Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:40 - ಕನ್ನಡ ಸಮಕಾಲಿಕ ಅನುವಾದ

40 ಪೊದೆಯಲ್ಲಿ ಹೊಂಚು ಹಾಕಿರುವ, ಪ್ರಾಯದ ಸಿಂಹಗಳ ಹಸಿವೆಯನ್ನು ತೀರಿಸುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅವುಗಳು ಗುಹೆಯಲ್ಲಿ ಕುಳಿತುಕೊಳ್ಳುವಾಗ, ಪೊದೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹಗಳ ಆಶೆಯನ್ನು ತೀರಿಸುವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಪೊದೆಯಲ್ಲಿ ಹೊಂಚುಕೂತಿರುವ ಯುವಸಿಂಹಕೆ ಹಸಿವನು ನೀಗಿಸಬಲ್ಲೆಯಾ ನೀನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಪೊದೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹಗಳ ಆಶೆಯನ್ನು ತೀರಿಸುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:40
6 ತಿಳಿವುಗಳ ಹೋಲಿಕೆ  

ಆಗ ಮೃಗಗಳು ಅಡಗುವ ಸ್ಥಳಕ್ಕೆ ಹೋಗುತ್ತವೆ, ತಮ್ಮ ಗುಹೆಗಳಲ್ಲಿ ಉಳಿಯುತ್ತವೆ.


ಅವರು ಸಿಂಹದ ಹಾಗೆಯೂ, ಸಿಂಹಣಿ ಹಾಗೆಯೂ ಬಾಗಿ ಮಲಗುತ್ತಾನೆ. ಅವನನ್ನು ಎಬ್ಬಿಸುವವನು ಯಾರು? “ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದ ಉಂಟಾಗಲಿ. ಶಪಿಸುವವನಿಗೆ ಶಾಪ ಉಂಟಾಗಲಿ.”


ಇಗೋ, ಜನಾಂಗವು ದೊಡ್ಡ ಸಿಂಹದ ಹಾಗೆ ಏಳುವುದು. ಸಿಂಹದ ಮರಿಯ ಹಾಗೆ ಎದ್ದೇಳುವುದು. ಅದು ಬೇಟೆಯನ್ನು ತಿಂದು, ಹತರಾದವರ ರಕ್ತವನ್ನು ಕುಡಿಯುವವರೆಗೆ ಮಲಗದು.”


ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಬೇಟೆಹಿಡಿದು ಮೇಲಕ್ಕೆ ಬಂದೆ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕುವವರು ಯಾರು?


ಹಸಿದ ಕಾಗೆ ಮರಿಗಳು ಆಹಾರ ಇಲ್ಲದೆ ಅಲೆದು, ದೇವರಿಗೆ ಮೊರೆ ಇಡುವಾಗ, ತಾಯಿ ಕಾಗೆಗೆ ಆಹಾರವನ್ನು ಒದಗಿಸುವವರು ಯಾರು?


ಸಿಂಹದ ಹಾಗೆ, ಮರೆಯಲ್ಲಿ ಹೊಂಚುಹಾಕುತ್ತಾನೆ; ಅಸಹಾಯಕರನ್ನು ಹಿಡಿಯಲು ಕಾಯುತ್ತಾನೆ ಕುಗ್ಗಿದವನನ್ನು ಹಿಡಿದೆಳೆದು ತನ್ನ ಬಲೆಯಲ್ಲಿ ಹಾಕುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು