Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:8 - ಕನ್ನಡ ಸಮಕಾಲಿಕ ಅನುವಾದ

8 “ಭೂಗರ್ಭವನ್ನು ನುಗ್ಗಿಕೊಂಡು ಬಂದ, ಸಮುದ್ರವನ್ನು ದ್ವಾರಗಳಿಂದ ಮುಚ್ಚಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸಮುದ್ರವು ಭೂಗರ್ಭವನ್ನು ಭೇದಿಸಿಕೊಂಡು ಬರಲು, ಅದರ ದ್ವಾರಗಳನ್ನು ಮುಚ್ಚಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಭೂಗರ್ಭವನ್ನು ಭೇದಿಸಿಕೊಂಡು ಬಂದ ಸಮುದ್ರವನು ದ್ವಾರಗಳಿಂದ ಬಂಧಿಸಿ ಮುಚ್ಚಿದವನಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸಮುದ್ರವು ಗರ್ಭವನ್ನು ಭೇದಿಸಿಕೊಂಡು ಬರಲು ಅದರ ದ್ವಾರಗಳನ್ನು ಮುಚ್ಚಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಯೋಬನೇ, ಭೂಮಿಯ ಗರ್ಭದೊಳಗಿಂದ ನುಗ್ಗಿ ಬರುವ ಸಮುದ್ರದ ನೀರನ್ನು ನಿಲ್ಲಿಸುವುದಕ್ಕಾಗಿ ಬಾಗಿಲುಗಳನ್ನು ಮುಚ್ಚಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:8
13 ತಿಳಿವುಗಳ ಹೋಲಿಕೆ  

ಆಗ ದೇವರು, “ಆಕಾಶದ ಕೆಳಗಿರುವ ನೀರು ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ, ಒಣ ನೆಲವು ಕಾಣಿಸಲಿ,” ಎಂದರು. ಅದು ಹಾಗೆಯೇ ಆಯಿತು.


ನೀವು ನನಗೆ ಭಯಪಡುವುದಿಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ಸಮ್ಮುಖದಲ್ಲಿ ನಡುಗುವುದಿಲ್ಲವೋ? ನಾನು ಮರಳನ್ನು ನಿತ್ಯ ನೇಮವಾಗಿ ಸಮುದ್ರಕ್ಕೆ, ಅದು ದಾಟಕೂಡದ ಹಾಗೆ ಮೇರೆಯಾಗಿಟ್ಟಿದ್ದೇನೆ. ಅದರ ತೆರೆಗಳು ಎದ್ದರೂ ದಡ ಮೀರಲಾರವು; ಘೋಷಿಸಿದರೂ ಅದನ್ನು ದಾಟಲಾರವು.


ಪ್ರವಾಹಗಳು ತನ್ನ ಆಜ್ಞೆಯನ್ನು ಮೀರದಂತೆ ಸಮುದ್ರಕ್ಕೆ ಅವರು ಮೇರೆಯನ್ನು ಮಾಡಿ ಭೂಮಿಯ ಅಸ್ತಿವಾರಗಳನ್ನು ನೇಮಿಸಿದಾಗ, ನಾನು ಅಲ್ಲಿ ಇದ್ದೆನು.


ಅವರು ಸಮುದ್ರದ ನೀರನ್ನು ಒಟ್ಟುಗೂಡಿಸುತ್ತಾರೆ; ಅವರು ಅಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾರೆ.


ನಾನು ಸಮುದ್ರಕ್ಕೆ ಮಿತಿಗಳನ್ನು ನಿಗದಿಪಡಿಸಿ, ಅಗುಳಿಗಳನ್ನೂ, ಬಾಗಿಲುಗಳನ್ನೂ ಇಟ್ಟೆನು.


ಹೀಗೆ ದೇವರು ವಿಸ್ತಾರವಾದ ಗುಮ್ಮಟವನ್ನು ಅದರ ಕೆಳಗಿದ್ದ ನೀರನ್ನೂ ಅದರ ಮೇಲಿದ್ದ ನೀರನ್ನೂ ಪ್ರತ್ಯೇಕಿಸಿದರು. ಅದು ಹಾಗೆಯೇ ಆಯಿತು.


ದೇವರು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ, ನೀರುಗಳನ್ನು ತಕ್ಕ ಪ್ರಮಾಣಗಳಿಂದ ಅಳತೆಮಾಡಿ,


ನಾನು ಸಮುದ್ರಕ್ಕೆ ಮೇಘವನ್ನು ವಸ್ತ್ರವನ್ನಾಗಿ ತೊಡಿಸಿ, ಅದಕ್ಕೆ ಕಾರ್ಗತ್ತಲನ್ನು ಉಡಿಸಿದೆನು.


ಜಲಗಾಧವು ವಸ್ತ್ರದ ಹಾಗೆ ಅದನ್ನು ಮುಚ್ಚಿದೆ; ಬೆಟ್ಟಗಳ ಮೇಲೆ ಜಲರಾಶಿಗಳು ನಿಂತವು.


ಯಾರು ಸ್ವರ್ಗಕ್ಕೆ ಹೋಗಿ ಕೆಳಗಿಳಿದು ಬಂದಿದ್ದಾರೆ? ಯಾರ ಕೈಗಳು ಗಾಳಿಯನ್ನು ಒಟ್ಟುಗೂಡಿಸಿವೆ? ಯಾರು ತಮ್ಮ ವಸ್ತ್ರದಲ್ಲಿ ಸಾಗರಗಳನ್ನು ಮೂಟೆಕಟ್ಟಿಕೊಂಡಿದ್ದಾರೆ? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿದವರು ಯಾರು? ಅವರ ಹೆಸರೇನು? ಅವರ ಮಗನ ಹೆಸರೇನು? ಖಂಡಿತವಾಗಿಯೂ ನಿಮಗೆ ಗೊತ್ತಿರಬೇಕು!


ಸಮುದ್ರದ ನೀರನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ, ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ, ಭೂಮಿಯ ಧೂಳನ್ನು ಅಳತೆಮಾಡಿ ತಿಳಿದುಕೊಂಡವನೂ, ಬೆಟ್ಟಗಳ ಮಟ್ಟವನ್ನೂ, ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನೂ ಯಾರು?


ಯೆಹೋವ ದೇವರ ಕೆಲಸಗಳನ್ನೂ, ಅಗಾಧ ಜಲದಲ್ಲಿ ದೇವರ ಅದ್ಭುತಗಳನ್ನೂ ಕಾಣುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು