Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:3 - ಕನ್ನಡ ಸಮಕಾಲಿಕ ಅನುವಾದ

3 ಶೂರನ ಹಾಗೆ ನಡುವನ್ನು ಕಟ್ಟಿಕೋ, ನಾನು ನಿನ್ನನ್ನು ಪ್ರಶ್ನೆಮಾಡುವೆನು; ನೀನೇ ನನಗೆ ಉತ್ತರಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಶೂರನಂತೆ ನಡುಕಟ್ಟಿಕೋ; ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಶೂರನಂತೆ ನಡುಕಟ್ಟಿ ನಿಲ್ಲು ನಾನು ಹಾಕುವ ಪ್ರಶ್ನೆಗೆ ಉತ್ತರ ನೀಡು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಶೂರನಂತೆ ನಡುಕಟ್ಟಿಕೋ; ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೋಬನೇ, ನಡುಕಟ್ಟಿಕೊಂಡು ಬಲಿಷ್ಠನಾಗಿರು. ನಾನು ನಿನಗೆ ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:3
13 ತಿಳಿವುಗಳ ಹೋಲಿಕೆ  

“ಈಗ ಶೂರನಂತೆ ನಿನ್ನ ನಡು ಕಟ್ಟಿಕೋ; ನಾನು ನಿನಗೆ ಪ್ರಶ್ನೆಮಾಡುತ್ತೇನೆ; ನೀನು ನನಗೆ ಉತ್ತರಕೊಡು.


ಆದ್ದರಿಂದ, ನೀವು ನಿಮ್ಮ ಮನಸ್ಸನ್ನು ಸಿದ್ಧಮಾಡಿಕೊಂಡು, ಸ್ವಸ್ಥಚಿತ್ತರಾಗಿದ್ದು ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಅಂತ್ಯದವರೆಗೆ ಇಡಿರಿ.


“ಆದ್ದರಿಂದ ಈಗ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು, ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಅವರ ಸಂಗಡ ಮಾತನಾಡು. ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಗೆ ಭಯಪಡಬೇಡ.


ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು ತ್ವರೆಯಾಗಿ ಅದನ್ನು ತಿನ್ನಬೇಕು, ಅದು ಯೆಹೋವ ದೇವರ ಪಸ್ಕವಾಗಿದೆ.


ಯೆಹೋವ ದೇವರ ಕೈ ಎಲೀಯನ ಮೇಲೆ ಇದ್ದುದರಿಂದ ಅವನು ತನ್ನ ಸಡಿಲವಾದ ಬಟ್ಟೆಗಳನ್ನು ನಡುಕಟ್ಟಿಕೊಂಡು ಇಜ್ರೆಯೇಲ್ ಪಟ್ಟಣದವರೆಗೂ ಅಹಾಬನಿಗೆ ಮುಂದಾಗಿ ಓಡಿದನು.


ಆಮೇಲೆ ನೀವು ನನ್ನನ್ನು ಕರೆದರೆ, ನಾನು ಉತ್ತರಿಸುವೆನು; ಅಥವಾ ನಾನು ಮಾತಾಡಿದರೆ, ನೀವು ಉತ್ತರಕೊಡಿರಿ.


ದೇವರು ನನ್ನನ್ನು ಕೊಂದರೂ, ನಾನು ದೇವರ ಮೇಲೆ ನಿರೀಕ್ಷೆಯಿಂದಿರುವೆನು; ನಾನು ನಿಶ್ಚಯವಾಗಿ ನನ್ನ ನಡತೆಯ ಒಳ್ಳೆಯತನವನ್ನು ದೇವರ ಮುಂದೆ ಸ್ಥಾಪಿಸುವೆನು.


“ತಾವು ನನಗೆ, ‘ನಾನು ನಿನ್ನನ್ನು ಪ್ರಶ್ನೆಮಾಡುವೆನು; ನೀನೇ ನನಗೆ ಉತ್ತರಕೊಡು,’ ಎಂದು ಅಪ್ಪಣೆ ಕೊಟ್ಟಿದ್ದೀರಿ.


ಆಕೆಯು ನಡುಕಟ್ಟಿ ಆಸಕ್ತಿಯಿಂದ ಕೆಲಸ ಮಾಡುತ್ತಾಳೆ. ತನ್ನ ಶಕ್ತಿಯುತ ತೋಳುಗಳಿಂದ ಕೆಲಸ ಮಾಡುತ್ತಾಳೆ.


“ದೇವರಿಗೆ ಅರಿವನ್ನು ಬೋಧಿಸಬಹುದೇ? ಉನ್ನತರಿಗೂ ನ್ಯಾಯತೀರಿಸುವುದು ದೇವರೇ ಅಲ್ಲವೇ?


“ಸರ್ವಶಕ್ತರಾದ ದೇವರೊಂದಿಗೇ ತಪ್ಪು ಕಂಡುಹಿಡಿಯುವ ನೀನು, ದೇವರಿಗೇ ಪಾಠ ಕಲಿಸಿಕೊಡುವೆಯಾ? ದೇವರ ಮೇಲೆಯೇ ಆರೋಪಿಸುವ ನೀನು ಈಗ ಉತ್ತರಕೊಡು!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು