Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:20 - ಕನ್ನಡ ಸಮಕಾಲಿಕ ಅನುವಾದ

20 ನಾನು ಮಾತನಾಡಬೇಕೆಂದು ದೇವರಿಗೆ ಹೇಳಿಕಳುಹಿಸಬೇಕೆ? ಹಾಗೆ ಮನುಷ್ಯನು ಮಾತನಾಡಿದರೆ, ನಿಜವಾಗಿಯೂ ಬದುಕಿರಲು ಸಾಧ್ಯವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ಮಾತನಾಡಬೇಕೆಂದು ಆತನಿಗೆ ಹೇಳಿ ಕಳುಹಿಸಲು ಸಾಧ್ಯವೇ? ಹಾಗೆ ಮಾಡುವವನು ತನ್ನನ್ನೇ ನಿರ್ಮೂಲ ಮಾಡಿಕೊಂಡಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ಮಾತಾಡಬೇಕೆಂದು ದೇವರಿಗೆ ಹೇಳಿಕಳಿಸಲಾದೀತೆ? ಹಾಗೆ ಮಾಡುವವನು ತನ್ನನ್ನೆ ನಿರ್ಮೂಲ ಮಾಡಿಕೊಂಡಂತೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾನು ಮಾತಾಡಬೇಕೆಂದು ಆತನಿಗೆ ಹೇಳಿ ಕಳುಹಿಸೇನೋ? ತಾನು ನಾಶವಾಗಬೇಕೆಂದು ಯಾವನಾದರೂ ಅರಿಕೆ ಮಾಡುವದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ದೇವರಿಗೆ, ‘ನಿನ್ನೊಂದಿಗೆ ಮಾತಾಡಬೇಕಾಗಿದೆ’ ಎಂದು ಹೇಳಲಾರೆ. ಯಾಕೆಂದರೆ ಅದು ನಾಶನವನ್ನೇ ಕೇಳಿಕೊಂಡಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:20
7 ತಿಳಿವುಗಳ ಹೋಲಿಕೆ  

ನನ್ನ ನಾಲಿಗೆಯಲ್ಲಿ ಒಂದು ಮಾತು ಆರಂಭಿಸುವುದಕ್ಕಿಂತ ಮುಂಚೆಯೇ ಯೆಹೋವ ದೇವರೇ, ಅದು ನಿಮಗೆ ಪೂರ್ಣವಾಗಿ ತಿಳಿದಿರುತ್ತದೆ.


ಏಕೆಂದರೆ ನನ್ನ ಕಷ್ಟ ಈಗಲೇ ಸಮುದ್ರದ ಮರಳಿಗಿಂತ ಭಾರವಾಗಿದೆ; ನನ್ನ ಮಾತುಗಳು ದುಡುಕಿದ್ದರಲ್ಲಿ ಆಶ್ಚರ್ಯವಿಲ್ಲ.


“ನಾವು ದೇವರಿಗೆ ಏನು ಹೇಳಬೇಕೆಂದು ನಮಗೆ ತಿಳಿಸು; ನಮ್ಮ ಅಂಧಕಾರದಿಂದ ನಾವು ಏನೂ ವಾದಿಸಲು ಸಾಧ್ಯವಿಲ್ಲ.


ಗಾಳಿ ಬೀಸಿ ಆಕಾಶ ಶುಭ್ರವಾದಾಗ, ಪ್ರಜ್ವಲಿಸುವ ಸೂರ್ಯನನ್ನು ದೃಷ್ಟಿಸಲಾಗದು ಹೌದು, ಯಾರೂ ದಿಟ್ಟಿಸಿ ನೋಡಲಾರರು.


ಆದರೆ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ. ಅವರ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು