ, ‘ಸೆಕೆಯಾಗುತ್ತದೆ,’ ಎನ್ನುತ್ತೀರಿ, ಅದು ಹಾಗೆ ಆಗುತ್ತದೆ.


ದೇವರು ತಮ್ಮ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾರೆ; ದೇವರು ಗಾಳಿಯನ್ನು ಬೀಸುವಂತೆ ಮಾಡುತ್ತಾರೆ; ನೀರು ಹರಿಯುತ್ತದೆ.


“ನೀನು ಕೃತ್ತಿಕೆಯ ಸರಪಣಿಯನ್ನು ಬಂಧಿಸಬಲ್ಲೆಯಾ? ಮೃಗಶಿರದ ಸಂಕೋಲೆಯನ್ನು ಬಿಚ್ಚಬಲ್ಲೆಯಾ?


ಉಷ್ಣ ಸಮಯದಲ್ಲಿ ಅವು ಹರಿಯುವದಿಲ್ಲ; ಸೆಕೆಯಾದಾಗ ಬತ್ತಿ ಅದರ ಸ್ಥಳದಿಂದ ಮಾಯವಾಗುತ್ತವೆ.


ಮೋಡಗಳ ತೂಗಾಟವನ್ನು ಬಲ್ಲೆಯಾ? ಜ್ಞಾನಪೂರ್ಣರಾದ ದೇವರ ಅದ್ಭುತಗಳನ್ನೂ ತಿಳಿದುಕೊಂಡಿರುವೆಯಾ?


ಎರಕ ಹೊಯ್ದ ಬಲವಾಗಿರುವ ಕನ್ನಡಿಯ ಹಾಗೆ, ನೀನು ದೇವರ ಸಂಗಡ ಸೇರಿಕೊಂಡು ಆಕಾಶಮಂಡಲವನ್ನು ವಿಸ್ತರಿಸಬಲ್ಲೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು