Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:12 - ಕನ್ನಡ ಸಮಕಾಲಿಕ ಅನುವಾದ

12 “ಯೋಬನೇ, ನಿನ್ನ ಜೀವಮಾನದಲ್ಲಿ ಎಂದಾದರೂ, ‘ಅರುಣೋದಯವಾಗಲಿ,’ ಎಂದು ಆಜ್ಞಾಪಿಸಿರುವೆಯಾ? ಮುಂಜಾನೆಯ ಬೆಳಗಿಗೆ ಅದರ ಸ್ಥಳವನ್ನು ತಿಳಿಯಪಡಿಸಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನ ಜೀವಮಾನದಲ್ಲಿ ಎಂದಾದರೂ ‘ಅರುಣೋದಯವಾಗಲಿ’ ಎಂದು ಆಜ್ಞಾಪಿಸಿರುವೆಯೋ? ಮುಂಜಾನೆಯ ಬೆಳಗಿಗೆ ಇರತಕ್ಕ ಸ್ಥಳವನ್ನು ಗೊತ್ತುಮಾಡಿದೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಿನ್ನ ಜೀವಮಾನದಲಿ ಎಂದಾದರೂ ‘ಅರುಣೋದಯವಾಗಲಿ’ ಎಂದು ಆಜ್ಞಾಪಿಸಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನ್ನ ಜೀವಮಾನದಲ್ಲಿ ಬೆಳಗಿಗೆ ಇರತಕ್ಕ ಸ್ಥಳವನ್ನು ಗೊತ್ತುಮಾಡಿದಿಯಾ? ಭೂವಿುಯ ಅಂಚುಗಳನ್ನು ಹಿಡಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಯೋಬನೇ, ನಿನ್ನ ಜೀವಮಾನದಲ್ಲಿ ಎಂದಾದರೂ ಮುಂಜಾನೆಗಾಗಲಿ ಹಗಲಿಗಾಗಲಿ ಆರಂಭವಾಗೆಂದು ಆಜ್ಞಾಪಿಸಿರುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:12
14 ತಿಳಿವುಗಳ ಹೋಲಿಕೆ  

ಹಗಲು ನಿಮ್ಮದು, ರಾತ್ರಿಯು ಸಹ ನಿಮ್ಮದು. ನೀವು ಸೂರ್ಯಚಂದ್ರನನ್ನೂ ಸ್ಥಾಪಿಸಿದ್ದೀರಿ.


ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯದವರೂ ಆಗಿದ್ದೇವೆ; ಏಕೆಂದರೆ ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿನಂತಿವೆ.


ದೇವರು ಬೆಳಕಿಗೆ ಹಗಲು ಎಂದೂ ಕತ್ತಲೆಗೆ ರಾತ್ರಿ ಎಂದೂ ಕರೆದರು. ಆಗ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.


ಮಾತ್ರವಲ್ಲದೆ ನಮಗೆ ಬಹು ನಿಶ್ಚಯವಾದ ಪ್ರವಾದನೆಯ ವಾಕ್ಯಗಳಿವೆ. ಉದಯ ನಕ್ಷತ್ರವಾಗಿರುವ ಕ್ರಿಸ್ತ ಯೇಸು ನಿಮ್ಮ ಹೃದಯಗಳಲ್ಲಿ ಉದಯಿಸುವಾಗ ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪದಂತೆ ಎಣಿಸಿ, ನೀವು ಆ ಪ್ರವಾದನಾ ವಾಕ್ಯಗಳಿಗೆ ಲಕ್ಷ್ಯಕೊಡುವುದು ಒಳ್ಳೆಯದು.


ನಮ್ಮ ದೇವರ ಮಮತೆಯ ಕರುಣೆಯಿಂದಲೇ, ಸ್ವರ್ಗದಿಂದ ನಮಗೆ ಅರುಣೋದಯವು ಉಂಟಾಗಿ


ನಿಜವಾಗಿಯೂ ನೀನು ಆಗ ಹುಟ್ಟಿದ್ದರೆ, ಇವೆಲ್ಲಾ ನಿನಗೆ ಗೊತ್ತಾಗುತಿತ್ತು. ಮತ್ತು ಈಗ ನೀನು ಬಹಳ ವರ್ಷಗಳ ವೃದ್ಧನಾಗಿರುತ್ತಿದ್ದೆ.


“ನಾನು ಭೂಮಿಗೆ ಅಸ್ತಿವಾರ ಹಾಕಿದಾಗ, ನೀನು ಎಲ್ಲಿ ಇದ್ದೀ? ನಿನಗೆ ತಿಳುವಳಿಕೆ ಇದ್ದರೆ ನನಗೆ ಹೇಳು.


“ನೀನು ಮೊದಲು ಹುಟ್ಟಿದ ಪುರುಷನೋ? ಬೆಟ್ಟಗಳಿಗೆ ಮುಂಚಿತವಾಗಿ ಹುಟ್ಟಿದವನೋ?


‘ಇಲ್ಲಿಯ ತನಕ ಬರಬಹುದು, ಇದನ್ನು ಮೀರಿ ಬರಕೂಡದು; ಇಲ್ಲಿಗೇ ನಿನ್ನ ತೆರೆಗಳ ಹೆಮ್ಮೆ ನಿಲ್ಲಲಿ,’ ಎಂದು ಆಜ್ಞಾಪಿಸಿದೆನು.


‘ದುಷ್ಟರನ್ನು ಅದರೊಳಗಿಂದ ಒದರಿಬಿಡು,’ ಎಂದು ನೀನು ಭೂಮಿಯ ಅಂಚುಗಳನ್ನು ಹಿಡಿದು ಉದಯಕ್ಕೆ ಎಂದಾದರೂ ಅಪ್ಪಣೆಮಾಡಿದೆಯಾ?


ವೃಷಭ ರಾಶಿಯನ್ನೂ, ಮೃಗಶಿರವನ್ನೂ ಉಂಟು ಮಾಡಿದವನನ್ನೂ ಕಾರ್ಗತ್ತಲನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲೆ ಮಾಡಿ, ಸಮುದ್ರದ ನೀರನ್ನು ಬರಮಾಡಿ, ಅವುಗಳನ್ನು ಭೂಮಿಯ ಮೇಲೆ ಸುರಿಸುವ ಯೆಹೋವ ದೇವರು ಎಂಬ ಹೆಸರುಳ್ಳವರನ್ನೇ ಹುಡುಕಿರಿ.


ಕಳ್ಳರು ಕತ್ತಲಲ್ಲಿ ಕನ್ನ ಕೊರೆದು ಮನೆಗಳೊಳಗೆ ನುಗ್ಗುತ್ತಾರೆ. ಹಗಲಿನಲ್ಲಿ ತಮ್ಮ ಮನೆಬಾಗಿಲುಗಳನ್ನು ಮುಚ್ಚಿಕೊಳ್ಳುತ್ತಾರೆ; ಅವರು ಬೆಳಕಿನಲ್ಲಿ ಏನೂ ಮಾಡಲು ಬಯಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು