Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:16 - ಕನ್ನಡ ಸಮಕಾಲಿಕ ಅನುವಾದ

16 “ನೀನು ಎಂದಾದರೂ ಸಮುದ್ರದ ಬುಗ್ಗೆಗಳಲ್ಲಿ ನಡೆದಿರುವೆಯೋ? ಸಾಗರದ ತಳಹದಿಯಲ್ಲಿ ತಿರುಗಾಡಿರುವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಎಂದಾದರೂ ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ? ಭೂಮಿಯ ಕೆಳಗಣ ಸಾಗರದ ಗುಪ್ತ ಪ್ರದೇಶಗಳಲ್ಲಿ ತಿರುಗಾಡಿದ್ದೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀನೆಂದಾದರು ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ? ಸಾಗರದ ತಳಹದಿಯಲ್ಲಿ ತಿರುಗಾಡಿರುವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಎಂದಾದರೂ ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ? ಭೂವಿುಯ ಕೆಳಗಣ ಸಾಗರದ ಗುಪ್ತಪ್ರದೇಶಗಳಲ್ಲಿ ತಿರುಗಾಡಿದ್ದೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಯೋಬನೇ, ಸಮುದ್ರವು ಆರಂಭವಾಗುವ ಅತ್ಯಂತ ಆಳವಾದ ಭಾಗಗಳಿಗೆ ನೀನು ಎಂದಾದರೂ ಹೋಗಿರುವಿಯಾ? ಸಾಗರದ ತಳದ ಮೇಲೆ ನೀನು ಎಂದಾದರೂ ನಡೆದಿರುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:16
9 ತಿಳಿವುಗಳ ಹೋಲಿಕೆ  

ಆಗಾಧಗಳು ಇಲ್ಲದೆ ಇರುವಾಗ ನಾನು ಹುಟ್ಟಿ ಬಂದೆನು, ನೀರಿನ ಬುಗ್ಗೆಗಳು ಇಲ್ಲದೆ ಇರುವಾಗಲೇ ನಾನಿದ್ದೆನು.


ನೀವು ಸಮುದ್ರದಲ್ಲಿ ಮಾರ್ಗಮಾಡಿದಿರಿ. ಮಹಾಜಲರಾಶಿಗಳನ್ನು ದಾಟಿದಿರಿ. ಆದರೂ ನಿಮ್ಮ ಹೆಜ್ಜೆಯ ಗುರುತು ಕಾಣಲಿಲ್ಲ.


ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ. “ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ. ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ. ಅದರ ಸಮುದ್ರವನ್ನು ಒಣಗಿಸುತ್ತೇನೆ. ಅದರ ಬುಗ್ಗೆಯನ್ನು ಬತ್ತಿಹೋಗುವಂತೆ ಮಾಡುತ್ತೇನೆ.


ನೋಹನ ಜೀವನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾಸಾಗರದ ಸೆಲೆಗಳು ಒಡೆದವು. ಆಕಾಶದ ಪ್ರವಾಹದ ದ್ವಾರಗಳು ತೆರೆದವು.


ಮಾತ್ರವಲ್ಲದೆ ಸಾಗರದ ಸೆಲೆಗಳೂ, ಆಕಾಶದ ದ್ವಾರಗಳೂ ಮುಚ್ಚಿಹೋದವು. ಆಕಾಶದಿಂದ ಬೀಳುವ ಮಳೆ ನಿಂತುಹೋಯಿತು.


ದೇವರೊಬ್ಬರೇ ಆಕಾಶಗಳನ್ನು ಹರಡಿಸುತ್ತಾರೆ; ದೇವರು ಸಮುದ್ರದ ತೆರೆಗಳ ಮೇಲೆ ನಡೆಯುತ್ತಾರೆ.


ಮೇಲೆ ಮೇಘಗಳನ್ನು ಅವರು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಅವರು ಬಲಪಡಿಸಿದಾಗ,


ಸಾಗರಕ್ಕೆ ನೆರೆ ಬಂತೋ ಎಂಬಂತೆ, ಅದು ತಾನು ಬಂದ ಹಾದಿಯನ್ನೇ ಬೆಳ್ಳಗಾಗುವಂತೆ ಮಾಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು